ಅಮೆರಿಕ ಭೇಟಿಗೆ ಪ್ರಿಯಾಂಕ್ ಖರ್ಗೆಗೆ ಅನುಮತಿ ನಿರಾಕರಣೆ; ಕೋರ್ಟ್ ಮೆಟ್ಟಿಲೇರಲು ಪಿ. ಚಿದಂಬರಂ ಸಲಹೆ

ವಿದೇಶದ ಪ್ರವಾಸಕ್ಕೆ ತೆರಳಿದ್ದ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಕ್ಕೆ ತೆರಳಲು ಕೇಂದ್ರ ಸರ್ಕಾರದಿಂದ ಅನುಮತಿ ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಅಮೆರಿಕದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ಮರಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸೂಚಿಸಿದ್ದಾರೆ.

ಅಮೆರಿಕ ಭೇಟಿಗೆ ಪ್ರಿಯಾಂಕ್ ಖರ್ಗೆಗೆ ಅನುಮತಿ ನಿರಾಕರಣೆ; ಕೋರ್ಟ್ ಮೆಟ್ಟಿಲೇರಲು ಪಿ. ಚಿದಂಬರಂ ಸಲಹೆ
P. Chidambaram

Updated on: Jun 20, 2025 | 4:08 PM

ನವದೆಹಲಿ, ಜೂನ್ 20: ಪ್ಯಾರಿಸ್ ಪ್ರವಾಸ ಮುಗಿಸಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅಲ್ಲಿಯ ಆಯೋಜಕರ ಆಹ್ವಾನದ ಮೇರೆಗೆ ಅಮೆರಿಕಕ್ಕೆ ತೆರಳಬೇಕಿದ್ದ ಕರ್ನಾಟಕದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಅಮೆರಿಕಕ್ಕೆ ಹೋಗಲು ಕ್ಲಿಯರೆನ್ಸ್‌ ಸಿಗದ ಕಾರಣ ಅಮೆರಿಕದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆ ವಾಪಾಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಜೊತೆಗಿದ್ದ ಐಎಎಸ್​ ಅಧಿಕಾರಿಗೆ ಅಮೆರಿಕಕ್ಕೆ ತೆರಳಲು ಅನುಮತಿ ಸಿಕ್ಕಿತ್ತು. ಆದರೆ, ಸಚಿವ ಪ್ರಿಯಾಂಕ್ ಖರ್ಗೆಗೆ ಯಾವುದೇ ಕಾರಣವನ್ನೂ ನೀಡದೆ ಅನುಮತಿ ನಿರಾಕರಿಸಲಾಗಿತ್ತು. ಇದಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ (P Chidambaram) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಬೆಂಗಳೂರಿಗೆ ಬಂದಿದ್ದ ಪ್ರಿಯಾಂಕ್ ಖರ್ಗೆ ಅಮೆರಿಕ ಭೇಟಿಗೆ ಕ್ಲಿಯರೆನ್ಸ್ ಸಿಗದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಐಟಿ ಬಿಟಿಗೆ ಸಂಬಂಧಪಟ್ಟಂತೆ ಪ್ರಿಯಾಂಕ್ ಖರ್ಗೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಬೇಕಿತ್ತು. ಪ್ರಿಯಾಂಕ್‌ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗೆ ಅಮೆರಿಕಕ್ಕೆ ತೆರಳಲು ಕ್ಲಿಯರೆನ್ಸ್ ಸಿಕ್ಕಿತ್ತು. ಪ್ಯಾರಿಸ್‌ ಏರ್‌ ಶೋನಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆ ನಿನ್ನೆ ಬೆಂಗಳೂರಿಗೆ ಮರಳಲಿದ್ದರು.

ಇದನ್ನೂ ಓದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಬಿಹಾರ, ಒಡಿಶಾ, ಆಂಧ್ರಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ, 2 ದಿನಗಳ ಪ್ರವಾಸ
ಹುಟ್ಟುಹಬ್ಬದ ದಿನವೇ ಹೊಸ ಬಂಗಲೆಗೆ ಸ್ಥಳಾಂತರಗೊಂಡ ರಾಹುಲ್ ಗಾಂಧಿ
ಮೋದಿ ಸರ್ಕಾರದ ಅವಧಿಯಲ್ಲಿ ಬುಡಕಟ್ಟು ಸಮುದಾಯದ ಜೀವನ ಮಟ್ಟ ಸಂಪೂರ್ಣ ಬದಲು

ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ: ಕಾರಣ..!

ಐಟಿ ಬಿಟಿಗೆ ಸಂಬಂಧಪಟ್ಟಂತೆ ಪ್ರಿಯಾಂಕ್ ಖರ್ಗೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಬೇಕಿತ್ತು. ಪ್ರಿಯಾಂಕ್‌ ಖರ್ಗೆ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗೆ ಅಮೆರಿಕಕ್ಕೆ ತೆರಳಲು ಕ್ಲಿಯರೆನ್ಸ್ ಸಿಕ್ಕಿತ್ತು. ಆದರೆ, ಪ್ಯಾರಿಸ್‌ ಪ್ರವಾಸದ ಬಳಿಕ ಅಮೆರಿಕಕ್ಕೆ ತೆರಳಬೇಕಿದ್ದ ಐಟಿ ಬಿಟಿ ಸಚಿವರಿಗೆ ಕ್ಲಿಯರೆನ್ಸ್‌ ಸಿಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್‌ ಬಂದಿದ್ದರು.


ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಪಿ. ಚಿದಂಬರಂ, ಸಂಭಾವ್ಯ ಹೂಡಿಕೆದಾರರನ್ನು ಭೇಟಿ ಮಾಡಲು ಅಮೆರಿಕಕ್ಕೆ ಭೇಟಿ ನೀಡಲು ನಿಯೋಗವನ್ನು ಮುನ್ನಡೆಸಲು ಭಾರತ ಸರ್ಕಾರ ಅನುಮತಿ ನಿರಾಕರಿಸಿದೆ ಎಂಬ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಆರೋಪಕ್ಕೆ ಭಾರತ ಸರ್ಕಾರ ತಕ್ಷಣವೇ ಉತ್ತರಿಸಬೇಕು. ಕೇಂದ್ರ ಸರ್ಕಾರದ ಉತ್ತರ ತೃಪ್ತಿಕರವಾಗಿಲ್ಲದಿದ್ದರೆ ಪ್ರಿಯಾಂಕ್ ಖರ್ಗೆ ತಮಗೆ ಕೇಂದ್ರ ಸರ್ಕಾರ ನೀಡಿದ ಅನುಮತಿ ನಿರಾಕರಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದಿದ್ದಾರೆ.

ಇದನ್ನೂ ಓದಿ: ನಾವು ಆಟ ಆಡಲು ವಿದೇಶಕ್ಕೆ ಹೋಗ್ತಿಲ್ಲ: ಅಮೆರಿಕಕ್ಕೆ ತೆರಳಲು ಅನುಮತಿ ನೀಡದ್ದಕ್ಕೆ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಪ್ರಯಾಣ ಮಾಡುವ ಹಕ್ಕು ಮತ್ತು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮೂಲಭೂತ ಹಕ್ಕುಗಳಾಗಿವೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಕೋರ್ಟ್ ಮೊರೆಹೋಗಬಹುದು ಎಂದು ಪಿ. ಚಿದಂಬರಂ ಸಲಹೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:06 pm, Fri, 20 June 25