Mann Ki Baat ಸ್ಕ್ರೀನ್ ಟೈಮ್ ಹೆಚ್ಚಾಗುತ್ತಿರುವ ಕಾಲದಲ್ಲಿ ಪುಸ್ತಕದ ಓದು ಜಾಸ್ತಿಯಾಗಲಿ: ನರೇಂದ್ರ ಮೋದಿ

ಇಂದು ಪ್ರಸಾರವಾದ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಮೋದಿ ಮನ್ ಕೀ ಬಾತ್ ಸರ್ಕಾರದ ಕೆಲಸವನ್ನು ಎತ್ತಿ ತೋರಿಸುವುದಲ್ಲ, ಅದನ್ನು ಸುಲಭವಾಗಿ ಮಾಡಬಹುದಿತ್ತು. ಬದಲಾಗಿ, ಇದು ತಳಮಟ್ಟದ ಬದಲಾವಣೆ ಮಾಡುವವರ ಸಾಮೂಹಿಕ ಪ್ರಯತ್ನಗಳ ಬಗ್ಗೆ ಆಗಿದೆ ಎಂದು ಹೇಳಿದ್ದಾರೆ.

Mann Ki Baat ಸ್ಕ್ರೀನ್ ಟೈಮ್ ಹೆಚ್ಚಾಗುತ್ತಿರುವ ಕಾಲದಲ್ಲಿ ಪುಸ್ತಕದ ಓದು ಜಾಸ್ತಿಯಾಗಲಿ: ನರೇಂದ್ರ ಮೋದಿ
ಮೋದಿಯವರ ಮನದ ಮಾತು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 26, 2021 | 11:53 AM

ದೆಹಲಿ: ಮನ್ ಕೀ ಬಾತ್ (Mann Ki Baat)  ಕಾರ್ಯಕ್ರಮದ 84ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ಕೊವಿಡ್ -19 (Covid-19)ಸಾಂಕ್ರಾಮಿಕದ ಮಧ್ಯೆ ಕುಟುಂಬವಾಗಿ ಒಟ್ಟಿಗೆ ನಿಂತಿರುವ ಭಾರತವನ್ನು  ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ವರ್ಷದ ಮಾಸಿಕ ರೇಡಿಯೊ ಕಾರ್ಯಕ್ರಮದ ಕೊನೆಯ ಸಂಚಿಕೆಯಾಗಿರುವ ಮನ್ ಕೀಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ನವೆಂಬರ್ 28 ರಂದು ಪ್ರಸಾರವಾದ ಮನ್ ಕೀ ಬಾತ್‌ನ ಕೊನೆಯ ಸಂಚಿಕೆಯಲ್ಲಿ, 1971 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ವಿಜಯ ಸಾಧಿಸಿದ 50 ನೇ ವಾರ್ಷಿಕೋತ್ಸವದ ಮೊದಲು ಸಶಸ್ತ್ರ ಪಡೆಗಳನ್ನು ಪ್ರಧಾನಿ ಶ್ಲಾಘಿಸಿದರು. ಇಂದು ಪ್ರಸಾರವಾದ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಮೋದಿ ಮನ್ ಕೀ ಬಾತ್ ಸರ್ಕಾರದ ಕೆಲಸವನ್ನು ಎತ್ತಿ ತೋರಿಸುವುದಲ್ಲ, ಅದನ್ನು ಸುಲಭವಾಗಿ ಮಾಡಬಹುದಿತ್ತು. ಬದಲಾಗಿ, ಇದು ತಳಮಟ್ಟದ ಬದಲಾವಣೆ ಮಾಡುವವರ ಸಾಮೂಹಿಕ ಪ್ರಯತ್ನಗಳ ಬಗ್ಗೆ ಆಗಿದೆ ಎಂದು ಹೇಳಿದ್ದಾರೆ.

ಒಮಿಕ್ರಾನ್ ಭಯದ ನಡುವೆ ಎಚ್ಚರಿಕೆ ವಹಿಸಿ ಹೊಸ ಕೊವಿಡ್ -19 ರೂಪಾಂತರವಾಗಿ ಒಮಿಕ್ರಾನ್ ಭಾರತವನ್ನು ಪ್ರವೇಶಿಸುತ್ತಿದ್ದಂತೆ, ನಾವು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಎಲ್ಲಾ ಸಮಯದಲ್ಲೂ ಕೊವಿಡ್ -19-ಸೂಕ್ತ ನಡವಳಿಕೆಯನ್ನು ಅನುಸರಿಸುತ್ತಿರಬೇಕು. ಹೊಸ ವರ್ಷಕ್ಕೆ ನಾವು ಸಿದ್ಧರಾಗಿರುವಾಗ ನಾವು ನಮ್ಮ ಪ್ರಯತ್ನಗಳನ್ನು ಹೆಚ್ಚಿಸಲು ಪ್ರತಿಜ್ಞೆ ಮಾಡಬೇಕು. ಕೊರೊನಾ ವಿರುದ್ಧ ಹೋರಾಡಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮನ್ ಕೀ ಬಾತ್ ಭಾಷಣದಲ್ಲಿ ಕ್ಯಾಪ್ಟನ್ ವರುಣ್ ಸಿಂಗ್​​ಗೆ ಸೆಲ್ಯೂಟ್ ಮಾಡಿದ ಪ್ರಧಾನಿ ಮೋದಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹಲವು ದಿನಗಳ ಕಾಲ ಧೈರ್ಯದಿಂದ ಸಾವಿನೊಂದಿಗೆ ಹೋರಾಡಿದರು ಆದರೆ ದುರದೃಷ್ಟವಶಾತ್ ಅವರು ನಿಧನರಾದರು. ಆಗಸ್ಟ್ 2021 ರಲ್ಲಿ ಅವರಿಗೆ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಯಿತು. ಶಾಲೆಯ ಪ್ರಾಂಶುಪಾಲರಿಗೆ ವರುಣ್ ಬರೆದ ಪತ್ರವನ್ನೂ ಮೋದಿ ಉಲ್ಲೇಖಿಸಿದ್ದಾರೆ.

ಸ್ಕ್ರೀನ್ ಟೈಮ್ ಹೆಚ್ಚಾಗುತ್ತಿರುವ ಯುಗದಲ್ಲಿ ಪುಸ್ತಕಗಳನ್ನು ಓದುವುದನ್ನು ಜನಪ್ರಿಯಗೊಳಿಸೋಣ “ನಾವು ಓದುವುದನ್ನು ಹೆಚ್ಚು ಜನಪ್ರಿಯಗೊಳಿಸೋಣ. ಈ ವರ್ಷ ನೀವು ಯಾವ ಪುಸ್ತಕಗಳನ್ನು ಓದಿದ್ದೀರಿ ಎಂಬುದನ್ನು ಹಂಚಿಕೊಳ್ಳಲು ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ಈ ರೀತಿಯಾಗಿ ನೀವು ಇತರರಿಗೆ 2022 ರ ಓದುವ ಪಟ್ಟಿಯನ್ನು ಮಾಡಲು ಸಹಾಯ ಮಾಡುತ್ತೀರಿ, ”ಎಂದು ಮೋದಿ ಹೇಳಿದ್ದಾರೆ.

ಪ್ರಸ್ತುತ ಕಾಲದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವ ಕುತೂಹಲ ಹೆಚ್ಚಿದೆ ಇಂದು ಭಾರತೀಯ ಸಂಸ್ಕೃತಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವ ಕುತೂಹಲ ಹೆಚ್ಚಿದೆ. ವಿವಿಧ ರಾಷ್ಟ್ರಗಳ ಜನರು ಕೇವಲ ಕಲಿಯಲು ಆಸಕ್ತಿ ಹೊಂದಿರುವುದಿಲ್ಲ ಆದರೆ ಅದನ್ನು ಮತ್ತಷ್ಟು ಉತ್ತೇಜಿಸಲು ಸಹಾಯ ಮಾಡುತ್ತಿದ್ದಾರೆ.

 ‘SAAF- Water ‘ ಸ್ಟಾರ್ಟಪ್​​ಗೆ ಮೋದಿ ಶ್ಲಾಘನೆ ‘SAAF-Water’ ಎಂಬುದು ಒಂದು ಸ್ಟಾರ್ಟಪ್ ಆಗಿದ್ದು, ಜನರಿಗೆ ಕೃತಕ ಬುದ್ಧಿಮತ್ತೆ ಮತ್ತು IoT(Internet of Things) ಸಹಾಯದಿಂದ ಶುದ್ಧ ಕುಡಿಯುವ ನೀರನ್ನು ನಕ್ಷೆ ಮಾಡಲು ಮತ್ತು ಗುರುತಿಸಲು ಸಹಾಯ ಮಾಡುತ್ತಿದೆ, ಇದು ತಂತ್ರಜ್ಞಾನದ ಸಹಾಯದಿಂದ ಜನರಿಗೆ ಶುದ್ಧ ನೀರನ್ನು ಕುಡಿಯಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನಿ ಮೋದಿ  ಹೇಳಿದ್ದಾರೆ.

ನಾವು ಹೊಸತನವನ್ನು ಮಾಡೋಣ, ಹೊಸದನ್ನು ಮಾಡೋಣ

ಮುಂದಿನ ಮನ್ ಕೀ ಬಾತ್ 2022 ರಲ್ಲಿ ನಡೆಯಲಿದೆ. ನಾವು ಹೊಸತನವನ್ನು ಮಾಡೋಣ, ಹೊಸ ಕೆಲಸಗಳನ್ನು ಮಾಡೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ನಮ್ಮ ಸಹ ಭಾರತೀಯರ ಸಬಲೀಕರಣವನ್ನು ಯಾವಾಗಲೂ ಮನಸ್ಸಿನಲ್ಲಿಟ್ಟುಕೊಳ್ಳೋಣ ಎಂದು  ಹೇಳಿ  ಪ್ರಧಾನಿ ಮೋದಿ ಮನದ ಮಾತು ಕಾರ್ಯಕ್ರಮ ಮುಕ್ತಾಯಗೊಳಿಸಿದ್ದಾರೆ.

ಇದನ್ನೂ ಓದಿ:  Omicron ಭಾರತದಲ್ಲಿ ಒಂದೇ ದಿನ 6987 ಕೊವಿಡ್ ಪ್ರಕರಣ ಪತ್ತೆ; ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 422ಕ್ಕೆ ಏರಿಕೆ

Published On - 11:12 am, Sun, 26 December 21

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು