AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ನೇರವಾಗಿ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು. ಈ ವ್ಯವಸ್ಥೆಯನ್ನು ‘ವಾಕ್ ಇನ್’ ಎಂದು ಕರೆಯಲಾಗುತ್ತದೆ.

Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ
ಕೊವಿನ್ ಪೋರ್ಟಲ್
TV9 Web
| Updated By: ganapathi bhat|

Updated on: Jun 15, 2021 | 5:47 PM

Share

ದೆಹಲಿ: ಕೊರೊನಾ ವಿರುದ್ಧದ ಲಸಿಕೆ ಪಡೆಯಲು ರಿಜಿಸ್ಟ್ರೇಶನ್ ಮಾಡಿಕೊಳ್ಳುವುದು ಅಥವಾ ಅಪಾಯಿಂಟ್​ಮೆಂಟ್ ಪಡೆದುಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಇಂದು (ಜೂನ್ 15) ಮಾಹಿತಿ ನೀಡಿದೆ. ಗ್ರಾಮೀಣ ಭಾಗದ ಹಲವು ಮಂದಿ ಲಸಿಕೆ ಪಡೆಯುವಲ್ಲಿ ಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ, ಬುಕಿಂಗ್ ಅವಶ್ಯಕತೆ ಇಲ್ಲ ಎಂದು ಸರ್ಕಾರ ತಿಳಿಸಿದೆ.

18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ನೇರವಾಗಿ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು. ಈ ವ್ಯವಸ್ಥೆಯನ್ನು ‘ವಾಕ್ ಇನ್’ ಎಂದು ಕರೆಯಲಾಗುತ್ತದೆ. ಈಗ ಈ ಮಾದರಿಯ ಲಸಿಕೆ ನೀಡಿಕೆಯನ್ನು ಕೇಂದ್ರ ಸರ್ಕಾರ ಸೂಚಿಸಿದೆ.

ಕೊವಿನ್ ಪೋರ್ಟಲ್ ಮೂಲಕ ರಿಜಿಸ್ಟ್ರೇಷನ್ ನಡೆಸಿ ಲಸಿಕೆ ಪಡೆದುಕೊಳ್ಳುವುದು ಕೂಡ ಒಂದು ಮಾರ್ಗವಾಗಿದೆ ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡಿಕೆಯನ್ನು ಆಶಾ ಕಾರ್ಯಕರ್ತೆಯರು ಗಮನಿಸುತ್ತಿದ್ದಾರೆ. ಈಗ ನೇರವಾಗಿ ಲಸಿಕಾ ಕೇಂದ್ರಕ್ಕೆ ಭೇಟಿನೀಡಿ ಲಸಿಕೆ ಪಡೆಯಬಹುದು. ಲಸಿಕೆ ಸಹಾಯವಾಣಿ ಸಂಖ್ಯೆ 1075 ಕೂಡ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಲಾಗಿದೆ.

ಜೂನ್ 13ರ ಮಾಹಿತಿ ಪ್ರಕಾರ, ಕೊವಿನ್ ಪೋರ್ಟಲ್​ನಲ್ಲಿ ಲಸಿಕೆ ರಿಜಿಸ್ಟ್ರೇಷನ್ ಮಾಡಿಸಿಕೊಂಡಿರುವ 28.36 ಕೋಟಿ ಜನರ ಪೈಕಿ, 16.45 ಕೋಟಿ ಮಂದಿ (ಶೇಕಡಾ 58ರಷ್ಟು) ನೇರವಾಗಿ ವಾಕ್​ಇನ್ ಮೂಲಕ ಲಸಿಕೆ ಪಡೆದುಕೊಂಡವರಾಗಿದ್ದಾರೆ. ಜೊತೆಗೆ, ಜೂನ್ 13ರಂತೆ ಲಸಿಕೆ ಪಡೆದಿರುವ ಒಟ್ಟು 24.84 ಕೋಟಿ ಲಸಿಕೆ ಡೋಸ್​ಗಳಲ್ಲಿ 19.84 ಕೋಟಿ ಕೋಟಿ ಲಸಿಕೆ ಡೋಸ್ (ಸುಮಾರು ಶೇಕಡಾ 80ರಷ್ಟು) ಲಸಿಕೆ ನೀಡಿಕೆ ವಾಕ್​ಇನ್ ಮೂಲಕ ಆಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿಯಂತೆ, ಒಟ್ಟು 69,995 ಲಸಿಕಾ ಕೇಂದ್ರಗಳಲ್ಲಿ 49,883 ಅಂದರೆ ಶೇಕಡಾ 71ರಷ್ಟು ಲಸಿಕಾ ಕೇಂದ್ರಗಳು ಗ್ರಾಮೀಣ ಭಾಗಗಳಲ್ಲಿ ಇವೆ. ಹೀಗಾಗಿ, ಲಸಿಕೆ ನಿಡಿಕೆಗೆ ವಾಕ್ ಇನ್ ಕ್ರಮ ಅನುಸರಿಸುವ ಬಗ್ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: Corona Vaccine: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ; ಶೇಕಡಾ 100ರಷ್ಟು ಲಸಿಕೆ ನೀಡಿಕೆ ಸಾಧಿಸಿದ ಮೊದಲ ಗ್ರಾಮವಿದು!

ಕೊವಿಡ್​ 19 ಲಸಿಕೆಯಿಂದ ಭಾರತದಲ್ಲಿ ಮೃತಪಟ್ಟವರು ಎಷ್ಟು ಮಂದಿ?..ಕೊನೆಗೂ ಸಂಖ್ಯೆ ದೃಢಪಡಿಸಿದ ಎಇಎಫ್​ಐ ಸಮಿತಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!