AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Visit Ukraine: ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​​​ 23ಕ್ಕೆ ಉಕ್ರೇನ್ ಭೇಟಿ ಸಾಧ್ಯತೆ

volodymyr zelenskyy and narendra modi: ಪ್ರಧಾನಿ ಮೋದಿ ಅವರು ಆಗಸ್ಟ್​​​ 23ಕ್ಕೆ ಉಕ್ರೇನ್​​​ಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಭೇಟಿಯ ವೇಳೆ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಸಂದರ್ಭದಲ್ಲಿ ಮೋದಿ ಅವರು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಹತ್ವ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

PM Modi Visit Ukraine: ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​​​ 23ಕ್ಕೆ ಉಕ್ರೇನ್ ಭೇಟಿ ಸಾಧ್ಯತೆ
ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jul 27, 2024 | 10:54 AM

Share

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧ ಪೀಡಿತ ಉಕ್ರೇನ್​​ಗೆ ಆಗಸ್ಟ್​​​ 23ರಂದು ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಉಕ್ರೇನ್ ಭೇಟಿ ವೇಳೆ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿ ಹೇಳಿದೆ. ರಷ್ಯಾ ಮತ್ತು ಉಕ್ರೇನ್​​ ಯುದ್ಧದ ನಂತರ ಪ್ರಧಾನಿ ಮೋದಿ ಅವರ ಇದು ಮೊದಲ ಭೇಟಿಯಾಗಿದೆ.

ಪ್ರಧಾನಿ ಮೋದಿ ಅವರು ಜುಲೈ 8-9ರಂದು ರಷ್ಯಾದ ಮಾಸ್ಕೋಗೆ ಭೇಟಿ ನೀಡಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ನಂತರ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ಮೋದಿ ಅವರನ್ನು 22ನೇ ಭಾರತ ಮತ್ತು ರಷ್ಯಾ ಶೃಂಗಸಭೆಗೆ ಆಹ್ವಾನಿಸಿದ್ದರು. ಈ ನಿಟ್ಟಿನಲ್ಲಿ  ಮೋದಿ ರಷ್ಯಾಕ್ಕೆ ಭೇಟಿ ನೀಡಿದರು.

ಇನ್ನು ಈ ಉಭಯ ನಾಯಕರ ಭೇಟಿಯ ಸಂದರ್ಭದಲ್ಲಿ ಉಕ್ರೇನ್​​​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ಭೇಟಿಯನ್ನು ವಿರೋಧಿಸಿದರು. ಹಾಗೂ ತಮ್ಮ ಎಕ್ಸ್​​ ಖಾತೆಯಲ್ಲಿ ರಷ್ಯಾ ದಾಳಿಯ ಬಗ್ಗೆ ಉಲ್ಲೇಖಿಸಿದ್ದಾರೆ. ಕೈವ್‌ನ ಮಕ್ಕಳ ಆಸ್ಪತ್ರೆಯ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 37 ಜನ ಸಾವನ್ನಪ್ಪಿದ್ದಾರೆ. 170 ಜನ ಗಾಯಗೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ

ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯದ ಸಂಕೇತವಾಗಿ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರಿಗೆ ನೀಡಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ಮೋದಿ ಅವರ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ರಷ್ಯಾದ ಪ್ರಾಮಾಣಿಕ ಕೃತಜ್ಞತೆಗೆ ಸಾಕ್ಷಿಯಾಗಿದೆ ಎಂದು ಪುಟಿನ್ ಹೇಳಿದರು. ಇದೀಗ ಇದರ ನಡುವೆ ಪ್ರಧಾನಿ ಮೋದಿ ಅವರು ಉಕ್ರೇನ್​​ಗೆ ಭೇಟಿ ನೀಡುತ್ತಿರುವುದು ಮಹತ್ವದ ವಿಚಾರವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ