India China Border: ಕೇಂದ್ರ ಸರ್ಕಾರ ಚೀನಾಕ್ಕೆ ನಮ್ಮ ಪ್ರದೇಶ ಬಿಟ್ಟುಕೊಟ್ಟಿದೆ -ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ

India China Border: ಚೀನಾಗೆ ತಿರುಗೇಟು ನೀಡಲು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಆಗುತ್ತಿಲ್ಲ. ಫಿಂಗರ್ 4 ಪ್ರದೇಶವನ್ನು ಆಕ್ರಮಿಸಲು ಚೀನಾಕ್ಕೆ ಅವಕಾಶ ಮಾಡಿಕೊಟ್ಟಂತಾಗಿದ್ದು, ಈ ಬಗ್ಗೆ ಕೇಂದ್ರ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

India China Border: ಕೇಂದ್ರ ಸರ್ಕಾರ ಚೀನಾಕ್ಕೆ ನಮ್ಮ ಪ್ರದೇಶ ಬಿಟ್ಟುಕೊಟ್ಟಿದೆ -ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ
ಹುತಾತ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅಪಚಾರ ಎದಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Feb 12, 2021 | 12:08 PM

ದೆಹಲಿ: ನಮ್ಮ ಯೋಧರ ತ್ಯಾಗಕ್ಕೆ ಪ್ರಧಾನಿ ಮೋದಿ ದ್ರೋಹ ಬಗೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿನ್ನೆ ರಾಜ್ಯಸಭೆಯಲ್ಲಿ ಪಾಂಗಾಂಗ್ ತ್ಸೋ (disengagement in Ladakh)  ಸರೋವರದಿಂದ ಎರಡೂ ದೇಶಗಳು ಸೈನ್ಯ ಮತ್ತು ಯುದ್ಧ ಟ್ಯಾಂಕ್​ಗಳನ್ನು ಹಿಂಪಡೆಯುವ (Ladakh standoff)) ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಭಾರತೀಯ ಸೇನೆ ಲಡಾಕ್​ನ ಫಿಂಗರ್​ 4 ಬಳಿ ಬೀಡುಬಿಡಬೇಕಿತ್ತು. ಆದರೆ, ನಿನ್ನೆ ಕೇಂದ್ರ ರಕ್ಷಣಾ ಸಚಿವರ ಹೇಳಿಕೆಯ ಪ್ರಕಾರ ಫಿಂಗರ್ 4ರಿಂದ ಫಿಂಗರ್ 3 ಗೆ ಭಾರತೀಯ ಸೇನೆ ಮರಳಿದೆ. ಫಿಂಗರ್ 4ರ ಪ್ರದೇಶದಿಂದ ಸೇನೆಯನ್ನು ಹಿಂಪಡೆದದ್ದು ಚೀನಾಕ್ಕೆ ಆ ಪ್ರದೇಶವನ್ನು ಬಿಟ್ಟುಕೊಟ್ಟಂತಾಗಿದೆ. (India China border standoff)   ಇದು ಹುತಾತ್ಮ ಸೈನಿಕರಿಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅಪಚಾರ ಎಸಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚೀನಾಗೆ ತಿರುಗೇಟು ನೀಡಲು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಆಗುತ್ತಿಲ್ಲ. ಫಿಂಗರ್ 4 ಪ್ರದೇಶವನ್ನು ಆಕ್ರಮಿಸಲು ಚೀನಾಕ್ಕೆ ಅವಕಾಶ ಮಾಡಿಕೊಟ್ಟಂತಾಗಿದ್ದು, ಈ ಬಗ್ಗೆ ಕೇಂದ್ರ ಉತ್ತರ ನೀಡಲಿ ಎಂದು ಅವರು ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ರಕ್ಷಣಾ ಸಚಿವರು ರಾಜ್ಯಸಭೆಯಲ್ಲಿ ಘೋಷಿಸಿದ್ದೇನು? ಪಾಂಗಾಂಗ್ ಸರೋವರದ ಉತ್ತರ ದಡದಿಂದ ಸೇನೆ ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಒಪ್ಪಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿನ್ನೆ ಬೆಳಗ್ಗೆ ರಾಜ್ಯಸಭೆಯಲ್ಲಿ ಘೋಷಿಸಿದ್ದರು. ಈ ಬೆನ್ನಲ್ಲೇ ಭಾರತ ಮತ್ತು ಚೀನಾದ ಯುದ್ಧ ಟ್ಯಾಂಕ್​ಗಳು ಪಾಂಗಾಂಗ್ ಸರೋವರದ ದಡದಿಂದ ಹಿಂದೆ ಸರಿಯುತ್ತಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

2020ರ ಜೂನ್ 15ರಂದು ಎರಡೂ ದೇಶಗಳ ಸೈನಿಕರ ನಡುವೆ ನಡೆದ ಕಾದಾಟದಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಅನಂತರ ಪಾಂಗೊಂಗ್ ಸರೋವರದ ದಡಗಳಲ್ಲಿ ಭಾರತ-ಚೀನಾ ಎರಡೂ ದೇಶಗಳು ಯುದ್ಧ ಟ್ಯಾಂಕ್​ ಸೇರಿ ಸೈನಿಕರ ಜಮಾವಣೆ ಮಾಡಿದ್ದವು. ಹೀಗಾಗಿ ಪಾಂಗಾಂಗ್ ಸರೋವರದ ಸುತ್ತಮುತ್ತ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ: Ladakh standoff: ಭಾರತ-ಚೀನಾ ಶೀತಲ ಸಮರ; ಪ್ಯಾಂಗಾಂಗ್ ಸರೋವರದಿಂದ ಮರಳುತ್ತಿರುವ ಯುದ್ಧ ಟ್ಯಾಂಕ್​ಗಳು

ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಒಪ್ಪಂದಗಳನ್ನು ಹೊಂದಲು ಭಾರತ ಸಿದ್ಧವಾಗಿದೆ. ಆ ಮೂಲಕ ಶಾಂತಿ ಕಾಪಾಡಲು ಭಾರತ ಬದ್ಧವಾಗಿದೆ. ಗಡಿ ವಿವಾದವನ್ನ ಮಾತುಕತೆ ಮೂಲಕ ಮಾತ್ರ ಬಗೆಹರಿಸಿಕೊಳ್ಳಬಹುದು. ಗಡಿಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದರಿಂದ ಬಾಂಧವ್ಯ ವೃದ್ದಿಯಾಗಲಿದೆ ಎಂದು ಅವರು ಚೀನಾದ ಆಕ್ರಮಣಶೀಲ ನಡೆಗಳ ಕುರಿತು ದೇಶದ ನಿಲುವನ್ನು ರಾಜ್ಯಸಭೆಯಲ್ಲಿ ತಿಳಿಸಿದ್ದರು.

ಭಾರತೀಯ ಸೇನೆ ಈವರೆಗೆ ಎಲ್ಲ ಸವಾಲುಗಳನ್ನ ಎದುರಿಸಿದೆ. 2020 ರಲ್ಲಿ ಚೀನಾ ಭಾರತದ ಭೂಮಿ ಅತಿಕ್ರಮಿಸಿದ್ದು, ಆವರೆಗಿನ ಯಥಾಸ್ಥಿತಿಯನ್ನ ಬದಲಾಯಿಸಲು ಚೀನಾ ಯತ್ನಿಸಬಾರದು ಎಂದು ಅವರು ಚೀನಾಕ್ಕೆ ಎಚ್ಚರಿಕೆ ನೀಡಿದರು. ಜತೆಗೆ, 2020 ರ ಏಪ್ರಿಲ್​ಗಿಂತ ಮುಂಚಿನ ಸ್ಥಿತಿ ಬರುವ ಭರವಸೆಯಿದೆ. ಇಡೀ ಸದನ ದೇಶದ ಸಾರ್ವಭೌಮತ್ವದ ವಿಷಯದಲ್ಲಿ ಒಂದೇ ನಿಲುವು ಹೊಂದಿರಬೇಕು. ಸೇನೆಯ ಶೌರ್ಯವನ್ನು ಪ್ರಶಂಸಿಸಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ನಿಲುವು ತಳೆದಿದ್ದರೂ ಸೇನೆಯ ವಿಷಯದಲ್ಲಿ ದೇಶದ ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟು ಪ್ರದರ್ಶಿಸಬೇಕು. ಸೇನೆಗೆ ಬೆಂಬಲವಾಗಿ ನಿಲ್ಲಬೇಕು ಎಂದು ರಾಜ್ಯಸಭೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದರು.

ಇದನ್ನೂ ಓದಿ: India China Border Conflict | ಗಡಿ ಸಂಘರ್ಷ ಕೊನೆ, 9 ಹಂತದ ಮಾತುಕತೆ ಬಳಿಕ ಗಡಿಯಿಂದ ಕಾಲ್ತೆಗೆಯಲು ನಿರ್ಧರಿಸಿದ ಚೀನಾ: ರಕ್ಷಣಾ ಸಚಿವ ರಾಜನಾಥ್ ಸಿಂಗ್