ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮುಖ್ಯ ಅತಿಥಿ
ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿರುವ ಎಎಂಯುನ ಉಪಕುಲಪತಿ ತಾರಿಕ್ ಮನ್ಸೂರ್, ಅಲಿಗಢ ಮುಸ್ಲಿಂ ವಿಶ್ವ ವಿದ್ಯಾಲಯ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸುತ್ತಿದೆ ಎಂದಿದ್ದಾರೆ.
ಅಲಿಗಢ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿರುವ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಲಿಗಢ ವಿಶ್ವವಿದ್ಯಾಲಯಕ್ಕೆ ಪ್ರಧಾನಿಯೊಬ್ಬರು ಅತಿಥಿಯಾಗಿ ತೆರಳುತ್ತಿರುವುದು ಐದು ದಶಕಗಳಲ್ಲಿ ಇದೇ ಮೊದಲು.
ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ವಿಶೇಷ ಅಂಚೆ ಸ್ಟಾಂಪ್ಗಳನ್ನು ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿರುವ ಎಎಂಯುನ ಉಪಕುಲಪತಿ ತಾರಿಕ್ ಮನ್ಸೂರ್, ಅಲಿಗಢ ಮುಸ್ಲಿಂ ವಿಶ್ವ ವಿದ್ಯಾಲಯ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸುತ್ತಿದೆ. ಅವರು ನಮ್ಮ ಆಮಂತ್ರಣವನ್ನು ಸ್ವೀಕರಿಸಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಖುಷಿ ಇದೆ ಎಂದಿದ್ದಾರೆ.
ಪ್ರಧಾನಿ ಜವಾಹರ್ಲಾಲ್ ನೆಹರು ಎಎಂಯುಗೆ ನಾಲ್ಕು ಬಾರಿ ಭೇಟಿ ನೀಡಿದ್ದರು. 1948,1955,1960,1963 ರಂದು ಅಲಿಗಢ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. 1964 ಲಾಲ್ ಬಹದ್ದೂರ್ ಶಾಸ್ತ್ರಿ ಅಲಿಗಢ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭೇಟಿ ನೀಡಿದ್ದರು. ಇದಾದ ನಂತರದಲ್ಲಿ ದೇಶದ ಯಾವುದೇ ಪ್ರಧಾನಿ ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿಲ್ಲ.
ಹೊಸ ಸಂಸತ್ ಭವನಕ್ಕೆ ಶಂಕುಸ್ಥಾಪನೆ: ಕನ್ನಡ ನಾಡಿನ ಅನುಭವ ಮಂಟಪ ನೆನೆದ ಪ್ರಧಾನಿ ನರೇಂದ್ರ ಮೋದಿ
Published On - 9:58 pm, Sat, 19 December 20