West Bengal Elections 2021: ಹೂಗ್ಲಿಯಲ್ಲಿ ಇಂದು ಮೋದಿ-ದೀದಿ ಮುಖಾಮುಖಿ !- ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರಿಂದಲೂ ಚುನಾವಣಾ ರ‍್ಯಾಲಿ

West Bengal Assembly Elections 2021: ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪತ್ರಕರ್ತ ಸ್ವಪನ್​ ದಾಸ್​ಗುಪ್ತಾರನ್ನು ಕಣಕ್ಕೆ ಇಳಿಸಲಾಗಿದೆ. ಹಾಗೇ, ಟಿಎಂಸಿಯಿಂದ ರಾಮೇಂದು ಸಿಂಗ್​​ ರಾಯ್​ ಅಭ್ಯರ್ಥಿಯಾಗಿದ್ದಾರೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಶೇ.50ರಷ್ಟು ಮತಗಳಿಸಿ ಗೆದ್ದಿತ್ತು.

West Bengal Elections 2021: ಹೂಗ್ಲಿಯಲ್ಲಿ ಇಂದು ಮೋದಿ-ದೀದಿ ಮುಖಾಮುಖಿ !- ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರಿಂದಲೂ ಚುನಾವಣಾ ರ‍್ಯಾಲಿ
ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ
Follow us
Lakshmi Hegde
|

Updated on:Apr 03, 2021 | 11:46 AM

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಎರಡೂ ಪಕ್ಷಗಳೂ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳವನ್ನು ಹೇಗಾದರೂ ವಶಪಡಿಸಿಕೊಳ್ಳಬೇಕು ಎಂದು ಬಿಜೆಪಿ ಹವಣಿಸುತ್ತಿದ್ದರೆ, ಏನೇ ಆಗಲಿ ಪಶ್ಚಿಮ ಬಂಗಾಳವನ್ನು ಬಿಟ್ಟುಕೊಡಬಾರದು ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೋರಾಡುತ್ತಿದೆ. ಹೀಗಿರುವಾಗ ಇಂದು ಹೂಗ್ಲಿಯಲ್ಲಿ ಮೋದಿ-ದೀದಿ ಮುಖಾಮುಖಿಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಕುತೂಹಲ ಕೆರಳಿಸಿದೆ.

ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಇಂದು ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಆರಂಬಾಗ್​ ಲೋಕಸಭಾ ಕ್ಷೇತ್ರದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 1.30ರ ಹೊತ್ತಿಗೆ ಮಮತಾ ಬ್ಯಾನರ್ಜಿ ಸಾರ್ವಜನಿಕ ಸಭೆ ನಡೆಸಲಿದ್ದು, 2.45ರ ವೇಳೆಗೆ ತಾರಕೇಶ್ವರದ ಪಕ್ಕದಲ್ಲೇ ಇರುವ ಹರಿಪಾಲ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ಸಭೆಯಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ತಾರಕೇಶ್ವರ ವಿಧಾನಸಭಾ ಕ್ಷೇತ್ರದ ಮಹತ್ವ ಇಂದು ಇಬ್ಬರೂ ನಾಯಕರು ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲೇ ಮತಬೇಟೆ ನಡೆಸಲಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೇವಲ ಒಂದು ಗಂಟೆಯ ಅಂತರದಲ್ಲಿ ಇಬ್ಬರೂ ಆ ಕ್ಷೇತ್ರದಲ್ಲಿ ಇರಲಿದ್ದಾರೆ. ಈ ತಾರಕೇಶ್ವರ ವಿಧಾನಸಭಾ ಕ್ಷೇತ್ರ ಕೋಲ್ಕತ್ತದಿಂದ 63 ಕಿ.ಮೀ.ದೂರದಲ್ಲಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿರುವ ಈ ಪ್ರದೇಶ, ಹಿಂದೂಗಳ ಪವಿತ್ರ ಯಾತ್ರಾಸ್ಥಳವೂ ಹೌದು. 1729ರಲ್ಲಿ ನಿರ್ಮಾಣವಾದ ಇಲ್ಲಿನ ಬಾಬಾ ತಾರಕನಾಥ್​ ಶಿವನ ದೇವಸ್ಥಾನ ಪ್ರಸಿದ್ಧ. ಚುನಾವಣೆಯ ಮೂರನೇ ಹಂತದಲ್ಲಿ, ಅಂದರೆ ಏಪ್ರಿಲ್​ 6ರಂದು ಇಲ್ಲಿ ಮತದಾನ ನಡೆಯಲಿದೆ.

ಯಾವ ಪಕ್ಷದಿಂದ ಯಾರು ಅಭ್ಯರ್ಥಿಗಳು? ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪತ್ರಕರ್ತ ಸ್ವಪನ್​ ದಾಸ್​ಗುಪ್ತಾರನ್ನು ಕಣಕ್ಕೆ ಇಳಿಸಲಾಗಿದೆ. ಹಾಗೇ, ಟಿಎಂಸಿಯಿಂದ ರಾಮೇಂದು ಸಿಂಗ್​​ ರಾಯ್​ ಅಭ್ಯರ್ಥಿಯಾಗಿದ್ದಾರೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಶೇ.50ರಷ್ಟು ಮತಗಳಿಸಿ ಗೆದ್ದಿತ್ತು. 2011ರಲ್ಲಿ ಇದೇ ಕ್ಷೇತ್ರದಿಂದ ಗೆದ್ದು ಮಂತ್ರಿಯಾಗಿದ್ದ ರಾಚ್​ಪಾಲ್​ ಸಿಂಗ್​ ಅವರೇ 2016ರ ಚುನಾವಣೆಯಲ್ಲೂ ಜಯಗಳಿಸಿದ್ದರು. ಆದರೆ ಟಿಎಂಸಿ ಅವರನ್ನೀಗ ಕೈಬಿಟ್ಟು, ರಾಮೇಂದು ಸಿಂಗ್​​​ ರಾಯ್​ಗೆ ಮಣೆ ಹಾಕಿದೆ. ಇನ್ನು ಬಿಜೆಪಿ ಕಣಕ್ಕೆ ಇಳಿಸಿರುವ ಸ್ವಪನ್​ ದಾಸ್​ ಗುಪ್ತಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಮಾತೂ ಬಲವಾಗಿ ಕೇಳಿಬರುತ್ತದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ಮೇ 2ರಂದು ಒಂದೊಮ್ಮೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ, ಇವರೇ ಮುಖ್ಯಮಂತ್ರಿ ಎಂದೂ ಹೇಳಲಾಗುತ್ತಿದೆ.

(Prime Minister Narendra Modi, Mamata Banerjee to address rallies in Hooghly today)

ಇದನ್ನೂ ಓದಿ: Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ

Published On - 11:14 am, Sat, 3 April 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ