ಆರು ದಿನ, 8 ರ‍್ಯಾಲಿಗಳು: ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಮೋದಿ ಪ್ರಚಾರ ಕಾರ್ಯಕ್ರಮ ಹೀಗಿದೆ
ಶನಿವಾರ, ಮೋದಿ ಬಿಜೆಪಿಯ ಎರಡು 'ಪರಿವರ್ತನ್ ಯಾತ್ರೆ'ಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢದ ಬಿಲಾಸ್‌ಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಕಾಲೇಜು ಮೈದಾನದಲ್ಲಿ ‘ಪರಿವರ್ತನ್ ಮಹಾಸಂಕಲ್ಪ’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮಾಧ್ಯಮಗಳಿಗೆ ತಿಳಿಸಿದ್ದಾರೆ
ದೆಹಲಿ ಸೆಪ್ಟೆಂಬರ್ 30:ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳಾದ ಮಧ್ಯಪ್ರದೇಶ (Madhya Pradesh), ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದಿನಿಂದ (ಶನಿವಾರ) ಮೆಗಾ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮೋದಿ ಅವರು ತಮ್ಮ ಭೇಟಿಗಳ ಸಮಯದಲ್ಲಿ, ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 6 ರ ನಡುವೆ ಆರು ದಿನಗಳಲ್ಲಿ ಎಂಟು ರ‍್ಯಾಲಿಗಳನ್ನು ನಡೆಸಲಿದ್ದು, ವಿವಿಧ ಯೋಜನೆಗಳು ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ.
ಛತ್ತೀಸ್‌ಗಢಕ್ಕೆ ಪ್ರಧಾನಿ ಮೋದಿ ಭೇಟಿ
ಶನಿವಾರ, ಮೋದಿ ಬಿಜೆಪಿಯ ಎರಡು ‘ಪರಿವರ್ತನ್ ಯಾತ್ರೆ’ಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢದ ಬಿಲಾಸ್‌ಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಕಾಲೇಜು ಮೈದಾನದಲ್ಲಿ ‘ಪರಿವರ್ತನ್ ಮಹಾಸಂಕಲ್ಪ’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಕ್ಟೋಬರ್ 3 ರಂದು ಬಸ್ತಾರ್‌ನ ಜಗದಲ್‌ಪುರದಲ್ಲಿ ಸಾರ್ವಜನಿಕ ಸಭೆಗಳಿಗಾಗಿ ಅವರು ರಾಜ್ಯಕ್ಕೆ ಮರಳಲಿದ್ದಾರೆ.
ತೆಲಂಗಾಣಕ್ಕೆ ಪ್ರಧಾನಿ ಮೋದಿ ಭೇಟಿ
ಅಕ್ಟೋಬರ್ 1 ರಂದು ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಗೆ ಭೇಟಿ ನೀಡಲಿರುವ ಮೋದಿ ಅಲ್ಲಿ ₹13,500 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸರ್ಕಾರದ ಪ್ರಕಟಣೆಯ ಪ್ರಕಾರ, ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ. ಪ್ರಧಾನಿಯವರು ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಸ್ಕೂಲ್ ಆಫ್ ಎಕನಾಮಿಕ್ಸ್, ಸ್ಕೂಲ್ ಆಫ್ ಮ್ಯಾಥಮೆಟಿಕ್ಸ್ ಮತ್ತು ಸ್ಟ್ಯಾಟಿಸ್ಟಿಕ್ಸ್, ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಲೆಕ್ಚರ್ ಹಾಲ್ ಕಾಂಪ್ಲೆಕ್ಸ್ – III, ಮತ್ತು ಸರೋಜಿನಿ ನಾಯ್ಡು ಸ್ಕೂಲ್ ಆಫ್ ಆರ್ಟ್ಸ್ & ಕಮ್ಯುನಿಕೇಷನ್ (ಅನೆಕ್ಸ್)- ಹೈದರಾಬಾದ್ ವಿಶ್ವವಿದ್ಯಾನಿಲಯದ ಐದು ಹೊಸ ಕಟ್ಟಡಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 3 ರಂದು ನಿಜಾಮಾಬಾದ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಗಳಿಗಾಗಿ ಅವರು ರಾಜ್ಯಕ್ಕೆ ಮರಳಲಿದ್ದಾರೆ.
ಇದನ್ನೂ ಓದಿ: ಮಾಧ್ಯಮ ಸಂದರ್ಶನಗಳಿಂದ ಸಿನಿಮಾ ರಂಗದವರೆಗೆ; ಆರ್ಎಸ್ಎಸ್ ಹೇಗೆ, ಏಕೆ ಬದಲಾಗುತ್ತಿದೆ? ಇಲ್ಲಿದೆ ವಿವರ
ಅಕ್ಟೋಬರ್ 2 ರಂದು ಮಧ್ಯಪ್ರದೇಶಕ್ಕೆ
ಅಕ್ಟೋಬರ್ 2 ರಂದು, ಮೋದಿ ಅವರು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಗ್ವಾಲಿಯರ್‌ನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ. ಅಕ್ಟೋಬರ್ 6 ರಂದು, ಅವರು ಜೋಧ್‌ಪುರಕ್ಕೆ ಭೇಟಿ ನೀಡಲಿದ್ದಾರೆ. ಜೋಧ್‌ಪುರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಅವರು ಸಾರ್ವಜನಿಕ ಸಭೆಗಳನ್ನು ನಡೆಸಲು ಜಬಲ್‌ಪುರ ಮತ್ತು ಜಗದಲ್‌ಪುರಕ್ಕೂ ಪ್ರಯಾಣಿಸುತ್ತಾರೆ ಎಂದು ವರದಿಯಾಗಿದೆ.
ಚಿತ್ತೋರಗಢದಲ್ಲಿ ಸಾರ್ವಜನಿಕ ರ‍್ಯಾಲಿ
ಅಕ್ಟೋಬರ್ 2 ರಂದು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಪ್ರಧಾನಿ ಚಿತ್ತೋರಗಢದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ