AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಾರಣಾಸಿಯ ಮಹಿಳೆಯರೊಂದಿಗೆ “ವಿಶೇಷ ಸಂವಾದ” ನಡೆಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ (ಸೆ.23) ಉತ್ತರಪ್ರದೇಶದ ವಾರಣಾಸಿಯ (Varanasi) ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದ ಮೈದಾನದಲ್ಲಿ ಮಹಿಳೆರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಳೆ ವಾರಣಾಸಿಯ ಮಹಿಳೆಯರೊಂದಿಗೆ ವಿಶೇಷ ಸಂವಾದ ನಡೆಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 22, 2023 | 6:30 PM

ವಾರಣಾಸಿ, ಸೆ.22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ (ಸೆ.23) ಉತ್ತರಪ್ರದೇಶದ ವಾರಣಾಸಿಯ (Varanasi) ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದ ಮೈದಾನದಲ್ಲಿ ಮಹಿಳೆರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ನಾರಿ ಶಕ್ತಿ ವಂದನ್ ಅಧಿನಿಯಂ’ (ಮಹಿಳಾ ಮೀಸಲಾತಿ ಮಸೂದೆ) ಅಂಗೀಕಾರವಾದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆಯುತ್ತಿರುವ ಈ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ವಿಶೇಷ ಎಂದು ವಿಭಾಗೀಯ ಆಯುಕ್ತ (Divisional Commissioner) ಕೌಶಲ್ ರಾಜ್ ಶರ್ಮಾ ಹೇಳಿದ್ದಾರೆ.

ವರದಿಗಳ ಪ್ರಕಾರ ಮೋದಿ ಅವರು ಉತ್ತರಪ್ರದೇಶದಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅದರಲ್ಲಿ ಈ ಕಾರ್ಯಕ್ರಮವು ಒಂದು. ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಹಾಕಿದ ನಂತರ ಸಾರ್ವಜನಿಕವಾಗಿ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ. ಇನ್ನು ಮಹಿಳೆಯರ ಜತೆಗಿನ ವಿಶೇಷ ಸಂವಾದ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಉಪಸ್ಥಿತರಿರುತ್ತಾರೆ.

ಇದನ್ನೂ ಓದಿ:ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಅಲ್ಲಿಂದ ಪ್ರಧಾನಿ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ರುದ್ರಾಕ್ಷ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಜತೆಗೆ ಅಟಲ್ ವಸತಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Fri, 22 September 23