AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಪ್ರಯಾಣ ದರ ಏರಿಕೆಗೆ ಆಗ್ರಹಿಸಿ ಕೇರಳದ ಖಾಸಗಿ ಬಸ್ ನಿರ್ವಾಹಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ಸಾರ್ವಜನಿಕರ ಪ್ರಯಾಣ ದರವನ್ನು ಹೆಚ್ಚಿಸಬೇಕು ಮತ್ತು ವಿದ್ಯಾರ್ಥಿಗಳ ರಿಯಾಯಿತಿ ದರವನ್ನು ಹೆಚ್ಚಿಸಬೇಕು ಎಂದು ಮಾಲೀಕರು ಒತ್ತಾಯಿಸಿದ್ದಾರೆ. ಇದಲ್ಲದೆ, ನಿರ್ವಾಹಕರು ಪ್ರತಿ ಕಿಲೋಮೀಟರ್ ಶುಲ್ಕವನ್ನು ಪ್ರಸ್ತುತ 90 ಪೈಸೆಯಿಂದ 1.10 ರೂ.ಗೆ ಹೆಚ್ಚಿಸಲು...

ಕೇರಳ: ಪ್ರಯಾಣ ದರ ಏರಿಕೆಗೆ ಆಗ್ರಹಿಸಿ ಕೇರಳದ ಖಾಸಗಿ ಬಸ್ ನಿರ್ವಾಹಕರಿಂದ ಅನಿರ್ದಿಷ್ಟಾವಧಿ ಮುಷ್ಕರ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 24, 2022 | 3:41 PM

Share

ಕೊಚ್ಚಿ: ನಾಲ್ಕೂವರೆ ತಿಂಗಳ ವಿರಾಮದ ನಂತರ ಇಂಧನ ಬೆಲೆ ಹೆಚ್ಚಳವಾಗಿದ್ದು, ಕೇರಳ(Kerala) ಖಾಸಗಿ ಬಸ್ ನಿರ್ವಾಹಕರು ಟಿಕೆಟ್ ದರ ಹೆಚ್ಚಳಕ್ಕೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದಾರೆ .ಇಂದು ಮಾರ್ಚ್ 24, ಗುರುವಾರದಿಂದ ರಾಜ್ಯದಲ್ಲಿ ಖಾಸಗಿ ಬಸ್​​ಗಳು (Private Bus) ಅನಿರ್ದಿಷ್ಟಾವಧಿ ರಸ್ತೆಗಿಳಿಯುವುದಿಲ್ಲ ಎಂದು ಹೇಳಿವೆ. ಕೇರಳ ರಾಜ್ಯ ಖಾಸಗಿ ಬಸ್ ಆಪರೇಟರ್ಸ್ ಫೆಡರೇಶನ್ ಅಧ್ಯಕ್ಷ ಸತ್ಯನ್, ಉದ್ದೇಶಿತ ಮುಷ್ಕರದ ಕುರಿತು ಎರಡು ವಾರಗಳ ಹಿಂದೆ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ ಎಂದು ಪಿಟಿಐಗೆ ತಿಳಿಸಿದರು. ಆದರೆ, ಈ ಬಗ್ಗೆ ಇನ್ನೂ ಚರ್ಚೆಗೆ ಕರೆದಿಲ್ಲ ಎಂದರು. ಪರೀಕ್ಷೆ ನಡೆಯುತ್ತಿರುವುದರಿಂದ ಖಾಸಗಿ ಬಸ್‌ಗಳಲ್ಲಿ ನಿತ್ಯ ಸಂಚರಿಸುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಬಸ್ ಚಾಲಕರು ಮುಷ್ಕರ ನಡೆಸದಂತೆ ರಾಜ್ಯ ಸಾರಿಗೆ ಸಚಿವ ಆಂಟನಿ ರಾಜು (Antony Raju)ಕೇಳಿಕೊಂಡಿದ್ದಾರೆ. ಆದರೆ, ಖಾಸಗಿ ಬಸ್ ನಿರ್ವಾಹಕರ ಸಂಕಷ್ಟದ ಬಗ್ಗೆ ನವೆಂಬರ್‌ನಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸತ್ಯನ್ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಮತ್ತು ಅದರ ಜವಾಬ್ದಾರಿ ಬಸ್ ಮಾಲೀಕರ ಮೇಲಲ್ಲ ಎಂದು ಅವರು ಹೇಳಿದ್ದಾರೆ.  ಇದೇ ವೇಳೆ ಮಾತನಾಡಿದ ಸಚಿವರು, ಖಾಸಗಿ ಬಸ್ ನಿರ್ವಾಹಕರು ತಮ್ಮ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಬಹುದು ಎಂದು ಭಾವಿಸಬಾರದು. ಖಾಸಗಿ ಬಸ್ ನಿರ್ವಾಹಕರು ಮುಷ್ಕರ ನಡೆಸಿದರೆ, ಸಾರ್ವಜನಿಕರ ಪ್ರಯಾಣ ಅಗತ್ಯಗಳನ್ನು ಪೂರೈಸಲು ಕೆಎಸ್‌ಆರ್‌ಟಿಸಿ ಹೆಚ್ಚಿನ ಸೇವೆಗಳನ್ನು ನಡೆಸಲಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರ ಪ್ರಯಾಣ ದರವನ್ನು ಹೆಚ್ಚಿಸಬೇಕು ಮತ್ತು ವಿದ್ಯಾರ್ಥಿಗಳ ರಿಯಾಯಿತಿ ದರವನ್ನು ಹೆಚ್ಚಿಸಬೇಕು ಎಂದು ಮಾಲೀಕರು ಒತ್ತಾಯಿಸಿದ್ದಾರೆ. ಇದಲ್ಲದೆ, ನಿರ್ವಾಹಕರು ಪ್ರತಿ ಕಿಲೋಮೀಟರ್ ಶುಲ್ಕವನ್ನು ಪ್ರಸ್ತುತ 90 ಪೈಸೆಯಿಂದ 1.10 ರೂ.ಗೆ ಹೆಚ್ಚಿಸಲು ಮತ್ತು ಕೊವಿಡ್ ಸಾಂಕ್ರಾಮಿಕ ಅವಧಿಗೆ ರಸ್ತೆ ತೆರಿಗೆಯನ್ನು ಮನ್ನಾ ಮಾಡಲು ಕೋರಿದ್ದಾರೆ.

ನಾಲ್ಕೂವರೆ ತಿಂಗಳ ಚುನಾವಣೆ ಸಂಬಂಧಿತ ವಿರಾಮದ ನಂತರ ಮಾರ್ಚ್ 23 ಬುಧವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ ಎರಡನೇ ದಿನವೂ ಲೀಟರ್‌ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದೆ. ದರ ಪರಿಷ್ಕರಣೆಯಲ್ಲಿ ದಾಖಲೆಯ 137 ದಿನಗಳ ವಿರಾಮವು ಮಾರ್ಚ್ 22 ರಂದು ದರಗಳಲ್ಲಿ ಲೀಟರ್‌ಗೆ 80 ಪೈಸೆ ಹೆಚ್ಚಳದೊಂದಿಗೆ ಕೊನೆಗೊಂಡಿತು. ಉತ್ತರ ಪ್ರದೇಶ ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ನವೆಂಬರ್ 4 ರಿಂದ ಬೆಲೆ ಏರಿಕೆಯಾಗಿರಲಿಲ್ಲ. ಈ ಅವಧಿಯಲ್ಲಿ ಕಚ್ಚಾ ವಸ್ತುಗಳ (ಕಚ್ಚಾ ತೈಲ) ಬೆಲೆ ಪ್ರತಿ ಬ್ಯಾರೆಲ್‌ಗೆ $ 30 ರಷ್ಟು ಏರಿತ್ತು.

ಇದನ್ನೂ ಓದಿ: ಕೆ ರೈಲ್ ಯೋಜನೆ ವಿರುದ್ಧ ಸಂಸತ್​​ಗೆ ಮೆರವಣಿಗೆ ನಡೆಸಿದ ಕೇರಳದ ಕಾಂಗ್ರೆಸ್ ಸಂಸದರ ಮೇಲೆ ಪೊಲೀಸರ ಹಲ್ಲೆ; ಆರೋಪ ನಿರಾಕರಿಸಿದ ದೆಹಲಿ ಪೊಲೀಸ್

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್