AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಜನ್ಮದಿನದ ಪ್ರಯುಕ್ತ ಸೆ.17ರಂದು ಪ್ರಧಾನಿ ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಹೊಸ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಉತ್ತಮ ಆರೋಗ್ಯ ಸೇವೆಗಳ ಮೂಲಕ ಮಹಿಳೆಯರು ಮತ್ತು ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಆರಂಭಿಸಲಿದ್ದಾರೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ತಮ್ಮ ಎಕ್ಸ್ ಪೇಜಿನಲ್ಲಿ ಇಂದು ಈ ಬಗ್ಗೆ ಘೋಷಿಸಿದ್ದಾರೆ.

ತಮ್ಮ ಜನ್ಮದಿನದ ಪ್ರಯುಕ್ತ ಸೆ.17ರಂದು ಪ್ರಧಾನಿ ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Sep 08, 2025 | 4:33 PM

Share

ನವದೆಹಲಿ, ಸೆಪ್ಟೆಂಬರ್ 8: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೆಪ್ಟೆಂಬರ್ 17ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್ ಪೇಜಿನಲ್ಲಿ ಪೋಸ್ಟ್‌ ಮಾಡಿದ್ದಾರೆ. “ಈ ಉಪಕ್ರಮವು ಭಾರತದಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಉತ್ತಮ ಪ್ರವೇಶ, ಗುಣಮಟ್ಟದ ಆರೈಕೆ ಮತ್ತು ಜಾಗೃತಿಯನ್ನು ಖಚಿತಪಡಿಸುತ್ತದೆ” ಎಂದು ಜೆಪಿ ನಡ್ಡಾ ಎಕ್ಸ್​​ನಲ್ಲಿ ಬರೆದಿದ್ದಾರೆ.

ದೇಶಾದ್ಯಂತ ಈ ಕಾರ್ಯಕ್ರಮದ ಭಾಗವಾಗಿ, ಆಯುಷ್ಮಾನ್ ಆರೋಗ್ಯ ಮಂದಿರಗಳು, ಸಮುದಾಯ ಆರೋಗ್ಯ ಕೇಂದ್ರಗಳು (CHCಗಳು) ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ 75,000 ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು. ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಆಯೋಜಿಸಲಾಗುವ ಈ ಶಿಬಿರಗಳು ಮಹಿಳೆಯರು ಮತ್ತು ಮಕ್ಕಳಿಗೆ ಅನುಗುಣವಾಗಿ ಅಗತ್ಯ ಸೇವೆಗಳನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತವೆ.

ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಬಿಜೆಪಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡ ಆಚರಿಸಲು ನಿರ್ಧರಿಸಿದೆ. ಈ ಸಮಯದಲ್ಲಿ ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಸರಣಿಯಲ್ಲಿ ಪ್ರಧಾನಿ ಮೋದಿ ತಮ್ಮ ಹುಟ್ಟುಹಬ್ಬದಂದು (ಸೆಪ್ಟೆಂಬರ್ 17) ಸ್ವಸ್ಥ ನಾರಿ ಸಶಕ್ತ ಪರಿವಾರ್ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ದೇಶಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ ಸೇವೆಗಳನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​ ಫೋನ್; ಉಕ್ರೇನ್ ಸಂಘರ್ಷ ಕೊನೆಗೊಳಿಸುವ ಬಗ್ಗೆ ಚರ್ಚೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17, 2025 ರಂದು ಸ್ವಸ್ಥ ನಾರಿ ಸಶಕ್ತ ಪರಿವಾರ್ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಭಾರತದಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ ಸೇವೆಗಳನ್ನು ಬಲಪಡಿಸುವುದು, ಉತ್ತಮ ಪ್ರವೇಶ, ಗುಣಮಟ್ಟದ ಆರೈಕೆ ಮತ್ತು ಜಾಗೃತಿಯನ್ನು ಖಚಿತಪಡಿಸುವುದು ಈ ಉಪಕ್ರಮದ ಉದ್ದೇಶವಾಗಿದೆ’ ಎಂದು ಜೆಪಿ ನಡ್ಡಾ ಹೇಳಿದ್ದಾರೆ.

ಇದಲ್ಲದೆ, ಪೌಷ್ಟಿಕಾಂಶ, ಆರೋಗ್ಯ ಜಾಗೃತಿ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸಲು ಎಲ್ಲಾ ಅಂಗನವಾಡಿಗಳಲ್ಲಿ ಪೋಷಣ್ ಮಾಸವನ್ನು ಆಚರಿಸಲಾಗುವುದು ಎಂದು ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಈ ಎಲ್ಲಾ ಕ್ರಮಗಳು ದೇಶಾದ್ಯಂತ ಆರೋಗ್ಯಕರ ಕುಟುಂಬಗಳು ಮತ್ತು ಸಬಲೀಕರಣಗೊಂಡ ಸಮುದಾಯಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ