ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ; ಈ ವಿಶ್ವವಿದ್ಯಾಲಯವು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಲಿದೆ: ನರೇಂದ್ರ ಮೋದಿ
Major Dhyan Chand Sports University ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯವು ದೇಶದ ಕೆಲವು ಪ್ರತಿಭಾವಂತ ಯುವಕರನ್ನು ಹೊರತರಲಿದೆ ಮತ್ತು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ಮೀರತ್: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಮೀರತ್‌ಗೆ ಆಗಮಿಸಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ(Major Dhyan Chand Sports University) ಶಂಕುಸ್ಥಾಪನೆ ಮಾಡಿದರು. ಈ ತಿಂಗಳು ಚುನಾವಣೆ ನಡೆಯಲಿರುವ ಉತ್ತರ ಪ್ರದೇಶಕ್ಕೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ. ಮೀರತ್‌ನ (Meerut) ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ಸುಮಾರು ₹700 ಕೋಟಿ ವೆಚ್ಚದಲ್ಲಿ ಧ್ಯಾನ್ ಚಂದ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು. ಮೀರತ್ ಕೇವಲ ಒಂದು ರಾಜ್ಯವಾಗಿರದೆ ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುವುದರಿಂದ ಹೊಸ ವರ್ಷದಲ್ಲಿ ಮೀರತ್‌ಗೆ ಭೇಟಿ ನೀಡುವುದು ನನಗೆ ಬಹಳ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯವು ದೇಶದ ಕೆಲವು ಪ್ರತಿಭಾವಂತ ಯುವಕರನ್ನು ಹೊರತರಲಿದೆ ಮತ್ತು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ಮೀರತ್‌ನಲ್ಲಿ ನಡೆದ ಶಂಕುಸ್ಥಾಪನಾ ಸಮಾರಂಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, 2022ರನ್ನು ಸ್ವಾಗತಿಸಿದ್ದಕ್ಕಾಗಿ ಪ್ರತಿಯೊಬ್ಬರನ್ನು ಅಭಿನಂದಿಸಿದರು ಮತ್ತು ಹೊಸ ವರ್ಷದ ಆರಂಭದಲ್ಲಿ ಮೀರತ್‌ಗೆ ಭೇಟಿ ನೀಡುವುದು ನನಗೆ ಸಾಕಷ್ಟು ಮಹತ್ವದ್ದಾಗಿದೆ ಎಂದು ಹೇಳಿದರು.
“ಮೀರತ್ ನಮ್ಮ ಶಕ್ತಿ ಮತ್ತು ಸಂಸ್ಕೃತಿಯ ಕೇಂದ್ರವಾಗಿದೆ”. “ಇದು ಜೈನ ತೀರ್ಥಂಕರರ ನಾಡು ಮತ್ತು ಸಿಂಧೂ ಕಣಿವೆಯ ನಾಗರಿಕತೆಯ ಕಾಲದಿಂದಲೂ ಭಾರತದ ಶಕ್ತಿಯನ್ನು ನಮಗೆ ತೋರಿಸಿದೆ ಎಂದು ಮೋದಿ ಹೇಳಿದ್ದಾರೆ.
PM Narendra Modi laid the foundation stone of Major Dhyan Chand Sports University in Meerut, UP
Meerut was Major Dhyan Chand’s ‘karmsthal’. Centre named the country’s biggest sports award after him & now Meerut’s Sports University will be dedicated to Major Dhyan Chand Ji: PM pic.twitter.com/AWi3h0Lqqp
— ANI UP/Uttarakhand (@ANINewsUP) January 2, 2022
ಕ್ರೀಡಾ ವಿಶ್ವವಿದ್ಯಾಲಯಕ್ಕೆ ಧ್ಯಾನ್ ಚಂದ್ ಹೆಸರಿಡಲಾಗಿದೆ. ಅವರ ಹೆಸರಿನಲ್ಲಿಯೇ ಸಂದೇಶವೂ ಇದೆ. ‘ಧ್ಯಾನ್’ ಎಂದರೆ ಏಕಾಗ್ರತೆ. ಈ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ‘ಧ್ಯಾನ್’ ಮತ್ತು ಗಮನವನ್ನು ಹೊಂದಿರುತ್ತಾರೆ ಅದು ನಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಇದು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಲಿದೆ.
₹700 ಕೋಟಿ ಮೌಲ್ಯದ ಈ ವಿಶ್ವವಿದ್ಯಾನಿಲಯವು ಯುವಕರಿಗೆ ಅಂತಾರಾಷ್ಟ್ರೀಯ ಕ್ರೀಡಾ ಸೌಲಭ್ಯಗಳನ್ನು ಒದಗಿಸಲಿದೆ. ಪ್ರತಿ ವರ್ಷ, 1000 ಕ್ಕೂ ಹೆಚ್ಚು ಹುಡುಗಿಯರು ಮತ್ತು ಹುಡುಗರು ಇಲ್ಲಿಂದ ಪದವಿ ಪಡೆಯುತ್ತಾರೆ. ಈ ಹಿಂದೆ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳು ಮಾತ್ರ ಇಲ್ಲಿ ಆಡುತ್ತಿದ್ದರು ಮತ್ತು ಅಕ್ರಮ ಭೂಕಬಳಿಕೆಯ ಪಂದ್ಯಾವಳಿಗಳು ನಡೆಯುತ್ತಿದ್ದವು ಎಂದು ಮೀರತ್‌ನಲ್ಲಿ ಪ್ರಧಾನಿ ಮೋದಿ ಹೇಳಿದರು.
ಶಂಕುಸ್ಥಾಪನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಮೀರತ್‌ನ ಕಾಳಿ ಪಲ್ಟನ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
PM Shri @narendramodi offers prayers at Kali Paltan Temple at Meerut Cantt. https://t.co/6ssd8jklOw
— BJP (@BJP4India) January 2, 2022
ಮೀರತ್‌ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ₹ 700 ಕೋಟಿ ಅಂದಾಜು ವೆಚ್ಚದಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಅಧಿಕೃತ ಪ್ರಕಟಣೆ ತಿಳಿಸಿದೆ. ಇದು 540 ಮಹಿಳೆಯರು ಮತ್ತು 540 ಪುರುಷರು ಸೇರಿದಂತೆ 1,080 ಕ್ರೀಡಾಪಟುಗಳಿಗೆ ತರಬೇತಿ ನೀಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯವು ಎಲ್ಲಾ ಆಧುನಿಕ, ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳೊಂದಿಗೆ ಯೋಜಿಸಲಾಗಿದೆ ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್, ವಾಲಿಬಾಲ್, ಹ್ಯಾಂಡ್‌ಬಾಲ್ ಮತ್ತು ಕಬಡ್ಡಿಗೆ ಪ್ರತ್ಯೇಕ ಮೈದಾನಗಳು ಸೇರಿದಂತೆ ಇದು ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜುಕೊಳ, ವಿವಿಧೋದ್ದೇಶ ಹಾಲ್ ಮತ್ತು ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ಸಹ ಒಳಗೊಂಡಿದೆ.
ಸರ್ಕಾರದ ಪ್ರಕಟಣೆ ಪ್ರಕಾರ, ವಿಶ್ವವಿದ್ಯಾನಿಲಯವು ಶೂಟಿಂಗ್, ಸ್ಕ್ವಾಷ್, ಜಿಮ್ನಾಸ್ಟಿಕ್ಸ್, ವೇಟ್‌ಲಿಫ್ಟಿಂಗ್, ಆರ್ಚರಿ, ಕ್ಯಾನೋಯಿಂಗ್ ಮತ್ತು ಕಯಾಕಿಂಗ್‌ಗೆ ಇತರ ಸೌಲಭ್ಯಗಳನ್ನು ಹೊಂದಿದೆ.
ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ದೇಶದ ಎಲ್ಲಾ ಭಾಗಗಳಲ್ಲಿ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಸ್ಥಾಪಿಸುವುದು ತಮ್ಮ ಸರ್ಕಾರದ ಗಮನದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಮೋದಿ ಈ ಹಿಂದೆ ಹೇಳಿದ್ದರು. ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಚುನಾವಣೆಗೆ ಒಳಪಟ್ಟಿರುವ ರಾಜ್ಯದಲ್ಲಿ ಸ್ಥಾಪಿಸುವುದು ಈ ದೃಷ್ಟಿಕೋನವನ್ನು ಈಡೇರಿಸುವ ಪ್ರಮುಖ ಹೆಜ್ಜೆ ಎಂದು ನಿರೀಕ್ಷಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ನಡೆಯಲಿರುವ ಮಹತ್ವದ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತಮ್ಮ ಪಕ್ಷ ಅಧಿಕಾರಕ್ಕೇರಿದರೆ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಶನಿವಾರ ಭರವಸೆ ನೀಡಿದ್ದಾರೆ. ನೀರಾವರಿ ಉದ್ದೇಶಕ್ಕೆ ಉಚಿತ ವಿದ್ಯುತ್ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಭರವಸೆ ನೀಡಿದರು.
ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್ಎಫ್
Published On - 2:58 pm, Sun, 2 January 22