Adi Mahotsav: ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕಪದ್ಧತಿ, ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವ ಆದಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

|

Updated on: Feb 16, 2023 | 11:31 AM

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಜೊತೆಗಿದ್ದರು.

Adi Mahotsav: ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕಪದ್ಧತಿ, ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವ  ಆದಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ
ಆದಿ ಮಹೋತ್ಸವ
Follow us on

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಜೊತೆಗಿದ್ದರು. ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರಿಗೆ ಪ್ರಧಾನಿ ಮೋದಿ ಇಲ್ಲಿ ಗೌರವ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸಲಾಗುತ್ತಿದೆ. ಬುಡಕಟ್ಟು ಸಮುದಾಯದವರು ನಿರ್ಮಿಸಿರುವ ಶ್ರೀ ಅನ್ನ ಕಾರ್ಯಕ್ರಮದ ಕೇಂದ್ರ ಬಿಂದುವಾಗಲಿದೆ.

ದೇಶದ ಬುಡಕಟ್ಟು ಜನಾಂಗದ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ನಿರಂತರವಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಅವರು ದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಬುಡಕಟ್ಟು ಸಮುದಾಯದ ಕೊಡುಗೆಗೆ ಗೌರವವನ್ನು ನೀಡುತ್ತಿದ್ದಾರೆ.

ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನ (TRIFED) ವಾರ್ಷಿಕ ಉಪಕ್ರಮವಾಗಿದೆ.

ಮತ್ತಷ್ಟು ಓದಿ: Aadi Mahotsav: ದೆಹಲಿಯಲ್ಲಿಂದು ಪ್ರಧಾನಿ ಮೋದಿಯಿಂದ ಆದಿ ಮಹೋತ್ಸವ ಉದ್ಘಾಟನೆ

ಈ ವರ್ಷ ಫೆಬ್ರವರಿ 16 ರಿಂದ 27 ರವರೆಗೆ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವು 200 ಸ್ಟಾಲ್‌ಗಳ ಮೂಲಕ ದೇಶಾದ್ಯಂತ ಬುಡಕಟ್ಟು ಸಮುದಾಯಗಳ ಶ್ರೀಮಂತ ಮತ್ತು ವೈವಿಧ್ಯಮಯ ಪರಂಪರೆಯನ್ನು ಪ್ರದರ್ಶಿಸುತ್ತದೆ. ಉತ್ಸವದಲ್ಲಿ ಸುಮಾರು ಒಂದು ಸಾವಿರ ಬುಡಕಟ್ಟು ಕುಶಲಕರ್ಮಿಗಳು ಭಾಗವಹಿಸಲಿದ್ದಾರೆ.

ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಯ ನೋಟ
ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಪ್ರಕಾರ, ಬುಡಕಟ್ಟು ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಮತ್ತು ಅವರ ಕಲೆ ಮತ್ತು ಸಂಸ್ಕೃತಿಗೆ ಮನ್ನಣೆ ನೀಡಲು ಈ ಕಾರ್ಯಕ್ರಮವನ್ನು ಆಯೀಸಲಾಗಿದೆ. ಕರಕುಶಲ ವಸ್ತುಗಳು, ಕೈಮಗ್ಗಗಳು, ಮಡಿಕೆಗಳು, ಆಭರಣಗಳು ಇತ್ಯಾದಿ ಆಕರ್ಷಣೆಯ ಕೇಂದ್ರವಾಗುತ್ತವೆ. ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕಪದ್ಧತಿ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವುದೇ ಆದಿ ಮಹೋತ್ಸವದ ಉದ್ದೇಶವಾಗಿದೆ.