AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಧಾರ್ಮಿಕ ಸಾಹಿತ್ಯ ಸಂರಕ್ಷಣೆಗೆ ಗ್ರಂಥಾಲಯ ರಚನೆ: ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ

‘ಗೌತಮ ಬುದ್ಧ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಸಾಹಿತ್ಯ ಕೃತಿಗಳನ್ನು ವಿವಿಧ ದೇಶಗಳಿಂದ ಡಿಜಿಟಲ್ ಪ್ರತಿಗಳ ರೂಪದಲ್ಲಿ ಸಂಗ್ರಹಿಸಲಾಗುವುದು. ನಂತರ ಅವುಗಳನ್ನು ಅಗತ್ಯವಿರುವ ಭಾಷೆಗಳಿಗೆ ಅನುವಾದ ಮಾಡಿ, ವಿದ್ವಾಂಸರಿಗೆ ಹಾಗೂ ಬೌದ್ಧ ಭಿಕ್ಕುಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು’.

ಬೌದ್ಧ ಧಾರ್ಮಿಕ ಸಾಹಿತ್ಯ ಸಂರಕ್ಷಣೆಗೆ ಗ್ರಂಥಾಲಯ ರಚನೆ: ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವ
ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ganapathi bhat|

Updated on:Apr 06, 2022 | 11:25 PM

Share

ದೆಹಲಿ: ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಕೃತಿಗಳನ್ನು ಸಂಗ್ರಹಿಸಿ, ಗ್ರಂಥಾಲಯದಲ್ಲಿ ಕಾಪಾಡುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಸ್ತಾಪಿಸಿದರು. ವರ್ಚುವಲ್ ಕಾನ್ಫರೆನ್ಸ್​ ಮೂಲಕ ನಡೆದ ಭಾರತ-ಜಪಾನ್ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಭಾರತ ಉತ್ಸುಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗೌತಮ ಬುದ್ಧ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಸಾಹಿತ್ಯ ಕೃತಿಗಳನ್ನು ವಿವಿಧ ದೇಶಗಳಿಂದ ಡಿಜಿಟಲ್ ಪ್ರತಿಗಳ ರೂಪದಲ್ಲಿ ಸಂಗ್ರಹಿಸಲಾಗುವುದು. ನಂತರ ಅವುಗಳನ್ನು ಅಗತ್ಯವಿರುವ ಭಾಷೆಗಳಿಗೆ ಅನುವಾದ ಮಾಡಿ, ವಿದ್ವಾಂಸರಿಗೆ ಹಾಗೂ ಬೌದ್ಧ ಭಿಕ್ಕುಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಯೋಜನೆಯ ಉದ್ದೇಶ ತಿಳಿಸಿದರು.

ಆಧುನಿಕ ಜಗತ್ತಿನ ಸವಾಲುಗಳನ್ನು ಎದುರಿಸಲು ಬುದ್ಧನ ಸಂದೇಶಗಳು ನಮಗೆ ಹೇಗೆ ಮಾರ್ಗದರ್ಶನ ನೀಡಬಹುದು ಎಂಬ ಬಗ್ಗೆ ಸಂಶೋಧನಾ ನಿಯೋಗವು ಪರಿಶೀಲನೆ ನಡೆಸಬೇಕು ಎಂದು ಮೋದಿ ಅಭಿಪ್ರಾಯಪಟ್ಟರು. ಉಭಯ ದೇಶಗಳ ಪ್ರಾಚೀನ ಧಾರ್ಮಿಕ ಮತ್ತು ಆದ್ಯಾತ್ಮಿಕ ವಿಚಾರಗಳು ಮತ್ತು ಅವುಗಳನ್ನು ಮುನ್ನಡೆಸುವ ಬಗ್ಗೆ ಮಾತುಕತೆ ನಡೆಯಿತು.

ಮಾತು ಮತ್ತು ಚರ್ಚೆಗಳನ್ನು ಒಳಗೊಂಡಿದ್ದ ಸಂವಾದ ಕಾರ್ಯಕ್ರಮವು ತನ್ನ ಆಶಯಕ್ಕೆ ಬದ್ಧವಾಗಿ ನಡೆಯಿತು. ಭಾರತ-ಜಪಾನ್ ಸಂವಾದ ಕಾರ್ಯಕ್ರಮಕ್ಕೆ ಸದಾ ಬೆಂಬಲ ನೀಡುವ ಜಪಾನ್​ಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ತಿಳಿಸಿದರು. ಈ ಸಂವಾದವು ಒಳಿತಿನ ಆಶಯಗಳು, ಏಕತೆ, ಸಹಾನುಭೂತಿಯನ್ನು ವಿಶ್ವದೆಲ್ಲಡೆ ಪಸರಿಸಬೇಕು ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ-ಜಪಾನ್ ಮೊದಲ ಸಂವಾದ ಕಾರ್ಯಕ್ರಮ 2015ರಲ್ಲಿ ಬೌದ್ಧಗಯಾದಲ್ಲಿ ನಡೆದಿತ್ತು. ವಿದ್ವಾಂಸರು, ಧಾರ್ಮಿಕ ಮುಖಂಡರು, ರಾಜಕೀಯ ವ್ಯಕ್ತಿಗಳು, ಅಧ್ಯಯನಕಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು (ಡಿ.21) ನಡೆದದ್ದು 6ನೇ ಸಂವಾದ ಕಾರ್ಯಕ್ರಮವಾಗಿದೆ.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Published On - 2:54 pm, Mon, 21 December 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ