ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿಯಲ್ಲಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿಯಲ್ಲಿ ಮಾತುಕತೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 10, 2023 | 3:36 PM

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Prime Minister Benjamin Netanyahu) ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಭಯೋತ್ಪಾದಕರ ದಾಳಿಯಿಂದ ಅನೇಕ ಸಾವು-ನೋವುಗಳನ್ನು ಅನುಭವಿಸಿರುವ ಇಸ್ರೇಲ್​​ಗೆ ಪ್ರಧಾನಿ ಮೋದಿ ಅವರು ಧೈರ್ಯ ತುಂಬಿದರು. ಈ ಬಗ್ಗೆ ಪ್ರಧಾನಿ ಮೋದಿ ಅವರು X (ಈ ಹಿಂದಿನ ಟ್ವಿಟರ್​​) ನಲ್ಲಿ ಟ್ವೀಟ್​​ ಮಾಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಸ್ರೇಲ್​​ನ ಸದ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು, ಈ ಸಂಕಷ್ಟದ ಸಮಯದಲ್ಲಿ ಭಾರತೀಯರು ಇಸ್ರೇಲ್​​ ಜತೆಗೆ ನಿಂತಿದ್ದಾರೆ. ಭಾರತವು ಎಲ್ಲ ರೀತಿ ಭಯೋತ್ಪಾದನೆಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಎಕ್ಸ್​ನಲ್ಲಿ​​ ಮೋದಿ ಬರೆದುಕೊಂಡಿದ್ದಾರೆ.

ಇಸ್ರೇಲ್​​ ಮೇಲೆ ಶನಿವಾರದಂದು ಹಮಾಸ್​​ ಭಯೋತ್ಪಾದಕರು ನಡೆಸಿದ ದಾಳಿಯ ಬಗ್ಗೆ ಪ್ರಧಾನಿ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಮೋದಿ ಬರೆದುಕೊಂಡಿದರು. ಈ ವಿಚಾರ ಕೇಳಿ ನನಗೆ ತುಂಬಾ ಅಘಾತವಾಗಿದೆ. ಈ ದಾಳಿಯಿಂದ ಸಾವನ್ನಪ್ಪಿರುವ ಜನರ ಕುಟುಂಬಕ್ಕೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರನ್ನು ಪ್ರಾರ್ಥಿಸುತ್ತೇವೆ. ಈ ಸಂಕಷ್ಟದ ಸಮಯದದಲ್ಲಿ ಇಸ್ರೇಲ್​​ ಜತೆಗೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ

I thank Prime Minister @netanyahu for his phone call and providing an update on the ongoing situation. People of India stand firmly with Israel in this difficult hour. India strongly and unequivocally condemns terrorism in all its forms and manifestations.

— Narendra Modi (@narendramodi) October 10, 2023

ಶನಿವಾರದಂದು ಇಸ್ರೇಲ್​ನಲ್ಲಿ ಯುದ್ಧ ಶುರುವಾಗಿದ್ದು, ಗಾಜಾದಿಂದ 5000 ರಾಕೆಟ್​ಗಳನ್ನು ಉಡಾವಣೆ ಮಾಡಲಾಗಿತ್ತು. ಇದಾದ ಬಳಿಕ ಇಸ್ರೇಲ್ ಯುದ್ಧದ ಪರಿಸ್ಥಿತಿಯನ್ನು ಘೋಷಣೆ ಮಾಡಿತ್ತು. ಪ್ಯಾಲೇಸ್ಟಿನಿಯನ್ ಇಸ್ಲಾಮಿಸ್ಟ್ ಚಳುವಳಿ ಹಮಾಸ್ ಶನಿವಾರ ಮುಂಜಾನೆ ಇಸ್ರೇಲ್ ಮೇಲೆ ತನ್ನ ಅತಿದೊಡ್ಡ ದಾಳಿಯನ್ನು ಪ್ರಾರಂಭಿಸಿತು. ಈ ಹಿನ್ನೆಲೆಯಲ್ಲಿ ಇಸ್ರೇಲ್​ನಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರ ವಹಿಸಲು ಸೂಚಿಸಿದ್ದರು. ಈ ದಾಳಿಯಲ್ಲಿ ಇಸ್ರೇಲ್​​ನ 900 ಜನ ಸಾವನ್ನಪ್ಪಿದ್ದು, 2,600 ಜನರಿಗೆ ಗಾಯವಾಗಿದ. ಇನ್ನು ಇಸ್ರೇಲ್ ವಾಯುದಾಳಿ ಮಾಡಿ 1600ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಕೊಂದಿದ್ದು, ಅನೇಕರಿಗೆ ಗಾಯಗಳಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:58 pm, Tue, 10 October 23

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?