AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adi Mahotsav: ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕಪದ್ಧತಿ, ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವ ಆದಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಜೊತೆಗಿದ್ದರು.

Adi Mahotsav: ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕಪದ್ಧತಿ, ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವ  ಆದಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ
ಆದಿ ಮಹೋತ್ಸವ
ನಯನಾ ರಾಜೀವ್
|

Updated on: Feb 16, 2023 | 11:31 AM

Share

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಜೊತೆಗಿದ್ದರು. ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರಿಗೆ ಪ್ರಧಾನಿ ಮೋದಿ ಇಲ್ಲಿ ಗೌರವ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸಲಾಗುತ್ತಿದೆ. ಬುಡಕಟ್ಟು ಸಮುದಾಯದವರು ನಿರ್ಮಿಸಿರುವ ಶ್ರೀ ಅನ್ನ ಕಾರ್ಯಕ್ರಮದ ಕೇಂದ್ರ ಬಿಂದುವಾಗಲಿದೆ.

ದೇಶದ ಬುಡಕಟ್ಟು ಜನಾಂಗದ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ನಿರಂತರವಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಅವರು ದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಬುಡಕಟ್ಟು ಸಮುದಾಯದ ಕೊಡುಗೆಗೆ ಗೌರವವನ್ನು ನೀಡುತ್ತಿದ್ದಾರೆ.

ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನ (TRIFED) ವಾರ್ಷಿಕ ಉಪಕ್ರಮವಾಗಿದೆ.

ಮತ್ತಷ್ಟು ಓದಿ: Aadi Mahotsav: ದೆಹಲಿಯಲ್ಲಿಂದು ಪ್ರಧಾನಿ ಮೋದಿಯಿಂದ ಆದಿ ಮಹೋತ್ಸವ ಉದ್ಘಾಟನೆ

ಈ ವರ್ಷ ಫೆಬ್ರವರಿ 16 ರಿಂದ 27 ರವರೆಗೆ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವು 200 ಸ್ಟಾಲ್‌ಗಳ ಮೂಲಕ ದೇಶಾದ್ಯಂತ ಬುಡಕಟ್ಟು ಸಮುದಾಯಗಳ ಶ್ರೀಮಂತ ಮತ್ತು ವೈವಿಧ್ಯಮಯ ಪರಂಪರೆಯನ್ನು ಪ್ರದರ್ಶಿಸುತ್ತದೆ. ಉತ್ಸವದಲ್ಲಿ ಸುಮಾರು ಒಂದು ಸಾವಿರ ಬುಡಕಟ್ಟು ಕುಶಲಕರ್ಮಿಗಳು ಭಾಗವಹಿಸಲಿದ್ದಾರೆ.

ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಯ ನೋಟ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಪ್ರಕಾರ, ಬುಡಕಟ್ಟು ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಮತ್ತು ಅವರ ಕಲೆ ಮತ್ತು ಸಂಸ್ಕೃತಿಗೆ ಮನ್ನಣೆ ನೀಡಲು ಈ ಕಾರ್ಯಕ್ರಮವನ್ನು ಆಯೀಸಲಾಗಿದೆ. ಕರಕುಶಲ ವಸ್ತುಗಳು, ಕೈಮಗ್ಗಗಳು, ಮಡಿಕೆಗಳು, ಆಭರಣಗಳು ಇತ್ಯಾದಿ ಆಕರ್ಷಣೆಯ ಕೇಂದ್ರವಾಗುತ್ತವೆ. ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕಪದ್ಧತಿ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವುದೇ ಆದಿ ಮಹೋತ್ಸವದ ಉದ್ದೇಶವಾಗಿದೆ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್