AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರನ್ನು ತಪ್ಪು ದಾರಿಗೆ ಎಳೆಯಬೇಡಿ: ಪ್ರಧಾನಿ ನರೇಂದ್ರ ಮೋದಿ

ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ರೈತರನ್ನು ತಪ್ಪು ದಾರಿಗೆ ಎಳೆಯಬೇಡಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಾರ್ಯಕ್ರಮದಲ್ಲಿ (ಸಂಗ್ರಹ ಚಿತ್ರ)
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 25, 2020 | 4:37 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳ ಕುರಿತು ಮುಕ್ತ ಮನಸ್ಸಿನಿಂದ ಚರ್ಚಿಸಲು ಸರ್ಕಾರ ಸಿದ್ಧವಿದೆ. ರೈತರ ಹಿತಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ. ಶಾಂತಿಯುತ ಮಾತುಕತೆಯಿಂದ ಮಾತ್ರ ರೈತರ ಸಮಸ್ಯೆಗಳಿಗೆ ಪರಿಹಾರ ಸಾಧ್ಯ. ರೈತರ ವಿಷಯದಲ್ಲಿ ರಾಜಕೀಯ ನಡೆಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಪಿಎಂ ಮೋದಿ ಅವರು ದೇಶದ 9 ಕೋಟಿ ಫಲಾನುಭವಿ ರೈತ ಕುಟುಂಬಗಳಿಗೆ ತಲಾ ₹ 2 ಸಾವಿರದಂತೆ ₹ 18 ಸಾವಿರ ಕೋಟಿಗೂ ಹೆಚ್ಚು ಹಣ ವರ್ಗಾಯಿಸಿ ಮಾತನಾಡಿದರು. ಕರ್ನಾಟಕ ಸೇರಿದಂತೆ 6 ರಾಜ್ಯಗಳ ರೈತರ ಜತೆ ಸಂವಾದ ನಡೆಸಿದರು. ದೇಶದ ಪ್ರಮುಖ ಸ್ಥಳಗಳಲ್ಲಿ ಬೃಹತ್ ಪರದೆಗಳನ್ನು ಅಳವಡಿಸಿ ಪ್ರಧಾನಿ ನರೇಂದ್ರ ಮೋದಿಯವರ ವರ್ಚುವಲ್ ಭಾಷಣ ಕೇಳುವ ವ್ಯವಸ್ಥೆಯನ್ನು ಬಿಜೆಪಿ ಏರ್ಪಡಿಸಿತ್ತು.

ಕೃಷಿಯಲ್ಲಿ ಆಧುನಿಕ ತಾಂತ್ರಿಕತೆಯ ಬಳಕೆಯಿಂದ ಉತ್ಪಾದನೆಯ ಪ್ರಮಾಣ ಮತ್ತು ಗುಣಮಟ್ಟವನ್ನು ಏರಲಿದೆ. ‘ಬ್ರಾಂಡ್ ಇಂಡಿಯಾ’ವನ್ನು ಸಾಧಿಸಲು ಈ ಕ್ರಮ ಅವಶ್ಯಕವಿದೆ. ನೂತನ ಕೃಷಿ ಕಾಯ್ದೆಗಳು ಕೃಷಿಯಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿವೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ಪಂಜಾಬ್​ನಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಕೃಷಿ ರೂಡಿಯಲ್ಲಿದೆ. ದಯವಿಟ್ಟು MSPಗಳ ಬಗ್ಗೆ ತಪ್ಪು ಮಾಹಿತಿ ಹರಡಬೇಡಿ. ರೈತರಿಗೆ ಕಂಪನಿಗಳು ಮೋಸ ಮಾಡಬಹುದು, ರೈತರಿಂದ ದಂಡ ವಸೂಲಿ ಮಾಡುವ ಅವಕಾಶವಿದೆ ಎಂಬ ಮಾಹಿತಿಗಳು ಹರಿದಾಡುತ್ತಿವೆ. ಆದರೆ ಅವು ಸರಿಯಾದ ಮಾಹಿತಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಆರು ರಾಜ್ಯಗಳ ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಿಸಾನ್ ಕಾರ್ಡ್​ನಿಂದ ಪಡೆಯುತ್ತಿರುವ ಸೌಲಭ್ಯಗಳ ಕುರಿತು ರೈತರ ಬಳಿ ವಿವರ ಕೇಳಿದರು. ಕಿಸಾನ್ ಕಾರ್ಡ್​ನಿಂದ ಸರ್ಕಾರ ಒದಗಿಸುವ ಅನುದಾನ ನೇರವಾಗಿ ರೈತರ ಖಾತೆಯಲ್ಲಿ ಲಭ್ಯವಾಗುತ್ತಿದೆ. ಯಾವುದೇ ಕಮಿಶನ್ ಇಲ್ಲದೇ ರೈತರು ಸಂಪೂರ್ಣ ಫಲಾನುಭವ ಪಡೆಯುತ್ತಿದ್ದಾರೆ. ಹಿಂದಿನ ಸರ್ಕಾರಗಳು ಕೃಷಿ ಕ್ಷೇತ್ರದಲ್ಲಿ ಯಾವುದೇ ಸುಧಾರಣೆ ತಂದಿಲ್ಲ ಎಂದು ವಿಪಕ್ಷಗಳನ್ನು ಟೀಕಿಸಿದರು.

ಮಮತಾ ಮೇಲೆ ಹರಿಹಾಯ್ದ ಪ್ರಧಾನಿ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಿಸಿ ಹೋರಾಟಕ್ಕೆ ಮುಂದಾಗುತ್ತಾರೆ. ಆದರೆ,ತಮ್ಮದೇ ರಾಜ್ಯದ ರೈತರ ಹಿತವನ್ನು ಸಂಪೂರ್ಣ ಮರೆಯುತ್ತಾರೆ ಎಂದು ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ, ಮಮತಾ ಬ್ಯಾನರ್ಜಿಯವರ ತಪ್ಪು ನಿರ್ಧಾರದಿಂದ ಬಂಗಾಳದ 70 ಲಕ್ಷ ರೈತರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಿಂದ ವಂಚಿತರಾಗಿದ್ದಾರೆ ಎಂದರು.

Published On - 3:04 pm, Fri, 25 December 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ