ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ

Narendra Modi: ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ.

ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ
ಕ್ಯಾಬಿನೆಟ್​ ಸಭೆ
Follow us
TV9 Web
| Updated By: Lakshmi Hegde

Updated on: Jul 14, 2021 | 3:13 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಕೇಂದ್ರ ಸಂಪುಟದ ಸಚಿವರೊಂದಿಗೆ ಭೌತಿಕವಾಗಿಯೇ ಸಭೆ ನಡೆಸಿದರೆ. ಕೊವಿಡ್​ 19 ಕಾರಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಚಿವ ಸಂಪುಟದ ಸಭೆ ನಡೆಯುತ್ತಿತ್ತು. ಜು.7ರಂದು ಹೊಸದಾಗಿ ಕ್ಯಾಬಿನೆಟ್​ ವಿಸ್ತರಣೆಯಾಗಿದ್ದು, 43 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಜು.8ರಂದು ತಮ್ಮ ಸಂಪುಟದ ನೂತನ ಸಚಿವರೊಂದಿಗೆ ಮಾತುಕತೆ ನಡೆಸಿದ್ದ ಪ್ರಧಾನಿ ಮೋದಿ ಕೆಲವು ಸಲಹೆಗಳನ್ನು ನೀಡಿದ್ದರು.

ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ. ಹಾಗೇ, ಇಂದು ಸಂಜೆ 4ಗಂಟೆಗೆ ತಮ್ಮ ಮಂತ್ರಿ ಮಂಡಲವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆ ನಡೆಸಿದ್ದಾರೆ ಮತ್ತು ಮಂತ್ರಿಮಂಡಲವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಕ್ಯಾಬಿನೆಟ್ ಸಮಿತಿಗಳನ್ನು ಪುನರ್ ರಚಿಸಿದ್ದಾರೆ. ಆರ್ಥಿಕ ವ್ಯವಹಾರಗಳ ಪ್ರಬಲ ಕ್ಯಾಬಿನೆಟ್ ಸಮಿತಿಯನ್ನು ಕಿರಿದಾಗಿಸಿದ್ದು ಮತ್ತು ರಾಜಕೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಗೆ ಹೊಸಬರನ್ನು ತರಲಾಗಿದೆ. ಪ್ರಧಾನಿ ಮೋದಿ ನೇತೃತ್ವದ ನಿರ್ಣಾಯಕ ಸಿಸಿಪಿಎದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಗಿರಿರಾಜ್ ಸಿಂಗ್, ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಸಂಪುಟ ಸಮಿತಿ ಪುನರ್ ರಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ; ಸ್ಮೃತಿ ಇರಾನಿ, ಸೋನೊವಾಲ್​ಗೆ ಸ್ಥಾನ

Prime Minister Narendra Modi chairs in person Union Cabinet meet Today

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ