ನೂತನ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ಮೋದಿ

Narendra Modi: 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಹೊಸ ಕಟ್ಟಡವು 2022ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಯೋಜನೆಯ ಪ್ರಕಾರ ಡಿಸೆಂಬರ್ 2022ರ ಅಧಿವೇಶನವು ಹೊಸ ಸಂಸತ್​​ನಲ್ಲಿ ಅಡಿಯಲ್ಲಿ ನಡೆಯಲಿದೆ.

ನೂತನ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 26, 2021 | 11:04 PM

ದೆಹಲಿ: ಅಮೆರಿಕದಿಂದ ಹಿಂದಿರುಗಿ 24 ಗಂಟೆಗಳಿಗಿಂತಲೂ ಮುಂಚೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ರಾತ್ರಿ 8: 45 ರ ಸುಮಾರಿಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಮೋದಿ ಪ್ರಸ್ತಾವಿತ ಸೆಂಟ್ರಲ್ ವಿಸ್ಟಾ ಯೋಜನೆಯ (Central Vista project) ಸ್ಥಳದಲ್ಲಿ ಸುಮಾರು ಒಂದು ಗಂಟೆ ಕಳೆದರು ಮತ್ತು ಹೊಸ ಪಾರ್ಲಿಮೆಂಟ್ ಕಟ್ಟಡದ ನಿರ್ಮಾಣ ಸ್ಥಿತಿಯನ್ನು ನೇರವಾಗಿ ಪರಿಶೀಲಿಸಿದರು. ಅವರ ಭೇಟಿಯ ಬಗ್ಗೆ ಯಾವುದೇ ಪೂರ್ವ ಸೂಚನೆ ಅಥವಾ ಭದ್ರತಾ ವಿವರ ಇರಲಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಡಿಸೆಂಬರ್ 10, 2020 ರಂದು ದೆಹಲಿಯ ಹೊಸ ಸಂಸತ್ ಭವನಕ್ಕೆ ಮೋದಿ ಶಂಕುಸ್ಥಾಪನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಕ್ಯಾಬಿನೆಟ್ ಮಂತ್ರಿಗಳು ಮತ್ತು ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸಿದ್ದರು.

64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಹೊಸ ಕಟ್ಟಡವು 2022ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಯೋಜನೆಯ ಪ್ರಕಾರ ಡಿಸೆಂಬರ್ 2022ರ ಅಧಿವೇಶನವು ಹೊಸ ಸಂಸತ್​​ನಲ್ಲಿ ಅಡಿಯಲ್ಲಿ ನಡೆಯಲಿದೆ. ಸಂಸತ್ ಭವನ ನಿರ್ಮಾಣದ ಅಂದಾಜು ವೆಚ್ಚ 971 ಕೋಟಿ ರೂ. ಇದು ನಿರ್ಮಾಣದಿಂದ ಹಿಡಿದು ಸುರಕ್ಷತಾ ಉಪಕರಣಗಳು ಮತ್ತು ಇತರ ಎಲ್ಲಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಲೋಕಸಭೆಯು 888 ಸಂಸದರಿಗೆ ಮತ್ತು ರಾಜ್ಯಸಭೆಯಲ್ಲಿ 384 ಸಂಸದರಿಗೆ ಆಸನ ಸ್ಥಳವನ್ನು ಹೊಂದಿರುತ್ತದೆ. ಹೆಚ್ಚುವರಿ ಆಸನಗಳಿಗೆ ಸ್ಥಳಾವಕಾಶವಿರುತ್ತದೆ -ಹೊಸ ಸಂಸತ್ ಕಟ್ಟಡವು ಲೋಕಸಭೆಯಲ್ಲಿ 1,382 ಜನರಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, ಈಗಿರುವ ಸಂಸತ್ತಿನ ಕಟ್ಟಡದ ಅಡಿಪಾಯವನ್ನು 1921 ರಲ್ಲಿ ಹಾಕಲಾಯಿತು, ಮತ್ತು ಇದನ್ನು 1927 ರಲ್ಲಿ ನಿರ್ಮಿಸಲಾಯಿತು – ಕಟ್ಟಡವು ಸುಮಾರು 100 ವರ್ಷಗಳಷ್ಟು ಹಳೆಯದು. ಈಗಿರುವ ಕಟ್ಟಡದ ಒಳಭಾಗವು ಬಹಳಷ್ಟು ಬದಲಾಗಿದೆ, ಮತ್ತು ಹೊಸ ಸಂಸತ್ ಭವನದ ಬೇಡಿಕೆ ಸಾಕಷ್ಟು ಹಳೆಯದು. ಕಳೆದ ದಶಕಗಳಲ್ಲಿ ಹಲವಾರು ರಾಜ್ಯಗಳು ಹೊಸ ಅಸೆಂಬ್ಲಿ ಹೌಸ್ ನಿರ್ಮಿಸಿವೆ, ಆದರೆ ಸಂಸತ್ತು ಇನ್ನೂ ಬ್ರಿಟಿಷರ ಕಾಲದ ಕಟ್ಟಡದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಜೆಟ್​ಲಾಗ್​​ ಹಿಡಿತದಿಂದ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿದ್ದು ಹೇಗೆ? ಚುರುಕಿನ ಕೆಲಸವೇ ಪ್ರಯಾಣದ ಆಯಾಸಕ್ಕೂ ಮದ್ದು

ಇದನ್ನೂ ಓದಿ: ’ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ, ಹಾಗಾಗಿಯೇ ಇಟಲಿಗೆ ಹೋಗಲು ಅನುಮತಿ ಸಿಗಲಿಲ್ಲ’-ಮಮತಾ ಬ್ಯಾನರ್ಜಿ

(Prime Minister Narendra Modi made an unannounced visit to the construction site of new Parliament building )

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ