Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳು ಬಳಿಕ ಗಾಂಧಿನಗರ ನಿವಾಸಕ್ಕೆ ಪ್ರಧಾನಿ ಭೇಟಿ, ತಾಯಿ ಆಶೀರ್ವಾದ ಪಡೆದುಕೊಂಡ ಮೋದಿ

ಡಿಸೆಂಬರ್ 05ರಂದು ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನಿಡಿ ತಾಯಿ ಆಶೀರ್ವಾದ ಪಡೆದರು.

5 ತಿಂಗಳು ಬಳಿಕ ಗಾಂಧಿನಗರ ನಿವಾಸಕ್ಕೆ ಪ್ರಧಾನಿ ಭೇಟಿ, ತಾಯಿ ಆಶೀರ್ವಾದ ಪಡೆದುಕೊಂಡ ಮೋದಿ
ತಾಯಿ ಆಶೀರ್ವಾದ ಪಡೆದುಕೊಂಡ ಮೋದಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 04, 2022 | 7:43 PM

ಗಾಂಧಿನಗರ: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲಿ(Gujarat Assembly polls 2022) ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು (ಡಿಸೆಂಬರ್ 04) ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದುಕೊಂಡರು. ಬರೋಬ್ಬರಿ ಐದು ತಿಂಗಳು ಬಳಿಕ ಗಾಂಧಿನಗರದಲ್ಲಿರುವ ನಿವಾಸಕ್ಕೆ ಆಗಮಿಸಿ ತಾಯಿ ಹೀರಾಬೆನ್ ಮೋದಿ (Heeraben Modi )ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು. ಬಳಿಕ ಟೀ ಸೇವಿಸುತ್ತ ತಾಯಿ ಜೊತೆ ಕುಳಿತು ಸಮಲೋಚನೆ ನಡೆಸಿದರು.

ನರೇಂದ್ರ ಮೋದಿ ಅವರು ಕಳೆದ ಜೂನ್ 18 ರಂದು ತಾಯಿ ಹೀರಾಬೆನ್ ಅವರು 100ನೇ  ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು. ಅಂದು ತಾಯಿಯ ಪಾದ ಪೂಜೆ ಮಾಡಿ ಸಿಹಿ ತಿನ್ನಿಸಿ ಜನ್ಮದಿನದ ಶುಭಾಶಯ ಕೋರಿದ್ದರು. ಅದಾದ ಐದು ತಿಂಗಳು ಬಳಿಕ ಮೋದಿ ತಾಯಿಯನ್ನು ಭೇಟಿ ಮಾಡಿದ್ದಾರೆ.

ಇನ್ನು ಮೊದಲ ಹಂತದ ಚುನಾವಣೆ ಡಿಸೆಂಬರ್ 1ರಂದು ಅಂತ್ಯವಾಗಿದ್ದು, 93 ಕ್ಷೇತ್ರಗಳಿಗೆ 2ನೇ ಮತ್ತು ಕೊನೆಯ ಹಂತದ ಚುನಾವಣೆ ಡಿ. 5ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರಕ್ಕೆ ಆಗಮಿಸಿದ್ದಾರೆ. ಇನ್ನು ಮೋದಿ ಅಹಮದಾಬಾದ್‌ನ ಸಬರಮತಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದು, ನಾಳೆ(ಡಿ.5) ತಾಯಿ ಜೊತೆ ಮತಚಲಾಯಿಸಿಲಿದ್ದಾರೆ.

27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಈ ಬಾರಿಯ ಚುನಾವಣೆ ಬಳ ಮಹತ್ವದ ಪಡೆದುಕೊಂಡಿದೆ. ಕೇಜ್ರಿವಾಲ್ ನೇತೃತ್ವದ ಎಎಪಿ ಎಂಟ್ರಿಕೊಟ್ಟಿರಿಂದ ಬಿಜೆಪಿಯ ನಿದ್ದೆಗೆಡಿಸಿದೆ. ಹೀಗಾಗಿ ಮೋದಿಯವರೇ ಪ್ರಚಾರದ ನೇತೃತ್ವ ವಹಿಸಿದ್ದರು. ಸುಮಾರು 31 ರ್ಯಾಲಿಗಳು, ಬಹಿರಂಗ ಸಭೆಗಳನ್ನು ನಡೆಸಿದ್ದಾರೆ. ಆದ್ರೆ, ಚುನಾವಣೆ ಫಲಿತಾಂಶ ಏನಾಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದ್ದು, ಡಿಸೆಂಬರ್ 08ಕ್ಕೆ ಅಭ್ಯರ್ಥಿಗಳ ಹಣೆಬರಹ ತಿಳಿಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:41 pm, Sun, 4 December 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್