AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇ ತಿಂಗಳ ಅಂತ್ಯದೊಳಗೆ ಏರ್​ ಇಂಡಿಯಾ ಖಾಸಗೀಕರಣ ನಿಶ್ಚಿತ.. ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ’-ಸಚಿವ ಹರ್ದೀಪ್​ ಸಿಂಗ್ ಪುರಿ

Air India: 2007ರಲ್ಲಿ ಇಂಡಿಯನ್ ಏರ್​ಲೈನ್​​ನೊಂದಿಗೆ ವಿಲೀನಗೊಂಡಾಗಿನಿಂದಲೂ ನಷ್ಟದಲ್ಲಿರುವ ಏರ್​ ಇಂಡಿಯಾ ಕಡೆಗೂ ಚೇತರಿಸಿಕೊಳ್ಳಲೇ ಇಲ್ಲ. ಈಗ ಏರ್​ ಇಂಡಿಯಾ ಹಣ ಗಳಿಸುತ್ತಿದ್ದರೂ ದಿನಕ್ಕೆ 20 ಕೋಟಿ ರೂ.ನಷ್ಟು ನಷ್ಟವಾಗುತ್ತಲೇ ಇದೆ.

‘ಮೇ ತಿಂಗಳ ಅಂತ್ಯದೊಳಗೆ ಏರ್​ ಇಂಡಿಯಾ ಖಾಸಗೀಕರಣ ನಿಶ್ಚಿತ.. ಇಲ್ಲದಿದ್ದರೆ ಮುಚ್ಚಬೇಕಾಗುತ್ತದೆ’-ಸಚಿವ ಹರ್ದೀಪ್​ ಸಿಂಗ್ ಪುರಿ
ಏರ್​ ಇಂಡಿಯಾ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Mar 27, 2021 | 7:29 PM

Share

ನವದೆಹಲಿ: ಏರ್​ ಇಂಡಿಯಾ (Air India) ವನ್ನು ಒಂದೋ ಮಾರಾಟ ಮಾಡಬೇಕು.. ಇಲ್ಲ ಮುಚ್ಚಬೇಕು. ಇದರ ಹೊರತಾಗಿ ಬೇರೆಯಾವುದೇ ದಾರಿ ಕಾಣುತ್ತಿಲ್ಲ. ನಮ್ಮ ಬಳಿ ಬಂಡವಾಳ ಹೂಡಿಕೆ ಸಾಧ್ಯವಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್​ ಸಿಂಗ್​ ಪುರಿ ಇಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಏರ್​ ಇಂಡಿಯಾವನ್ನು ಮೇ ಅಂತ್ಯದ ಒಳಗೆ ಖಾಸಗೀಕರಣ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಸೋಮವಾರ ನಡೆದ ಸಭೆಯಲ್ಲಿ ಏರ್​ ಇಂಡಿಯಾ ಖಾಸಗೀಕರಣದ ನಿರ್ಧಾರವಾಗಿದೆ. ಇನ್ನು 64 ದಿನಗಳಲ್ಲಿ ಅದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಮುಗಿಸಲು ಸರ್ಕಾರ ತೀರ್ಮಾನಿಸಿದೆ. ಹಲವು ಹರಾಜುದಾರರು ಮುಂದೆ ಬಂದಿದ್ದಾರೆ. ಅದರಲ್ಲೂ ಶಾರ್ಟ್​ಲಿಸ್ಟ್ ಮಾಡಲಾಗಿದೆ ಎಂದು ವಿವರಿಸಿದ ಸಚಿವರು, ಏರ್​ ಇಂಡಿಯಾಕ್ಕೆ ಈಗಲೂ 60 ಸಾವಿರ ಕೋಟಿ ರೂ.ಸಾಲ ಇದೆ ಎಂದೂ ತಿಳಿಸಿದ್ದಾರೆ.

2007ರಲ್ಲಿ ಇಂಡಿಯನ್ ಏರ್​ಲೈನ್​​ನೊಂದಿಗೆ ವಿಲೀನಗೊಂಡಾಗಿನಿಂದಲೂ ನಷ್ಟದಲ್ಲಿರುವ ಏರ್​ ಇಂಡಿಯಾ ಕಡೆಗೂ ಚೇತರಿಸಿಕೊಳ್ಳಲೇ ಇಲ್ಲ. ಈಗ ಏರ್​ ಇಂಡಿಯಾ ಹಣ ಗಳಿಸುತ್ತಿದ್ದರೂ ದಿನಕ್ಕೆ 20 ಕೋಟಿ ರೂ.ನಷ್ಟು ನಷ್ಟವಾಗುತ್ತಲೇ ಇದೆ. ನಾನಂತೂ ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಳಿ ಹೇಳಿಬಿಟ್ಟಿದ್ದೇನೆ. ನಿರ್ಮಲಾ ಜೀ, ನನಗಂತೂ ಏರ್​ ಇಂಡಿಯಾವನ್ನು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯವಿಲ್ಲ.. ಸ್ವಲ್ಪ ಹಣಕೊಡಿ ಎಂದು ಕೇಳಿದ್ದೆ ಎಂದೂ ಹರ್ದೀಪ್​ ಸಿಂಗ್ ಪುರಿ ಹೇಳಿದ್ದಾರೆ. ಇನ್ನು ಈ ಹಿಂದೆ ಕೂಡ ಕೆಲವು ಬಾರಿ ಏರ್​ ಇಂಡಿಯಾ ಖಾಸಗೀಕರಣಕ್ಕೆ ಮುಂದಾಗಿದ್ದರೂ ಅದು ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಹಾಗೇ ಬಿಟ್ಟರೆ ಮುಚ್ಚುವುದೊಂದೇ ದಾರಿ ಇರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕೇರಳದ ಕೋಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನಾಪಘಾತ ಪೈಲಟ್‌ ಸ್ಥಳದಲ್ಲೇ ಸಾವು

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

Published On - 7:25 pm, Sat, 27 March 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?