Narendra Modi Brother: ಪ್ರಧಾನಿ ನರೇಂದ್ರ ಮೋದಿ ಸಹೋದರ ಆಸ್ಪತ್ರೆಗೆ ದಾಖಲು
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ.
ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ. ಪ್ರಹ್ಲಾದ್ ಮೋದಿ ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿಯವರ ಸಹೋದರ ಮತ್ತು ಅವರು ಪ್ರಯಾಣಿಸುತ್ತಿದ್ದ ಕಾರು ಕರ್ನಾಟಕದ ಮೈಸೂರಿನಲ್ಲಿ ಅಪಘಾತಕ್ಕೀಡಾದ ನಂತರ ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಪತ್ನಿ, ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಮರ್ಸಿಡಿಸ್ ಬೆಂಜ್ ಎಸ್‌ಯುವಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
Published On - 11:30 am, Tue, 28 February 23