AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಉನ್ನತ ಮಟ್ಟದ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮೋದಿ; ಇಂದು ಸಂಜೆ 5.30ಕ್ಕೆ ವಿಡಿಯೊ ಸಂವಾದ

Narendra Modi: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವೆಬ್‌ಸೈಟ್‌ನಲ್ಲಿ ಈ ಚರ್ಚೆ ನೇರ ಪ್ರಸಾರವಾಗಲಿದ್ದು ಈ ಚರ್ಚೆ ಕಡಲ ಅಪರಾಧ ಮತ್ತು ಅಭದ್ರತೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಕಡಲ ವಲಯದಲ್ಲಿ ಸಮನ್ವಯವನ್ನು ಬಲಪಡಿಸುತ್ತದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಉನ್ನತ ಮಟ್ಟದ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮೋದಿ; ಇಂದು ಸಂಜೆ 5.30ಕ್ಕೆ ವಿಡಿಯೊ ಸಂವಾದ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 09, 2021 | 1:14 PM

Share

ದೆಹಲಿ: ಕಡಲ ಭದ್ರತೆ ಕುರಿತು ಸೋಮವಾರ ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (United Nations Security Council) ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಹಿಸಲಿದ್ದಾರೆ. ‘ಕಡಲ ಭದ್ರತೆಯನ್ನು ಹೆಚ್ಚಿಸುವುದು – ಅಂತಾರಾಷ್ಟ್ರೀಯ ಸಹಕಾರ (‘Enhancing Maritime Security – A Case for International Cooperation )’ ಎಂಬ ಶೀರ್ಷಿಕೆಯಲ್ಲಿ ಮುಕ್ತ ಚರ್ಚೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂಜೆ 5:30 ಕ್ಕೆ ಆರಂಭವಾಗಲಿದೆ. ಫ್ರಾನ್ಸ್ ನಂತರ ಭಾರತವು ಆಗಸ್ಟ್ ತಿಂಗಳಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ವಹಿಸಿಕೊಂಡಿತು. ಭಾರತದ ಅಧ್ಯಕ್ಷತೆಯ ಅವಧಿಯಲ್ಲಿ ಸಮುದ್ರ ಭದ್ರತೆ, ಶಾಂತಿಪಾಲನೆ ಮತ್ತು ಭಯೋತ್ಪಾದನೆ ವಿರುದ್ಧ ಮೂರು ಉನ್ನತ ಮಟ್ಟದ ಮಹತ್ವದ ಸಭೆಗಳನ್ನು ಆಯೋಜಿಸಲಿದೆ ಎಂದು ವಿಶ್ವಸಂಸ್ಥೆಯು ತನ್ನ ಖಾಯಂ ಪ್ರತಿನಿಧಿ ರಾಯಬಾರಿ ಟಿಎಸ್ ತಿರುಮೂರ್ತಿಯವರು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗಿಯಾಗಲಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವೆಬ್‌ಸೈಟ್‌ನಲ್ಲಿ ಈ ಚರ್ಚೆ ನೇರ ಪ್ರಸಾರವಾಗಲಿದ್ದು ಈ ಚರ್ಚೆ ಕಡಲ ಅಪರಾಧ ಮತ್ತು ಅಭದ್ರತೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಕಡಲ ವಲಯದಲ್ಲಿ ಸಮನ್ವಯವನ್ನು ಬಲಪಡಿಸುತ್ತದೆ.

ಇಂತಹ ಉನ್ನತ ಮಟ್ಟದ ಮುಕ್ತ ಚರ್ಚೆಯಲ್ಲಿ ಒಂದು ವಿಶೇಷವಾದ ಕಾರ್ಯಸೂಚಿಯಾಗಿ ಸಮಗ್ರವಾಗಿ ಸಮುದ್ರ ಭದ್ರತೆಯನ್ನು ಚರ್ಚಿಸುವುದು ಇದೇ ಮೊದಲು.

2015 ರಲ್ಲಿ, ಪ್ರಧಾನಿ ಮೋದಿ ಸಾಗರ್ (SAGAR-‘Security and Growth for all in the Region’) ನ ಕನಸನ್ನು ಮುಂದಿಟ್ಟರು. ಇದು ಸಾಗರಗಳ ಸುಸ್ಥಿರ ಬಳಕೆಗಾಗಿ ಸಹಕಾರಿ ಕ್ರಮಗಳ ಮೇಲೆ ಕೇಂದ್ರೀಕರಿಸಿದೆ ಮತ್ತು ಈ ಪ್ರದೇಶದಲ್ಲಿ ಸುರಕ್ಷಿತ ಮತ್ತು ಸ್ಥಿರ ಕಡಲತೀರದ ಚೌಕಟ್ಟನ್ನು ಒದಗಿಸುತ್ತದೆ.

2019 ರಲ್ಲಿ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ, ಈ ಉಪಕ್ರಮವನ್ನು ಇಂಡೋ-ಪೆಸಿಫಿಕ್ ಸಾಗರಗಳ ಇನಿಶಿಯೇಟಿವ್ (IPOI) ಮೂಲಕ ಸಮುದ್ರ ಭದ್ರತೆಯ ಏಳು ಸ್ತಂಭಗಳ ಮೇಲೆ ಕೇಂದ್ರೀಕರಿಸಲಾಗಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇದು ಭಾರತದ ಹತ್ತನೇ ಅಧಿಕಾರಾವಧಿಯಾಗಿದೆ. ಸಿರಿಯಾ, ಇರಾಕ್, ಸೊಮಾಲಿಯಾ, ಯೆಮೆನ್ ಮತ್ತು ಮಧ್ಯಪ್ರಾಚ್ಯದ ಇತರ ದೇಶಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಹಲವಾರು ಮಹತ್ವದ ಸಭೆಗಳನ್ನು ಕೌನ್ಸಿಲ್ ಆಯೋಜಿಸಿದೆ ಎಂದು ತಿರುಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಸಮುದ್ರ ಸುರಕ್ಷತೆ ಕುರಿತು ಯುಎನ್ಎಸ್​ಸಿ ಚರ್ಚೆಗೆ ಪ್ರಧಾನಿ ಮೋದಿ ಅಧ್ಯಕ್ಷತೆ

ಇದನ್ನೂ ಓದಿ:  Tokyo Olympics: ಪದಕಕ್ಕೆ ಮುತ್ತಿಟ್ಟ ಭಾರತೀಯರಿಗೆ ಇಂದು ಸಂಜೆ ಪ್ರಧಾನಿ ಮೋದಿಯಿಂದ ಸನ್ಮಾನ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?