AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

Karnataka Rajyotsava 2021: ಕನ್ನಡ ರಾಜ್ಯೋತ್ಸವ ಎಂದರೆ ಇಡೀ ವಿಶ್ವದಲ್ಲಿರುವ ಎಲ್ಲ ಕನ್ನಡಿಗರಿಗೂ ಒಂದು ರೀತಿ ಸಂಭ್ರಮ ಮತ್ತು ಹೆಮ್ಮೆ. ಕರ್ನಾಟಕ ರಾಜ್ಯ ಉದಯಿಸಿ ಇಂದಿಗೆ 66 ವರ್ಷ. ಈ ಸಂಭ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ, ಕನ್ನಡ ಬಾವುಟ
TV9 Web
| Edited By: |

Updated on:Nov 01, 2021 | 9:26 AM

Share

ಇಂದು 66ನೇ ಕನ್ನಡ ರಾಜ್ಯೋತ್ಸವ (Karnataka Rajyotsava) ಹಿನ್ನೆಲೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ನೇತೃತ್ವದಲ್ಲಿ ಸರಳ ರಾಜ್ಯೋತ್ಸವ ಸಮಾರಂಭ ನಡೆಯಲಿದೆ. ಕೊವಿಡ್ ನಿಯಮದಂತೆ ಸಾಮಾಜಿಕ ಅಂತರ ಕಾಪಾಡಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. 9 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡಿ, ನಂತರ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಕನ್ನಡ ರಾಜ್ಯೋತ್ಸವ ಎಂದರೆ ಇಡೀ ವಿಶ್ವದಲ್ಲಿರುವ ಎಲ್ಲ ಕನ್ನಡಿಗರಿಗೂ ಒಂದು ರೀತಿ ಸಂಭ್ರಮ ಮತ್ತು ಹೆಮ್ಮೆ. ಕರ್ನಾಟಕ ರಾಜ್ಯ ಉದಯಿಸಿ ಇಂದಿಗೆ 66 ವರ್ಷ. ಈ ಸಂಭ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ವಿಶೇಷ ಛಾಪು ಮೂಡಿಸಿದೆ. ಕರ್ನಾಟಕ ರಾಜ್ಯ ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ರಾಜ್ಯ ಯಶಸ್ಸಿನ ಮುಂಚೂಣಿಯಲ್ಲಿರಲಿ ಅಂತ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀವ್ ಮಾಡಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ. ಕನ್ನಡಿಗರ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ

ಕನ್ನಡ ರಾಜ್ಯೋತ್ಸವ 2021: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

Karnataka Rajyotsava 2021: ಕನ್ನಡಕ್ಕಿದೆ ಪ್ರಾದೇಶಿಕತೆಯ ಛಾಪು; ಆಯಾ ಸ್ಥಳ, ಜನಾಂಗಕ್ಕೆ ಅನುಗುಣವಾಗಿ ಬದಲಾಗುತ್ತದೆ ಆಡುನುಡಿ

Published On - 8:53 am, Mon, 1 November 21