ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡಲಿದ್ದಾರೆ. ಹಾಗೂ ಭಾರತದ ಪಾಕ್ ವಿರುದ್ಧ ನಡೆಸಿದ ಸೇನಾ ಕಾರ್ಯಚರಣೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರ ಸೇನೆಗೆ ಧನ್ಯವಾದ ತಿಳಿಸುವ ಸಾಧ್ಯತೆ ಕೂಡ ಇದೆ. ಸೇನೆಯ ಮುಂದಿನ ನಡೆ ಏನ್ ಹಾಗೂ ಭಾರತದ ಪಾಕ್ ವಿರುದ್ಧ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಕೂಡ ಮಾತನಾಡಬಹುದು

ದೆಹಲಿ, ಮೇ.12: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಕೂಡ ಮಾತನಾಡಬಹುದು. ಹಾಗೂ ಭಾರತದ ಪಾಕ್ ವಿರುದ್ಧ ನಡೆಸಿದ ಸೇನಾ ಕಾರ್ಯಚರಣೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಪ್ರಧಾನಿ ಮೋದಿ ಅವರು ಆಪರೇಷನ್ ಸಿಂದೂರ್ ನಂತರ ಮಾಡುತ್ತಿರುವ ಮೊದಲು ಭಾಷಣವಾಗಿದೆ. ಬಿಹಾರದಲ್ಲಿ ಆಪರೇಷನ್ ಸಿಂದೂರಕ್ಕೂ ಮುನ್ನ, ಯಾವುದೇ ಕಾರಣಕ್ಕೂ ಉಗ್ರರನ್ನು ಬಿಡುವುದಿಲ್ಲ. ಅವರ ನಾಶ ಮಾಡುವುದು ಖಂಡಿತ. ಅದರಲ್ಲೂ ಮೋದಿ ಅವರು ಸಾಮಾನ್ಯವಾಗಿ ಹಿಂದಿಯಲ್ಲೇ ಭಾಷಣ ಮಾಡೋದು, ಆದರೆ ಅಂದು ಜಗತ್ತಿನ ಎಲ್ಲ ದೇಶಗಳಿಗೆ ಸ್ಪಷ್ಟವಾಗಿ ತಿಳಿಸುವ ಉದ್ದೇಶದಿಂದ ಬಿಹಾರದ ಕಾರ್ಯಕ್ರಮದಲ್ಲಿ ಇಂಗ್ಲಿಷ್ನಲ್ಲಿ ಮಾತನಾಡಿದ್ದಾರೆ.
ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ ಮತ್ತು ಶಿಕ್ಷಿಸುತ್ತದೆ. ಉಗ್ರರನ್ನು ಹುಡುಕಿ ಹುಡುಕಿ ಹಿಡಿಯುತ್ತೇವೆ ಎನ್ನುವ ಮೂಲಕ ಪಾಕ್ಗೆ ಜತೆಗೆ ವಿಶ್ವಕ್ಕೂ ಸ್ಪಷ್ಟ ಸಂದೇಶವನ್ನು ಅಂದು ನೀಡಿದರು. ಆಪರೇಷನ್ ಸಿಂದೂರದ ಬಳಿಕ ಸೇನೆಯ ಜತೆಗೆದ ಗಂಭೀರ ಚರ್ಚೆಗಳನ್ನು ನಡೆಸಿದ್ದಾರೆ. ಮೂರು ಸೇನೆಗಳ ಮುಖ್ಯಸ್ಥರ ಜತೆಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಅನೇಕ ಅಧಿಕಾರಿಗಳೊಂದಿಗೆ ನಿರಂತರ ಸಮಾಲೋಚನೆಯನ್ನು ಮಾಡುತ್ತಿದ್ದರು. ನಂತರ ಪಾಕ್ ಮತ್ತು ಭಾರತ ನಡುವಿನ ಯುದ್ಧಕ್ಕೆ ಕದನ ವಿರಾಮ ಘೋಷಣೆಯನ್ನು ಮಾಡಿದ ನಂತರವು ಕೂಡ ಅವರು ಸಭೆಗಳನ್ನು ನಡೆಸಿ, ಮುಂದಿನ ನಿಲುವುಗಳೇನು ಎಂಬ ಬಗ್ಗೆಯೂ ಸ್ಪಷ್ಟವಾಗಿ ಹೇಳಿದರು. ಇದೀಗ ದೇಶದ ಜನರನ್ನು ಉದ್ದೇಶಿ ಮಾತನಾಡಲಿದ್ದಾರೆ.
ಮೋದಿ ಭಾಷಣದ ನೇರಪ್ರಸಾರ ಇಲ್ಲಿದೆ
ಇಂದು ಮೂರು ಸೇನೆಯ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಎಲ್ಲಾ ಸೈನಿಕ ನೆಲೆಗಳು ಹಾಗೂ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದು ಡಿಜಿಎಂಒ ರಾಜೀವ್ ಘಾಯ್ ತಿಳಿಸಿದ್ದಾರೆ.
ಇದನ್ನೂ ಓದಿ: ನಿಮ್ಮ ಮುಂದಿನ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸುತ್ತೇವೆ; ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ
ನಿಮ್ಮ ಮುಂದಿನ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸುತ್ತೇವೆ:
ಪಾಕಿಸ್ತಾನಕ್ಕೆ ಮೋದಿ ಸರ್ಕಾರ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದೆ. ‘ಭಾರತದ ವಿರುದ್ಧ ಭವಿಷ್ಯದಲ್ಲಿ ನಡೆಯುವ ಯಾವುದೇ ರೀತಿಯ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ’ ಎಂದು ಭಾರತ ಸರ್ಕಾರ ಪಾಕಿಸ್ತಾನಕ್ಕೆ ಇಂದು ಖಡಕ್ ವಾರ್ನಿಂಗ್ ನೀಡಿದೆ. ಪದೇಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಈ ಮೂಲಕ ಭಾರತ ಕೊನೆಯ ಎಚ್ಚರಿಕೆ ನೀಡಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:21 pm, Mon, 12 May 25