AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದು ವರ್ಷ; ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

NEP-2020: ಪ್ರಸ್ತುತ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಕೂಡ ಇರಲಿದ್ದು, ಅವರೂ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದು ವರ್ಷ; ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Jul 29, 2021 | 12:45 PM

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (National Education Policy-NEP)ಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಇದರ ಬಗ್ಗೆ ಇಂದು ಸಂಜೆ 4.30ರ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್​ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹಾಗೇ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಉಪಕ್ರಮಗಳನ್ನು ಇಂದು ಉದ್ಘಾಟಿಸಲಿದ್ದಾರೆ. ಪ್ರಸ್ತುತ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಕೂಡ ಇರಲಿದ್ದು, ಅವರೂ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವರು.

ಈ ಬಗ್ಗೆ ಟ್ವೀಟ್ ಮಾಡಿರುವ ಧರ್ಮೇಂದ್ರ ಪ್ರಧಾನ್​, ಕಲಿಕೆಯ ನೆಲನೋಟವನ್ನು ಬದಲಿಸಲು ಮಾರ್ಗದರ್ಶಿ ತತ್ವಶಾಸ್ತ್ರವಾಗಿರುವ ಈ ಎನ್​ಇಪಿ-2020, ಶಿಕ್ಷಣವನ್ನು ಸಮಗ್ರಗೊಳಿಸುತ್ತದೆ. ಹಾಗೇ ಆತ್ಮನಿರ್ಭರ ಭಾರತಕ್ಕೆ ಬಲವಾದ ಅಡಿಪಾಯವಾಗಿದೆ. ಎನ್​ಇಪಿ ಅಡಿಯಲ್ಲಿ ನಡೆದ ಸುಧಾರಣೆಗಳಿಗೆ ಜು.29ಕ್ಕೆ ಒಂದು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ, ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಉನ್ನತ ಶಿಕ್ಷಣಕ್ಕೆ ಪ್ರವೇಶ ಮತ್ತು ನಿರ್ಗಮನಕ್ಕೆ ವಿವಿಧ ಆಯ್ಕೆಗಳನ್ನು ಒದಗಿಸುವ ಶೈಕ್ಷಣಿಕ ಬ್ಯಾಂಕ್​ ಆಫ್​ ಕ್ರೆಡಿಟ್​ನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಹಾಗೇ, ಪ್ರಾದೇಶಿಕ ಭಾಷೆಗಳಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಕಾರ್ಯಕ್ರಮಗಳು ಮತ್ತು ಉನ್ನತ ಶಿಕ್ಷಣದ ಅಂತರರಾಷ್ಟ್ರೀಕರಣದ ಮಾರ್ಗಸೂಚಿಗಳನ್ನೂ ಇಂದು ಬಿಡುಗಡೆಗೊಳಿಸಲಿದ್ದಾರೆ ಎನ್ನಲಾಗಿದೆ.

1986ರ ನಂತರ ಬರೋಬ್ಬರಿ 34 ವರ್ಷಗಳ ನಂತರ ಹೊಸ ಶೈಕ್ಷಣಿಕ ನೀತಿಗೆ 2020ರಲ್ಲಿ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಇದರಡಿಯಲ್ಲಿ ಒಟ್ಟು ಆಂತರಿಕ ಉತ್ಪನ್ನದ ಶೇ.6ರಷ್ಟನ್ನು ಶಿಕ್ಷಣಕ್ಕೆ ವ್ಯಯ ಮಾಡಬೇಕು ಎಂಬ ಅಂಶವೂ ಉಲ್ಲೇಖವಾಗಿದೆ. ಹಾಗೇ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಅಳೆಯಲು ಅವರು ಗಳಿಸಿದ ಕ್ರೆಡಿಟ್​ ಮಾನದಂಡವಾಗಿದೆ. ಅದನ್ನು ಜಾರಿಗೆ ತಂದು ಒಂದು ವರ್ಷ ಕಳೆದಿದೆ.

ಇದನ್ನೂ ಓದಿ: KS Eshwarappa PC: ರಾಜಕೀಯ ಲಾಭಕ್ಕಾಗಿ ಕಾಯುತ್ತಿದ್ದವರಿಗೆ ನಿರಾಸೆ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

Published On - 12:32 pm, Thu, 29 July 21

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು