PM Modi: ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

| Updated By: ರಶ್ಮಿ ಕಲ್ಲಕಟ್ಟ

Updated on: Jun 18, 2021 | 10:58 AM

ಪ್ರಧಾನಿ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೊವಿಡ್ -19 ಫ್ರಂಟ್ಲೈನ್ ಕಾರ್ಯಕರ್ತರಿಗಾಗಿ ಕಸ್ಟಮೈಸ್ಡ್ ಕ್ರ್ಯಾಶ್ ಕೋರ್ಸ್ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ’ ಎಂದು ಪ್ರಧಾನಿಯವರ ಕಚೇರಿ ಹೇಳಿದೆ.

PM  Modi: ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ
ನರೇಂದ್ರ ಮೋದಿ
Follow us on

ದೆಹಲಿ: ಕೊವಿಡ್ ಹೋರಾಟದಲ್ಲಿನ ಮುಂಚೂಣಿ ಕಾರ್ಯಕರ್ತರಿಗಾಗಿ ಕಸ್ಟಮೈಸ್ ಮಾಡಿದ ಕ್ರ್ಯಾಶ್ ಕೋರ್ಸ್ ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ವಿಡಿಯೊ ಸಂವಾದ ಮೂಲಕ ಕೊವಿಡ್ -19 ಮುಂಚೂಣಿ ಕಾರ್ಯಕರ್ತರಿಗಾಗಿ ಕಸ್ಟಮೈಸ್ ಮಾಡಿದ ಕ್ರ್ಯಾಶ್ ಕೋರ್ಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಾರಂಭಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ತಿಳಿಸಿದೆ. 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಪಿಎಂಒ ತಿಳಿಸಿದೆ.

ಪ್ರಧಾನಿ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೊವಿಡ್ -19 ಫ್ರಂಟ್ಲೈನ್ ಕಾರ್ಯಕರ್ತರಿಗಾಗಿ ಕಸ್ಟಮೈಸ್ಡ್ ಕ್ರ್ಯಾಶ್ ಕೋರ್ಸ್ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ’ ಎಂದು ಅದು ಹೇಳಿದೆ.


ಚಾಲನೆ ನೀಡಿದ ನಂತರ ಪ್ರಧಾನಮಂತ್ರಿಯವರು ಭಾಷಣ ಮಾಡಲಿದ್ದು ಈ ಸಂದರ್ಭದಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರು ಉಪಸ್ಥಿತರಿರುತ್ತಾರೆ.

ಈ ಕಾರ್ಯಕ್ರಮದ ಮೂಲಕ ದೇಶಾದ್ಯಂತ ಸುಮಾರು 1 ಲಕ್ಷ ಕೋವಿಡ್ ವಾರಿಯರ್ಸ್ ಗೆ ಕೌಶಲ್ಯ ನೀಡಿ, ಅವರ ಕೌಶಲ್ಯ ವೃದ್ಧಿಸುವ ಗುರಿ ಹೊಂದಲಾಗಿದೆ. ಗೃಹ ಆರೈಕೆ ಬೆಂಬಲ, ಮೂಲ ಆರೈಕೆ ನೆರವು, ಅತ್ಯಾಧುನಿಕ ಆರೈಕೆ ನೆರವು, ತುರ್ತು ರಕ್ಷಣೆ ನೆರವು, ಮಾದರಿ ಸಂಗ್ರಹ ನೆರವು ಮತ್ತು ವೈದ್ಯಕೀಯ ಸಾಧನ ನೆರವು ಸೇರಿ ಆರು ಬಗೆಯ ಉದ್ಯೋಗಗಳಲ್ಲಿ ಕೋವಿಡ್ ವಾರಿಯರ್ಸ್ ಗೆ ತರಬೇತಿ ನೀಡಲಾಗುವುದು.

ಈ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ 3.0 ಅಡಿ ಸುಮಾರು 276 ಕೋಟಿ ವೆಚ್ಚದ ಕೇಂದ್ರದ ನೆರವಿನೊಂದಿಗೆ ವಿಶೇಷ ಕಾರ್ಯಕ್ರಮವನ್ನಾಗಿ ರೂಪಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ಸದ್ಯದ ಮತ್ತು ಭವಿಷ್ಯದ ಆರೋಗ್ಯದ ಕ್ಷೇತ್ರದ ಮಾನವ ಸಂಪನ್ಮೂಲದ ಅಗತ್ಯತೆಗಳನ್ನು ನೀಗಿಸಲು ಕೌಶಲ್ಯ ಹೊಂದಿದ ವೈದ್ಯಕೀಯೇತರ ಆರೋಗ್ಯ ಕಾರ್ಯಕರ್ತರನ್ನು ಸೃಷ್ಟಿಸಲಾಗುವುದು ಎಂದು ಪ್ರಧಾನಿಯವರ ಕಾರ್ಯಾಲಯದ ಪತ್ರಿಕಾ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: VivaTech Summit 2021: ಕೊರೊನಾ ನಿರ್ವಹಣೆಗೆ ಆವಿಷ್ಕಾರ, ನವೋದ್ಯಮಗಳ ಕೊಡುಗೆ ನೆನೆದ ಪ್ರಧಾನಿ ನರೇಂದ್ರ ಮೋದಿ

(Prime Minister Narendra Modi to launch a customised crash course programme for Covid -19 frontline worker today)

Published On - 10:54 am, Fri, 18 June 21