ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ, ನಿರ್ಧಾರಗಳು ಏನೇನು?

| Updated By: ರಮೇಶ್ ಬಿ. ಜವಳಗೇರಾ

Updated on: Sep 18, 2023 | 11:52 PM

ಅದಾನಿ ಸಂಸ್ಥೆಗಳು, ರೈತರ ಸಂಕಷ್ಟ, ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲು ವಿಪಕ್ಷ ನಾಯಕರು ನಿರ್ಧರಿಸಿದ್ದಾರೆ. ಈಗಾಗಲೇ ರಾಜ್ಯಸಭೆಯಲ್ಲಿ ಮಂಡಿಸಲಾಗಿರುವ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಯನ್ನು ವಿರೋಧಿಸಲು ಮೈತ್ರಿಕೂಟ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ, ನಿರ್ಧಾರಗಳು ಏನೇನು?
ನರೇಂದ್ರ ಮೋದಿ
Follow us on

ದೆಹಲಿ ಸೆಪ್ಟೆಂಬರ್ 18: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಇಂದು (ಸೋಮವಾರ) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಅನುಮೋದನೆ ದೊರೆತಿದೆ ಎಂದು ತಿಳಿದುಬಂದಿದ್ದು, ನಾಳೆಯಿಂದ (ಮಂಗಳವಾರ) ಹೊಸ ಸಂಸತ್ತಿನಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲೇ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಸೋಮವಾರ ಸಂಜೆ ಸಂಸತ್​​ ವಿಶೇಷ ಅಧಿವೇಶನಕ್ಕೆ (Parliament special session) ಸಂಬಂಧಿಸಿದಂತೆ ಪ್ರಮುಖ ಕೇಂದ್ರ ಸಚಿವ ಸಂಪುಟ ಸಭೆಯ (Union Cabinet meeting )ಅಧ್ಯಕ್ಷತೆ ವಹಿಸಿದ್ದರು. ಈ ಸಭೆ 100 ನಿಮಿಷಕ್ಕೂ ಹೆಚ್ಚು ಕಾಲ ನಡೆಯಿತು. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಪ್ರಲ್ಹಾದ್ ಜೋಶಿ ಮತ್ತು ಇತರ ಸಚಿವರು ಸಂಪುಟ ಸಭೆಗೂ ಮುನ್ನ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯ ಅಜೆಂಡಾ ಇನ್ನೂ ಬಹಿರಂಗವಾಗಿಲ್ಲ.

ಈ ಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಕುರಿತು ಚರ್ಚೆ ನಡೆದಿದೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿದ್ದಾರೆ. ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿ ಇದೆ. ಆದರೆ ಈ ಬಾರಿ ಅದು ನಡೆಯುವುದಿಲ್ಲ.  ಆದಾಗ್ಯೂ,  ಸಂಪುಟದಲ್ಲಿ ಕೈಗೊಂಡ ನಿರ್ಣಯಗಳ ಮಾಹಿತಿಯನ್ನು ನೇರವಾಗಿ ಸಂಸತ್​​ನಲ್ಲೇ ತಿಳಿಸಲಾಗುವುದು ಎಂದು ಮೂಲಗಳು ಹೇಳಿವೆ.

ಸೋಮವಾರ ಬೆಳಿಗ್ಗೆ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ನಾಯಕರು ಐದು ದಿನಗಳ ಅಧಿವೇಶನದಲ್ಲಿ ಪಕ್ಷಗಳ ನಡುವೆ ಸಮನ್ವಯವನ್ನು ಮುಂದುವರಿಸಲು ನಿರ್ಧರಿಸಿದರು. ಬೆಲೆ ಏರಿಕೆ, ನಿರುದ್ಯೋಗ, ಮಣಿಪುರ ಹಿಂಸಾಚಾರ ಮತ್ತು ಗಡಿಯಲ್ಲಿನ ಚೀನಾದ ಉಲ್ಲಂಘನೆಯ ವಿಷಯಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ವಿಪಕ್ಷ ನಿರ್ಧರಿಸಿತ್ತು.


ಅದಾನಿ ಸಂಸ್ಥೆಗಳು, ರೈತರ ಸಂಕಷ್ಟ, ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲು ಅವರು ನಿರ್ಧರಿಸಿದ್ದಾರೆ. ಈಗಾಗಲೇ ರಾಜ್ಯಸಭೆಯಲ್ಲಿ ಮಂಡಿಸಲಾಗಿರುವ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಯನ್ನು ವಿರೋಧಿಸಲು ಮೈತ್ರಿಕೂಟ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದ ಸಭೆಯಲ್ಲಿ ಕಾಂಗ್ರೆಸ್, ಟಿಎಂಸಿ, ಆರ್‌ಜೆಡಿ, ಎನ್‌ಸಿಪಿ, ಎಡಪಕ್ಷಗಳು, ಜೆಎಂಎಂ, ಸಮಾಜವಾದಿ ಪಕ್ಷ, ಡಿಎಂ ಮತ್ತು ವಿಸಿಕೆ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಅಜೆಂಡಾ ಸ್ಪಷ್ಟಪಡಿಸದೇ ಇರುವ ಬಗ್ಗೆ ಮತ್ತು ಚರ್ಚೆಗೆ ಬಯಸಿದ ವಿಷಯಗಳ ಪಟ್ಟಿಯನ್ನು ಪ್ರಸ್ತಾಪಿಸುವ ಬಗ್ಗೆ ಮಾಜಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಮೋದಿಗೆ ಪತ್ರ ಬರೆದಿದ್ದರು.

ಇದಕ್ಕೂ ಮೊದಲು, ಈ ಸಂಸತ್ ಅಧಿವೇಶನ ಅವಧಿ ಕಡಿಮೆ ಇರಬಹುದು. ಆದರೆ ಇದು ಈ ಸಂದರ್ಭಕ್ಕೆ ದೊಡ್ಡದಾಗಿದೆ. ಇದು “ಐತಿಹಾಸಿಕ ನಿರ್ಧಾರ” ಎಂದು ಮೋದಿ ಹೇಳಿದರು.

ಐದು ದಿನಗಳ ಅಧಿವೇಶನಕ್ಕೆ ಮುನ್ನ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ, ಸಂಸತ್ ಮಂಗಳವಾರ ಹೊಸ ಕಟ್ಟಡಕ್ಕೆ ತೆರಳಲಿದೆ ಎಂದು ಮೋದಿ ಹೇಳಿದ್ದಾರೆ. ಹಳೆಯ ನ್ಯೂನತೆಗಳನ್ನು ಹೊರಹಾಕುವಾಗ ಹೊಸ ಉತ್ಸಾಹದಿಂದ ಕಲಾಪಕ್ಕೆ ಸೇರುವಂತೆ ಅವರು ಸಂಸದರನ್ನು ಕೇಳಿಕೊಂಡರು.

ಇದನ್ನೂ ಓದಿ: ಪ್ರಧಾನಿ ಮೋದಿಯವರ ಮುಂದಿನ ಜನ್ಮದಿನಕ್ಕೆ ಇನ್ನೂ ದೊಡ್ಡ ಕೊಡುಗೆ ನೀಡುತ್ತೇವೆ: ಫಾಕ್ಸ್​ಕಾನ್ ಭರವಸೆ

ರೋನಾಧೋನಾ” (ಅಳುವುದಕ್ಕೆ) ಗೆ ಸಾಕಷ್ಟು ಸಮಯ ಉಳಿದಿದೆ ಎಂದು ಅಧಿವೇಶನದ ಬಗ್ಗೆ ಸರ್ಕಾರವನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ಮೋದಿ ಕಿಡಿಕಾರಿದ್ದಾರೆ.

ಇದಕ್ಕೂ ಮುನ್ನ ಭಾನುವಾರ, ಜೋಶಿ ಅವರು ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಸಕ್ರಿಯ ಸಹಕಾರ ಮತ್ತು ಬೆಂಬಲಕ್ಕಾಗಿ ಎಲ್ಲಾ ಪಕ್ಷಗಳನ್ನು ವಿನಂತಿಸಿದರು. ಸಂಸತ್ತಿನ ಎಲ್ಲಾ ರಾಜಕೀಯ ಪಕ್ಷಗಳ ನಾಯಕರ ಸಭೆಯಲ್ಲಿ ವಿವಿಧ ಸಚಿವರು ಮತ್ತು 34 ಪಕ್ಷಗಳ 51 ನಾಯಕರು ಭಾಗವಹಿಸಿದ್ದರು.ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಕೂಡ ಸರ್ವಪಕ್ಷ ಸಭೆಗೆ ಪ್ರತಿಕ್ರಿಯಿಸಿ, ಈ ಸರ್ಕಾರ ಸಂಸತ್ ಕಲಾಪ ಗೌಪ್ಯವಾಗಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Mon, 18 September 23