AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳನ್ನು ನಾವು ಈಡೇರಿಸಬೇಕಿದೆ: ಪ್ರಧಾನಿ ನರೇಂದ್ರ ಮೋದಿ

ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ದಶಕ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳನ್ನು ನಾವು ಈಡೇರಿಸಬೇಕಿದೆ.

ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳನ್ನು ನಾವು ಈಡೇರಿಸಬೇಕಿದೆ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 8:33 PM

Share

ದೆಹಲಿ: ಇಂದಿನಿಂದ ಸಂಸತ್‌ನ ಬಜೆಟ್ ಅಧಿವೇಶನ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಕ್ಕೂ ಮೊದಲು ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಸಂಸತ್ ಭವನದ ಬಳಿ ಮಾತನಾಡಿದ್ದಾರೆ. ಈ ದಶಕದ ಮೊದಲ ಅಧಿವೇಶನ ಆರಂಭವಾಗುತ್ತಿದೆ. ಭಾರತದ ಭವಿಷ್ಯದ ದೃಷ್ಟಿಯಿಂದ ಚರ್ಚೆಗಳು ನಡೆಯಲಿ ಎಂದು ಪ್ರಧಾನಿ ಮಾತನಾಡಿದ್ದಾರೆ.

ಇಂದು ಈ ದಶಕದ ಮೊದಲ ಅಧಿವೇಶನವ ಪ್ರಾರಂಭವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ದಶಕ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳನ್ನು ನಾವು ಈಡೇರಿಸಬೇಕಿದೆ. ಅದಕ್ಕಾಗಿ, ರಾಷ್ಟ್ರದ ಮುಂದೆ ಒಂದು ಸುವರ್ಣಾವಕಾಶ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದ ಬಳಿ ಹೇಳಿಕೆ ನೀಡಿದರು. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರಮೋದಿ ಮಾತನಾಡಿದರು.

ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತು ಆತ್ಮನಿರ್ಭರ ಭಾರತ ಕೇವಲ ಭಾರತದಲ್ಲಿ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಯೋಜನೆಯಲ್ಲ. ಬದಲಾಗಿ, ಇದು ಭಾರತೀಯರ ಜೀವನ ಗುಣಮಟ್ಟವನ್ನೂ ಅಭಿವೃದ್ಧಿಪಡಿಸುವ, ದೇಶದ ಆತ್ಮವಿಶ್ವಾಸವನ್ನು ಹೆಚ್ಚಿಸುವ ಯೋಜನೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದರು. ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಬಳಿಕ ಅವರು ಮಾತನಾಡಿದರು. ಕೃಷಿ ವಿಷಯದಲ್ಲಿ ನಾವು ಸ್ವಾವಲಂಬಿಗಳಾಗುವ ಮೂಲಕ ಆತ್ಮನಿರ್ಭರ ಭಾರತಕ್ಕೆ ಹೆಚ್ಚಿನ ಬಲ ತುಂಬಬೇಕು ಎಂದು ವೆಂಕಯ್ಯ ನಾಯ್ಡು ಹೇಳಿದರು.

ಸಂಸತ್ ಭವನದ ಭಾಷಣ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸಂಸತ್ ಭವನದಿಂದ ವಿರಮಿಸಿದರು

ಕೃಷಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ: ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

Published On - 1:07 pm, Fri, 29 January 21

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ