ವಿಪಕ್ಷ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ; ಸಚಿವ ಕಿರಣ್ ರಿಜಿಜು ವಿರುದ್ಧ ವಿಶೇಷ ಹಕ್ಕು ಮಂಡನೆ

ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯದ ಬಗ್ಗೆ ಬುಧವಾರ ಮಾತನಾಡಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ವಿರೋಧ ಪಕ್ಷದ ಸಂಸದರು ಸದನದಲ್ಲಿ ಇರಲು ಅರ್ಹರಲ್ಲ ಎಂದು ಟೀಕಿಸಿದ್ದರು.

ವಿಪಕ್ಷ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ; ಸಚಿವ ಕಿರಣ್ ರಿಜಿಜು ವಿರುದ್ಧ ವಿಶೇಷ ಹಕ್ಕು ಮಂಡನೆ
ಕಿರಣ್ ರಿಜಿಜು
Follow us
ಸುಷ್ಮಾ ಚಕ್ರೆ
|

Updated on: Dec 12, 2024 | 8:10 PM

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ನಡುವೆ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಂದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಿರುದ್ಧ ಇಂದು ವಿಶೇಷ ಹಕ್ಕು ನಿರ್ಣಯವನ್ನು ಮಂಡಿಸಲಾಯಿತು. ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಿರುದ್ಧ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ಅವರು ವಿಶೇಷ ಹಕ್ಕು ಪತ್ರವನ್ನು ಸಲ್ಲಿಸಿದ್ದಾರೆ. ಈ ನೋಟಿಸ್‌ಗೆ ವಿರೋಧ ಪಕ್ಷಗಳ 60 ನಾಯಕರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಸದನದಲ್ಲಿ ವಿಪಕ್ಷಗಳನ್ನು ಉದ್ದೇಶಿಸಿ ಮಾತನಾಡಿದ ಕಿರಣ್ ರಿಜಿಜು, ನೀವೆಲ್ಲರೂ ಈ ಸದನದಲ್ಲಿರಲು ಯೋಗ್ಯರಲ್ಲ ಎಂದು ಹೇಳಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನ ಸುಗಮವಾಗಿ ನಡೆಯಲು ತಮ್ಮ ಕೈಲಾದಷ್ಟು ಪ್ರಯತ್ನಿಸುವ ಬದಲು ಪದೇ ಪದೇ ವಿರೋಧ ಪಕ್ಷಗಳನ್ನು ಅವಮಾನಿಸುತ್ತಿದ್ದಾರೆ” ಎಂದು ಸಾಗರಿಕಾ ಘೋಷ್ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷಗಳ ವಿರುದ್ಧ ಸಚಿವ ಕಿರಣ್ ರಿಜಿಜು ವಾಗ್ದಾಳಿ

ಸಚಿವ ಕಿರಣ್ ರಿಜಿಜು ಅವರು ವಿರೋಧ ಪಕ್ಷದ ಸದಸ್ಯರನ್ನು ಅವಮಾನಿಸಿದ್ದಾರೆ. ಸಂಸತ್ತಿನ ಒಳಗೆ ಮತ್ತು ಹೊರಗೆ ವೈಯಕ್ತಿಕ ಪದಗಳನ್ನು ಬಳಸಿದ್ದಾರೆ. ಇದು ಅವರು ಹೊಂದಿರುವ ಉನ್ನತ ಹುದ್ದೆಗೆ ಹೊಂದಿಕೆಯಾಗುವುದಿಲ್ಲ. ಅವರ ಸ್ಥಾನದ ಸಂಪೂರ್ಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಸಾಗರಿಕಾ ಆರೋಪಿಸಿದ್ದಾರೆ.

ವಿರೋಧ ಪಕ್ಷದ ಸಂಸದರು ಸದನದಲ್ಲಿ ಇರಲು ಅರ್ಹರಲ್ಲ ಎಂದಿದ್ದ ಕಿರಣ್ ರಿಜಿಜು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ಮೇಲಿನ ದಾಳಿಯ ಬಗ್ಗೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. “ನಿಮಗೆ ರಾಜ್ಯಸಭಾ ಅಧ್ಯಕ್ಷ ಕುರ್ಚಿಯನ್ನು ಗೌರವಿಸಲು ಸಾಧ್ಯವಾಗದಿದ್ದರೆ ಈ ಸದನದ ಸದಸ್ಯರಾಗಲು ನಿಮಗೆ ಯಾವುದೇ ಹಕ್ಕಿಲ್ಲ” ಎಂದು ರಿಜಿಜು ಹೇಳಿದ್ದರು.

ಇದನ್ನೂ ಓದಿ: ಜಗದೀಪ್ ಧನಕರ್ ಬಿಜೆಪಿ ಸರ್ಕಾರದ ವಕ್ತಾರ; ಅವಿಶ್ವಾಸ ನಿರ್ಣಯಕ್ಕೆ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ಪಕ್ಷಪಾತ ಧೋರಣೆಯ ಆರೋಪದಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷವಾದ ಇಂಡಿಯಾ ಬ್ಲಾಕ್‌ನ 60 ಸಂಸದರು ಮಂಗಳವಾರ ರಾಜ್ಯಸಭೆಯಲ್ಲಿ ನೋಟಿಸ್ ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!