ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆ ಮೋದಿ ಮಾತುಕತೆ; ಉಕ್ರೇನ್ ಯುದ್ಧ, ಬ್ರಿಕ್ಸ್ ಅಧ್ಯಕ್ಷತೆ ಬಗ್ಗೆ ವಿಚಾರ ವಿನಿಮಯ
ಮೋದಿ ಮತ್ತು ಪುಟಿನ್ ದ್ವಿಪಕ್ಷೀಯ ಸಂಬಂಧಗಳಲ್ಲಿನ ಬೆಳವಣಿಗೆಗಳನ್ನು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದರು ಮತ್ತು ಭಾರತ-ರಷ್ಯಾ ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಭವಿಷ್ಯದ ಉಪಕ್ರಮಗಳಿಗೆ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಲು ಒಪ್ಪಿಕೊಂಡರು ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ದೆಹಲಿ ಜನವರಿ 15: ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ಮಾತುಕತೆ ನಡೆಸಿದ್ದು, ಬ್ರಿಕ್ಸ್‌ನ ರಷ್ಯಾದ ಅಧ್ಯಕ್ಷ ಸ್ಥಾನ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ರಷ್ಯಾ (Russia) ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತುಕತೆ ಉತ್ತಮ ಆಗಿತ್ತು. ನಾವು ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ವಿವಿಧ ಧನಾತ್ಮಕ ಬೆಳವಣಿಗೆಗಳನ್ನು ಚರ್ಚಿಸಿದ್ದು, ಭವಿಷ್ಯದ ಉಪಕ್ರಮಗಳಿಗಾಗಿ ಮಾರ್ಗಸೂಚಿಯನ್ನು ರೂಪಿಸಲು ಒಪ್ಪಿಕೊಂಡಿದ್ದೇವೆ. ಬ್ರಿಕ್ಸ್‌ನ ರಷ್ಯಾದ ಪ್ರೆಸಿಡೆನ್ಸಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ನಾವು ಉಪಯುಕ್ತ ಅಭಿಪ್ರಾಯ ವಿನಿಮಯವನ್ನು ಮಾಡಿದ್ದೇವೆ ಎಂದು ಪ್ರಧಾನ ಮಂತ್ರಿ ಸಾಮಾಜಿಕ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಭಯ ದೇಶಗಳ ನಡುವಿನ ಇತ್ತೀಚಿನ ಉನ್ನತ ಮಟ್ಟದ ವಿನಿಮಯದ ಅನುಸರಣೆಯಲ್ಲಿ ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳ ಕುರಿತು ಉಭಯ ನಾಯಕರು ಪ್ರಗತಿಯನ್ನು ಪರಿಶೀಲಿಸಿದರು. ಅವರು ದ್ವಿಪಕ್ಷೀಯ ಸಂಬಂಧಗಳಲ್ಲಿನ ಬೆಳವಣಿಗೆಗಳನ್ನು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದರು ಮತ್ತು ಭಾರತ-ರಷ್ಯಾ ವಿಶೇಷ ಮತ್ತು ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಭವಿಷ್ಯದ ಉಪಕ್ರಮಗಳಿಗೆ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಲು ಒಪ್ಪಿಕೊಂಡರು ಎಂದು ಪ್ರಧಾನ ಮಂತ್ರಿ ಕಚೇರಿ (PMO) ಹೇಳಿಕೆಯಲ್ಲಿ ತಿಳಿಸಿದೆ.
ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. 2024ರಲ್ಲಿ ಬ್ರಿಕ್ಸ್‌ನ ರಷ್ಯಾ ಅಧ್ಯಕ್ಷ ಸ್ಥಾನಕ್ಕೆ ಪ್ರಧಾನಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಭಾರತದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ ಎಂದು ಪಿಎಂಒ ಹೇಳಿಕೆ ತಿಳಿಸಿದೆ.
ಇದನ್ನೂ ಓದಿ: Narendra Modi: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆ ಮುಂದುವರಿದ ದೇಶವನ್ನಾಗಿಸುವ ಗುರಿ: ನರೇಂದ್ರ ಮೋದಿ
ಮತ್ತೊಂದೆಡೆ, ರಷ್ಯಾ ತಮ್ಮ ಹೇಳಿಕೆಯಲ್ಲಿ, “ಉಭಯ ನಾಯಕರು “ಪರಸ್ಪರ ಲಾಭದಾಯಕ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ತೀವ್ರಗೊಳಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ.”ಉಕ್ರೇನ್‌ನಲ್ಲಿನ ಪರಿಸ್ಥಿತಿ ಬಗ್ಗೆಯೂ ಉಭಯ ನಾಯಕರು ಮಾತನಾಡಿದ್ದಾರೆ ಎಂದಿದೆ.
ಉಕ್ರೇನ್ ಯುದ್ಧದ ನಡುವೆ ಭಾರತವು ತನ್ನ ಹಳೆಯ ಮಿತ್ರ ರಷ್ಯಾದೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದೆ. ಅದೇ ವೇಳೆ ಯುಎಸ್ ಮತ್ತು ಇತರ ಪಾಶ್ಚಿಮಾತ್ಯ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಮುಂದುವರೆಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:02 pm, Mon, 15 January 24