Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

ತೌಕ್ತೆ ಚಂಡಮಾರುತಕ್ಕೀಡಾದ ರಾಜ್ಯಗಳಲ್ಲಿ ಜಾಸ್ತಿ ಅಪಾಯವಿದ್ದ ಕಡೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 17, 2021 | 9:11 PM

ದೇಶದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಇಂದು ರಾತ್ರಿ 11 ಗಂಟೆಯೊಳಗೆ ಈ ಸೈಕ್ಲೋನ್ ಪೂರ್ವ ದಿಯುದಲ್ಲಿರುವ ಪೋರ್​ಬಂದರ್​ ಮತ್ತು ಮಹುವಾ​ ನಡುವೆ ಗುಜರಾತ್​ ಕರಾವಳಿಯನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಗಾಳಿಯ ವೇಗ ತಾಸಿಗೆ 155ರಿಂದ-165 ಕಿಮೀ ಇರಲಿದೆ ಎಂದೂ ಅಂದಾಜಿಸಿದೆ. ಗುಜರಾತ್​ನ ಅಹ್ಮದಾಬಾದ್​ನಲ್ಲಿ ಈಗಾಗಲೇ ಚಂಡಮಾರುತದ ಪ್ರಭಾವದಿಂದ ಅತಿಯಾದ ಮಳೆ ಶುರುವಾಗಿದೆ. ಇಲ್ಲಿನ ಏರ್​ಪೋರ್ಟ್​ ನಾಳೆ ಮುಂಜಾನೆ 5ಗಂಟೆವರೆಗೂ ಮುಚ್ಚಿರಲಿದೆ.

ಇನ್ನು ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿದೆ. ಇಂದು ರಾತ್ರಿ 10ಗಂಟೆವರೆಗೂ ಏರ್​ಪೋರ್ಟ್ ಬಂದ್ ಇರಲಿದೆ. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ತೌಕ್ತೆ ಚಂಡಮಾರುತಕ್ಕೀಡಾದ ರಾಜ್ಯಗಳಲ್ಲಿ ಜಾಸ್ತಿ ಅಪಾಯವಿದ್ದ ಕಡೆ ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ, ಗುಜರಾತ್, ಗೋವಾ, ದಮನ್​ ಮತ್ತು ದಿಯು-ದಮನ್​​ಗಳ ಲೆಫ್ಟಿನೆಂಟ್ ಗವರ್ನರ್​ ಜತೆ ತೌಕ್ತೆ ಚಂಡಮಾರುತದಿಂದಾಗುವ ಹಾನಿ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರದ ಕೆಲವು ಸಚಿವರೂ, ಅಧಿಕಾರಿಗಳೂ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ