Morbi Bridge Collapse: ನವೆಂಬರ್ 1ರಂದು ಮೋರ್ಬಿ ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 31, 2022 | 3:10 PM

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 1 ರಂದು ಮೋರ್ಬಿ ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Morbi Bridge Collapse: ನವೆಂಬರ್ 1ರಂದು ಮೋರ್ಬಿ ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
ನರೇಂದ್ರ ಮೋದಿ
Follow us on

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 1 ರಂದು ಮೋರ್ಬಿ ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ತೂಗು ಸೇತುವೆ ಕುಸಿದು 133 ಜನರು ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ, ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ, ಸರ್ಕಾರವು ದುಃಖದ ಕುಟುಂಬಗಳೊಂದಿಗೆ ಎಲ್ಲ ರೀತಿಯಲ್ಲೂ ಸಾಹಯವಾಗಿ ಇದೆ. ಗುಜರಾತ್ ಸರ್ಕಾರ ನಿನ್ನೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕೇಂದ್ರವೂ ಕೂಡ ಇದಕ್ಕೆ ಸಹಕಾರವನ್ನು ನೀಡುತ್ತಿದೆ. ರಾಜ್ಯ ಸರ್ಕಾರಕ್ಕೆ ಎಲ್ಲ ನೆರವು ನೀಡಲಿ ಎಂದು ಹೇಳಿದ್ದಾರೆ.

ಇದನ್ನು ಓದಿ:  ಕೇಬಲ್ ಸೇತುವೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 141ಕ್ಕೆ ಏರಿಕೆ

ಕೆವಾಡಿಯಾದ ಏಕತಾ ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದರು. ಪ್ರಸ್ತುತ ಗುಜರಾತ್‌ನಲ್ಲಿರುವ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯವು ಟ್ವೀಟ್‌ನಲ್ಲಿ ತಿಳಿಸಿದೆ.

ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಮೋದಿ ಘೋಷಿಸಿದ್ದಾರೆ ಎಂದು ಪಿಎಂಒ ತಿಳಿಸಿದೆ.

ಅಪಘಾತದ ನಂತರ, ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಮೋದಿ ಸೋಮವಾರ ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ರೋಡ್ ಶೋ ಅನ್ನು ರದ್ದುಗೊಳಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅವರು ಅಹಮದಾಬಾದ್‌ನಲ್ಲಿ ಕೆಲವು ರೈಲ್ವೆ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

Published On - 3:10 pm, Mon, 31 October 22