ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಹರ್ಯಾಣದಲ್ಲಿ 2,600 ಹಾಸಿಗೆಗಳಿರುವ ಅಮೃತಾ ಖಾಸಗಿ ಆಸ್ಪತ್ರೆ ಉದ್ಘಾಟಿಸಿದ್ದಾರೆ. 130 ಎಕರೆ ವಿಶಾಲವಾದ ಕ್ಯಾಂಪಸ್‌ನಲ್ಲಿ ನಿರ್ಮಿಸಲಾದ ಆಸ್ಪತ್ರೆಯು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಆರೋಗ್ಯ ಮೂಲಸೌಕರ್ಯಕ್ಕೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸುಸ್ಥಿರತೆಯನ್ನು ನಿರ್ಮಿಸಲಾದ ಅತ್ಯಾಧುನಿಕ ಅಮೃತಾ ಆಸ್ಪತ್ರೆ, ಮೀಸಲಾದ ಏಳು ಅಂತಸ್ತಿನ ಸಂಶೋಧನಾ ಬ್ಲಾಕ್ ಅನ್ನು ಹೊಂದಿದೆ. ಇದನ್ನು ಮಾತಾ ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಆರು ವರ್ಷಗಳ ಅವಧಿಯಲ್ಲಿ ನಿರ್ಮಿಸಲಾಗಿದೆ.
Amrita Hospital in Faridabad will provide state-of-the-art healthcare facilities to people in NCR region. https://t.co/JnUnYU3m93
— Narendra Modi (@narendramodi) August 24, 2022
Glimpses from Faridabad, where the Amrita Hospital has been inaugurated. @Amritanandamayi pic.twitter.com/LtwTXpS4hN
— Narendra Modi (@narendramodi) August 24, 2022
ಹರ್ಯಾಣದ ಫರಿದಾಬಾದ್‌ನಲ್ಲಿ ನಡೆದ ಅಮೃತಾ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳ ಮೂಲಕ ಆರೋಗ್ಯ ಸೇವೆ ವಿತರಣೆಯು PPP ಮಾದರಿಯ ಒಂದು ಉದಾಹರಣೆಯಾಗಿದೆ. ಈ ಮಾದರಿಯು ತಳಮಟ್ಟದ ಜನರನ್ನು ತಲುಪಲು ಸಹಾಯ ಮಾಡುತ್ತದೆ ಮತ್ತು ದೂರದ ಭಾಗಗಳಲ್ಲಿ ಪ್ರಗತಿಯನನ್ನು ಖಾತ್ರಿಗೊಳಿಸುತ್ತದೆ. ಇಂದು ದೇಶವು ತನ್ನ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರಗಳನ್ನು ಪರಿವರ್ತಿಸುವ ಮಿಷನ್ ಮೋಡ್‌ನಲ್ಲಿದೆ ಎಂದಿದ್ದಾರೆ. ಮಾತಾ ಅಮೃತಾನಂದಮಯಿ ಅವರನ್ನು ಹೊಗಳಿದ ಮೋದಿ, ಅಮ್ಮ ಪ್ರೀತಿ ಮತ್ತು ತ್ಯಾಗದ ಮೂರ್ತರೂಪ. ಅವರು ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದಿದ್ದಾರೆ.
ಪ್ರಸ್ತುತ ಸಮಾರಂಭದಲ್ಲಿ ಹರ್ಯಾಣ ಗವರ್ನರ್ ಬಂಡಾರು ದತ್ತಾತ್ರೇಯ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.
ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಆರೋಗ್ಯ ಮತ್ತು ಆಧ್ಯಾತ್ಮಿಕತೆ ನಿಕಟ ಸಂಬಂಧ ಹೊಂದಿರುವ ದೇಶವಾಗಿದೆ. ಕೋವಿಡ್-19 ಯಶಸ್ವಿ ಆಧ್ಯಾತ್ಮಿಕ-ಖಾಸಗಿ ಪಾಲುದಾರಿಕೆಗೆ ಒಂದು ಪರಿಪೂರ್ಣ ಉದಾಹರಣೆಯಾಗಿದೆ. ಇದು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕಾರ್ಯಗತಗೊಳಿಸಲು ಸಹಾಯ ಮಾಡಿದೆ. ತಂತ್ರಜ್ಞಾನ ಮತ್ತು ಆಧುನೀಕರಣದ ಸಂಯೋಜನೆಯು ಆರೋಗ್ಯ ಕ್ಷೇತ್ರದಲ್ಲಿ ದೇಶದ ಪ್ರಗತಿಗೆ ಕಾರಣವಾಗುತ್ತದೆ ಎಂದು ಹೇಳಿದ ಪ್ರಧಾನಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳನ್ನು ಮಿಷನ್ ಮೋಡ್‌ನಲ್ಲಿ ಪರಿವರ್ತಿಸಲು ಸರ್ಕಾರಗಳು ಮತ್ತು ಇತರರು ಮುಂದೆ ಬರುವುದನ್ನು ಖಚಿತಪಡಿಸಿಕೊಳ್ಳಲು ಭಾರತ ಪ್ರಯತ್ನಿಸುತ್ತಿದೆ ಎಂದಿದ್ದಾರೆ.
Published On - 1:11 pm, Wed, 24 August 22