PM Modi Japan Visit: G7 ಶೃಂಗಸಭೆಯಲ್ಲಿ ಭಾಗವಹಿಸಲು ಹಿರೋಷಿಮಾ ತಲುಪಿದ ಪ್ರಧಾನಿ ಮೋದಿ

ಜಿ7 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

PM Modi Japan Visit: G7 ಶೃಂಗಸಭೆಯಲ್ಲಿ ಭಾಗವಹಿಸಲು ಹಿರೋಷಿಮಾ ತಲುಪಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
|

Updated on:May 19, 2023 | 5:13 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಪಾನ್‌ನ (Japan) ಹಿರೋಷಿಮಾ (Hiroshima) ತಲುಪಿದ್ದಾರೆ. ಜಪಾನ್‌ನ ಪ್ರಧಾನ ಮಂತ್ರಿ ಫುಮಿಯೊ ಕಿಶಿದಾ (Fumio Kishida) ಅವರ ಆಹ್ವಾನದ ಮೇರೆಗೆ ಜಪಾನಿನ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಜಿG7 ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದಾರೆ. ಜಿ7 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಇದು ಸಂಭವಿಸಿದಲ್ಲಿ, ಕಳೆದ ವರ್ಷ ಪ್ರಾರಂಭವಾದ ರಷ್ಯಾ-ಉಕ್ರೇನ್ ಯುದ್ಧದ ನಂತರ ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿಯಾಗಲಿದೆ. ವರದಿಗಳ ಪ್ರಕಾರ ಉಕ್ರೇನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿ ಮತ್ತು ಅದನ್ನು ರಾಜತಾಂತ್ರಿಕವಾಗಿ ಹೇಗೆ ಪರಿಹರಿಸಬಹುದು ಮತ್ತು ಪ್ರದೇಶದಲ್ಲಿ ಸ್ಥಿರತೆಯನ್ನು ಹೇಗೆ ಮರುಸ್ಥಾಪಿಸುವುದು ಎಂಬುದರ ಕುರಿತು ಉಭಯ ನಾಯಕರ ನಡುವಿನ ಮಾತುಕತೆ ನಡೆಯಲಿದೆ.

ಮೇ 19-21ರವರೆಗೆ ಹಿರೋಷಿಮಾದಲ್ಲಿ ಜಿ7 ಶೃಂಗಸಭೆ ನಡೆಯಲಿದ್ದು ಆಹಾರ, ರಸಗೊಬ್ಬರ ಮತ್ತು ಇಂಧನ ಭದ್ರತೆ ಸೇರಿದಂತೆ ಜಾಗತಿಕ ಸವಾಲುಗಳ ಕುರಿತು ಮೋದಿ ಮಾತನಾಡುವ ನಿರೀಕ್ಷೆಯಿದೆ.

ಪ್ರಬಲ ಗುಂಪಿನ ಪ್ರಸ್ತುತ ಅಧ್ಯಕ್ಷರಾಗಿ ಜಪಾನ್ G7 ಶೃಂಗಸಭೆಯನ್ನು ಆಯೋಜಿಸುತ್ತಿದೆ. G7 ಅತ್ಯಂತ ಮುಂದುವರಿದ ದೇಶಗಳಾದ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುಕೆ, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ (EU) ಒಳಗೊಂಡಿದೆ.

ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಾಯಕರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. G7 ಸಭೆಯ ವಿಶಾಲ ಕಾರ್ಯಸೂಚಿಯು ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ, ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಬದಲಾವಣೆ, ಇಂಧನ ಭದ್ರತೆ, ಆಹಾರ ಮತ್ತು ಆರೋಗ್ಯ ವಿಷಯಗಳ ಬಗ್ಗೆ ಇರಲಿದೆ.

ಭಾರತವು ಮೇ 20 ಮತ್ತು ಮೇ 21 ರಂದು ಎರಡು ಔಪಚಾರಿಕ ಅಧಿವೇಶನಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಜಪಾನ್ ಹೊರಡುವ ಮುನ್ನ ಮಾತನಾಡಿದ ಪ್ರಧಾನಿ ಮೋದಿ ಅವರು ಜಿ 7 ಶೃಂಗಸಭೆಯಲ್ಲಿ ತಮ್ಮ ಪಸ್ಥಿತಿಯು ಭಾರತದ ಜಿ 20 ಅಧ್ಯಕ್ಷ ಸ್ಥಾನದ ದೃಷ್ಟಿಯಿಂದ ವಿಶೇಷವಾಗಿ ಅರ್ಥಪೂರ್ಣವಾಗಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಮಾಜಿ ಸಂಸದ ಆನಂದ್ ಮೋಹನ್‌ ಜೈಲಿನಿಂದ ಬಿಡುಗಡೆ ಕುರಿತ ದಾಖಲೆಯನ್ನು ನೀಡುವಂತೆ ಬಿಹಾರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಈ ವರ್ಷ ಭಾರತವು G20 ಅಧ್ಯಕ್ಷ ಸ್ಥಾನವನ್ನು ಹೊಂದಿರುವುದರಿಂದ ಈ G7 ಶೃಂಗಸಭೆಯಲ್ಲಿ ನನ್ನ ಉಪಸ್ಥಿತಿಯು ವಿಶೇಷವಾಗಿ ಅರ್ಥಪೂರ್ಣವಾಗಿದೆ. ನಾನು G7 ದೇಶಗಳು ಮತ್ತು ಇತರ ಆಹ್ವಾನಿತ ಪಾಲುದಾರರೊಂದಿಗೆ ಜಗತ್ತು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳನ್ನು ಒಟ್ಟಾಗಿ ಪರಿಹರಿಸುವ ಅಗತ್ಯತೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ ಮೋದಿ.

ಜಪಾನ್‌ನಿಂದ ಮೋದಿ ಅವರು ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್‌ಬಿಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಮೇ 22 ರಂದು ಪ್ರಧಾನ ಮಂತ್ರಿ ಜೇಮ್ಸ್ ಮರಾಪೆ ಅವರೊಂದಿಗೆ ಜಂಟಿಯಾಗಿ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರದ (ಎಫ್‌ಪಿಐಸಿ) ಮೂರನೇ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Fri, 19 May 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ