ಎರಡನೇ ಹಂತದಲ್ಲಿ.. ಪ್ರಧಾನಿ ನರೇಂದ್ರ ಮೋದಿಗೂ ಕೊರೊನಾ ಲಸಿಕೆ!

ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ.

ಎರಡನೇ ಹಂತದಲ್ಲಿ.. ಪ್ರಧಾನಿ ನರೇಂದ್ರ ಮೋದಿಗೂ ಕೊರೊನಾ ಲಸಿಕೆ!
ಪ್ರಾತಿನಿ
Follow us
Skanda
|

Updated on: Jan 21, 2021 | 11:56 AM

ದೆಹಲಿ: ದೇಶದಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ವಿತರಣೆ ನಿರ್ದಿಷ್ಟ ಸಮಯದಲ್ಲಿ ನಿರೀಕ್ಷಿತ ಗುರಿ ತಲುಪುತ್ತಿಲ್ಲ. ಹಲವೆಡೆ ಲಸಿಕೆ ಸ್ವೀಕರಿಸಲು ಹೆಸರು ನೋಂದಾಯಿಸಿಕೊಂಡಿದ್ದ ಸ್ವಯಂ ಸೇವಕರು ಲಸಿಕೆ ಪಡೆಯಲು ಮುಂದಾಗುತ್ತಿಲ್ಲ. ಏತನ್ಮಧ್ಯೆ ಬೇರೆ ದೇಶಗಳ ಮುಖಂಡರು ಮೊದಲು ತಾವೇ ಲಸಿಕೆ ಸ್ವೀಕರಿಸಿ ಜನರಿಗೆ ಧೈರ್ಯ ತುಂಬಿದ್ದಾರೆ, ಭಾರತದಲ್ಲಿ ಹೀಗೇಕೆ ಆಗುತ್ತಿಲ್ಲ? ಎಂಬ ಪ್ರಶ್ನೆಗಳೂ ಮೂಡಿದ್ದವು.

ಇದೀಗ ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ. ಅವರೊಂದಿಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸಹ ಕೊರೊನಾ ಲಸಿಕೆ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜನವರಿ 16ರಂದು ಮೊದಲ ಹಂತದ ಕೊರೊನಾ ಲಸಿಕೆ ವಿತರಣೆ ಆರಂಭಿಸಿದ ನಂತರ ದೇಶದ ಜನರಲ್ಲಿ ಮನವಿ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆಯನ್ನು ಕಡೆಗಣಿಸದಂತೆ ಮನವಿ ಮಾಡಿದ್ದರು. ಸದ್ಯ ಕೇಂದ್ರಾರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಇದುವರೆಗೆ ಮೊದಲ ಹಂತದ ಕೊರೊನಾ ಲಸಿಕೆ ವಿತರಣೆಯಲ್ಲಿ ದೇಶಾದ್ಯಂತ 1,91,181 ಮಂದಿ ಕೊರೊನಾ ಲಸಿಕೆ ಸ್ವೀಕರಿಸಿದ್ದಾರೆ. ಎರಡನೇ ಹಂತದ ಲಸಿಕೆ ವಿತರಣೆ ಮುಗಿಯುವ ವೇಳೆ ದೇಶದ 30 ಕೋಟಿ ಜನರಿಗೆ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ.

ವ್ಯಾಕ್ಸಿನ್ ವಿಚಾರದಲ್ಲಿ ಸರ್ಕಾರದ ಲೆಕ್ಕಾಚಾರ ಉಲ್ಟಾ.. ಹೆಲ್ತ್ ವಾರಿಯರ್ಸ್‌ಗೆ ಬಂದ ವ್ಯಾಕ್ಸಿನ್ ಫ್ರಂಟ್‌ಲೈನ್ ವಾರಿಯರ್ಸ್‌ಗೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್