ಜೀವನದ ಬಗ್ಗೆ ಉತ್ಸಾಹವನ್ನು ಹೊಂದಿದ್ದ ವ್ಯಕ್ತಿ ಮಿಸ್ತ್ರಿ; ಗಣ್ಯರಿಂದ ಸೈರಸ್ ಮಿಸ್ತ್ರಿ ನಿಧನಕ್ಕೆ ಸಂತಾಪ
Cyrus Mistry ಮಿಸ್ತ್ರಿ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ದೆಹಲಿ: ಟಾಟಾ ಸನ್ಸ್‌ನ (Tata Sons) ಮಾಜಿ ಅಧ್ಯಕ್ಷ 54 ವರ್ಷದ ಸೈರಸ್ ಮಿಸ್ತ್ರಿ (Cyrus Mistry) ಇಂದು ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ಒಕ್ಕೂಟದ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಮಿಸ್ತ್ರಿ ಅವರಿಗೆ ಸಂತಾಪ ಸಲ್ಲಿಸಿ ಇಷ್ಟು ಚಿಕ್ಕ ವಯಸ್ಸಿನಲ್ಲಿ ಅವರು ನಿಧನರಾಗಿರುವುದು ನಿಜಕ್ಕೂ ದುರಂತ ಎಂದು ಹೇಳಿದರು. ಸೈರಸ್ ಮಿಸ್ತ್ರಿಯವರ ಹಠಾತ್ ಮತ್ತು ಅಕಾಲಿಕ ನಿಧನದಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ಅವರು ಜೀವನದ ಬಗ್ಗೆ ಉತ್ಸಾಹವನ್ನು ಹೊಂದಿದ್ದರು. ಅವರು ಇಷ್ಟು ಚಿಕ್ಕ ವಯಸ್ಸಿನಲ್ಲಿ ನಿಧನರಾಗಿರುವುದು ನಿಜಕ್ಕೂ ದುರಂತವಾಗಿದೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ ಮತ್ತು ಪ್ರಾರ್ಥನೆಗಳು ಎಂದು ಚಂದ್ರಶೇಖರನ್ ಹೇಳಿದ್ದಾರೆ. ಮುಂಬೈನಿಂದ 100 ಕಿಲೋಮೀಟರ್ ದೂರದಲ್ಲಿರುವ ಪಾಲ್ಘರ್‌ನಲ್ಲಿ ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಮಿಸ್ತ್ರಿ ಇತರ ಮೂವರೊಂದಿಗೆ ಗುಜರಾತ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಪಾಲ್ಘರ್ ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿ ಬಿ ಪಾಟೀಲ್ ಹೇಳಿದ್ದಾರೆ.
ಮಿಸ್ತ್ರಿ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ರತನ್ ಟಾಟಾ ನಂತರ ಸೈರಸ್ ಮಿಸ್ತ್ರಿ ಅವರು 2016 ರಲ್ಲಿ ಟಾಟಾ ಸನ್ಸ್‌ನ ಅಧ್ಯಕ್ಷ ಸ್ಥಾನದಿಂದ ಹೊರಹಾಕಲ್ಪಟ್ಟರು.
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಸೇರಿದಂತೆ ಹಲವಾರು ಪ್ರಮುಖ ರಾಜಕಾರಣಿಗಳು ಮತ್ತು ಮಿಸ್ತ್ರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
The untimely demise of Shri Cyrus Mistry is shocking. He was a promising business leader who believed in India’s economic prowess. His passing away is a big loss to the world of commerce and industry. Condolences to his family and friends. May his soul rest in peace.
— Narendra Modi (@narendramodi) September 4, 2022
ಸೈರಸ್ ಮಿಸ್ತ್ರಿಯವರ ಅಕಾಲಿಕ ನಿಧನದಿಂದ ದಿಗಿಲುಗೊಂಡಿದ್ದೇನೆ . ಅವರು ಭಾರತದ ಆರ್ಥಿಕ ಬಗ್ಗೆ ನಂಬಿಕೆಯಿಡುವ ಭರವಸೆಯ ವ್ಯಾಪಾರ ನಾಯಕರಾಗಿದ್ದರು. ಅವರ ನಿಧನದಿಂದ ವಾಣಿಜ್ಯ ಮತ್ತು ಉದ್ಯಮ ಲೋಕಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ. ಅವರ ಆತ್ಮಕೆ ಶಾಂತಿ ಸಿಗಲಿ. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Saddened by the tragic news of the demise of former Chairman of Tata Sons, Cyrus Mistry.
He was amongst the brightest business minds of the country, who made a significant contribution to India’s growth story.
My heartfelt condolences to his family, friends and admirers.
— Rahul Gandhi (@RahulGandhi) September 4, 2022
ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ನಿಧನದ ದುರಂತ ಸುದ್ದಿಯಿಂದ ದುಃಖವಾಗಿದೆ. ಅವರ ಭಾರತದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ ದೇಶದ ಉತ್ತಮ ವ್ಯಾಪಾರ ಮನಸ್ಸುಗಳಲ್ಲಿ ಒಬ್ಬರು.ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ
Published On - 7:26 pm, Sun, 4 September 22