ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿ ಪ್ರಶಸ್ತಿ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31

ಪ್ರಶಸ್ತಿಗಾಗಿ ವೆಬ್ ಪೋರ್ಟಲ್‌ನಲ್ಲಿ ನೋಂದಣಿ ಮತ್ತು ನಾಮನಿರ್ದೇಶನಗಳನ್ನು ಸಲ್ಲಿಸಬಹುದು. 3ಜನವರಿ 2024 ರಂದು ನೋಂದಣಿ ಪ್ರಾರಂಭವಾಯಿತು. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2024 ಆಗಿರುತ್ತದೆ.

ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿ ಪ್ರಶಸ್ತಿ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jan 16, 2024 | 8:19 PM

ದೆಹಲಿ ಜನವರಿ 16: ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿ ಪ್ರಶಸ್ತಿಗಳ 2023 ಯೋಜನೆಯನ್ನು(“Prime Minister’s Awards for Excellence in Public Administration 2023) ಸರ್ಕಾರವು ಪ್ರಾರಂಭಿಸಿದೆ. ದೇಶಾದ್ಯಂತ ನಾಗರಿಕ ಸೇವಾ ಅಧಿಕಾರಿಗಳು ಮಾಡಿದ ಅನುಕರಣೀಯ ಕೆಲಸವನ್ನು ಗುರುತಿಸಿ ಪುರಸ್ಕರಿಸುವುದೇ ಇದರ ಉದ್ದೇಶ. 2023ರಲ್ಲಿ ಈ ಕೆಳಗಿನ ಯೋಜನೆಗಳ ಅಡಿಯಲ್ಲಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯಲ್ಲಿ ನಾಗರಿಕ ಸೇವಕರ ಕೊಡುಗೆಯನ್ನು ಗುರುತಿಸಲು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿ ಪ್ರಶಸ್ತಿಗಳ ಯೋಜನೆಯನ್ನು ಪರಿಷ್ಕರಿಸಲಾಗಿದೆ.

ವರ್ಗ 1: 12 ಆದ್ಯತಾ ವಲಯದ ಕಾರ್ಯಕ್ರಮಗಳ ಅಡಿಯಲ್ಲಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಈ ವರ್ಗದಲ್ಲಿ 10 ಪ್ರಶಸ್ತಿಗಳನ್ನು ನೀಡಲಾಗುವುದು. ವರ್ಗ 2: ಕೇಂದ್ರ ಸಚಿವಾಲಯಗಳು/ಇಲಾಖೆಗಳು, ರಾಜ್ಯಗಳು, ಜಿಲ್ಲೆಗಳಿಗೆ ಆವಿಷ್ಕಾರಗಳು, ಈ ವರ್ಗದ ಅಡಿಯಲ್ಲಿ 6 ಪ್ರಶಸ್ತಿಗಳನ್ನು ನೀಡಲಾಗುವುದು.

ಪ್ರಶಸ್ತಿಗಾಗಿ ವೆಬ್ ಪೋರ್ಟಲ್‌ನಲ್ಲಿ ನೋಂದಣಿ ಮತ್ತು ನಾಮನಿರ್ದೇಶನಗಳನ್ನು ಸಲ್ಲಿಸಬಹುದು. 3ಜನವರಿ 2024 ರಂದು ನೋಂದಣಿ ಪ್ರಾರಂಭವಾಯಿತು. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2024 ಆಗಿರುತ್ತದೆ.

ಯೋಜನೆಯಲ್ಲಿ ವ್ಯಾಪಕ ಭಾಗವಹಿಸುವಿಕೆಯನ್ನು ಉತ್ತೇಜಿಸಲು, ಆಡಳಿತ ಸುಧಾರಣಾ ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆಯು ಪ್ರಚಾರ ಅಭಿಯಾನವನ್ನು ಕೈಗೊಂಡಿದೆ. ಕೇಂದ್ರ ಸಚಿವಾಲಯಗಳು/ಇಲಾಖೆಗಳು, ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿ https://pmawards.gov.in ವೆಬ್ ಪೋರ್ಟಲ್‌ನಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅವರಿಗೆ ಸಲಹೆ ನೀಡಿದೆ. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಯ ಪ್ರಶಸ್ತಿಗಳು 2023 ಟ್ರೋಫಿ, ಸ್ಕ್ರಾಲ್ ಮತ್ತು ಯೋಜನೆ/ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಅಥವಾ ಸಾರ್ವಜನಿಕ ಕಲ್ಯಾಣದ ಯಾವುದೇ ಕ್ಷೇತ್ರದಲ್ಲಿನ ಸಂಪನ್ಮೂಲಗಳ ಅಂತರವನ್ನು ಕಡಿಮೆ ಮಾಡಲು ಪುರಸ್ಕೃತ ಜಿಲ್ಲೆ/ಸಂಸ್ಥೆಗೆ 20 ಲಕ್ಷ ರೂ. ನಗದು ಹೊಂದಿದೆ.

2019-2023 ವರ್ಷಗಳಲ್ಲಿ, ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಯೋಜನೆಯ ಅಡಿಯಲ್ಲಿ ಸರ್ಕಾರವು 62 ಪ್ರಶಸ್ತಿಗಳನ್ನು ನೀಡಿದೆ. 2022ರ ಯೋಜನೆಯಡಿ 743 ಜಿಲ್ಲಾಧಿಕಾರಿಗಳು 2,520 ನಾಮನಿರ್ದೇಶನಗಳನ್ನು ಸಲ್ಲಿಸಿದ್ದು, ಅದರಲ್ಲಿ 15 ನಾಮನಿರ್ದೇಶನಗಳಿಗೆ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ನೀಡಲಾಗಿದೆ. ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ನಾಗರಿಕ ಸೇವೆಗಳ ದಿನದಂದು ಭಾರತದ ಪ್ರಧಾನಮಂತ್ರಿಯವರು ಈ ಪ್ರಶಸ್ತಿ ಪ್ರದಾನ ಮಾಡುತ್ತಾರೆ.

ಇದನ್ನೂ ಓದಿ: PM Modi AP Visit: ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶಕ್ಕೆ ಭೇಟಿ, ನಾನಾ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ

ಪ್ರಶಸ್ತಿ ವಿಜೇತ ನಾಮನಿರ್ದೇಶನಗಳನ್ನು ಸಂಸದ್ ಟಿವಿಯಲ್ಲಿನ “ಅಭಿನವ್ ಪಹಲ್” ದೂರದರ್ಶನ ಸರಣಿಯ ಅಡಿಯಲ್ಲಿ ರಾಷ್ಟ್ರೀಯ ವೇದಿಕೆಯಲ್ಲಿ, ಮಾಸಿಕ ರಾಷ್ಟ್ರೀಯ ಉತ್ತಮ ಆಡಳಿತ ವೆಬ್‌ನಾರ್ ಸರಣಿಯಲ್ಲಿ ಮತ್ತು ರಾಜ್ಯ ರಾಜಧಾನಿಗಳಲ್ಲಿ ನಡೆದ ಉತ್ತಮ ಆಡಳಿತದ ಅಭ್ಯಾಸಗಳಿಗಾಗಿ ಉತ್ತಮ ಆಡಳಿತಕ್ಕಾಗಿ ಪ್ರಾದೇಶಿಕ ಸಮ್ಮೇಳನಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ