Priyanka Gandhi: ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊವಿಡ್ ಪಾಸಿಟಿವ್ ದೃಢ
ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೌಮ್ಯ ರೋಗಲಕ್ಷಣಗಳು ಪತ್ತೆಯಾಗಿವೆ. ಸದ್ಯಕ್ಕೆ ಅವರು ತಮ್ಮ ನಿವಾಸದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರಿಗೆ ಕೊವಿಡ್ -19 ಪಾಸಿಟಿವ್ (COVID-19 Positive) ದೃಢಪಟ್ಟಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮತ್ತು ಪ್ರಿಯಾಂಕಾ ಅವರ ತಾಯಿ ಸೋನಿಯಾ ಗಾಂಧಿಗೂ (Sonia Gandhi) 1 ದಿನಗಳ ಹಿಂದೆ ಕೊರೊನಾವೈರಸ್ ಪಾಸಿಟಿವ್ ದೃಢಪಟ್ಟಿತ್ತು. ಅದರ ಬೆನ್ನಲ್ಲೇ ಇದೀಗ ಪ್ರಿಯಾಂಕಾ ಗಾಂಧಿಗೂ ಕೊವಿಡ್ ಸೋಂಕು ತಗುಲಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೌಮ್ಯ ರೋಗಲಕ್ಷಣಗಳು ಪತ್ತೆಯಾಗಿವೆ. ಸದ್ಯಕ್ಕೆ ಅವರು ತಮ್ಮ ನಿವಾಸದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಆಕೆಯ ಸಂಪರ್ಕಕ್ಕೆ ಬಂದವರೆಲ್ಲರೂ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.
I’ve tested positive for COVID-19 with mild symptoms. Following all the protocols, I have quarantined myself at home.
I would request those who came in contact with me to take all necessary precautions.
— Priyanka Gandhi Vadra (@priyankagandhi) June 3, 2022
“ನಾನು ಸೌಮ್ಯ ರೋಗಲಕ್ಷಣಗಳೊಂದಿಗೆ ಕೊವಿಡ್ ಪಾಸಿಟಿವ್ ಸೋಂಕು ಹೊಂದಿದ್ದೇನೆ. ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.
Congress leader Priyanka Gandhi Vadra tests positive for COVID-19
“I’ve tested positive with mild symptoms. Following all the protocols, I’ve quarantined myself at home. I would request those who came in contact with me to take all necessary precautions,” she tweets
(File Pic) pic.twitter.com/KmvHyAPUoD
— ANI (@ANI) June 3, 2022
ಇದನ್ನೂ ಓದಿ: Sonia Gandhi: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು
ಬುಧವಾರ ಸಂಜೆ ಸೋನಿಯಾ ಗಾಂಧಿ ಅವರಿಗೆ ಸೌಮ್ಯ ಜ್ವರ ಕಾಣಿಸಿಕೊಂಡಿದ್ದು, ಗುರುವಾರ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಆಕೆಗೆ ಪಾಸಿಟಿವ್ ಕಂಡುಬಂದಿದೆ. ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಳೆದ ವಾರದಲ್ಲಿ ಸೋನಿಯಾ ಗಾಂಧಿ ಹಲವಾರು ನಾಯಕರನ್ನು ಭೇಟಿ ಮಾಡಿದ್ದಾರೆ. ಇನ್ನು ಕೆಲವರು ಕೂಡ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದರು. ಅವರಲ್ಲಿ ಕೆಲವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಅವರು ಗುರುವಾರ ಟ್ವೀಟ್ ಮಾಡಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:11 pm, Fri, 3 June 22