ತೆಲಂಗಾಣ ವಿಧಾನಸಭಾ ಚುನಾವಣೆ: ಜು.30ಕ್ಕೆ ಪ್ರಿಯಾಂಕಾ ಗಾಂಧಿ ಕೊಲ್ಲಾಪುರಕ್ಕೆ ಭೇಟಿ, ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್​ ಸಿದ್ಧತೆ

|

Updated on: Jul 25, 2023 | 10:06 AM

ಮುಂಬರಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ತೆಲಂಗಾಣ ವಿಧಾನಸಭಾ ಚುನಾವಣೆ: ಜು.30ಕ್ಕೆ ಪ್ರಿಯಾಂಕಾ ಗಾಂಧಿ ಕೊಲ್ಲಾಪುರಕ್ಕೆ ಭೇಟಿ, ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್​ ಸಿದ್ಧತೆ
ಪ್ರಿಯಾಂಕಾ ಗಾಂಧಿ
Image Credit source: Mint
Follow us on

ಮುಂಬರಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಜುಲೈ 30 ರಂದು ಕೊಲ್ಲಾಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಗೆ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಆಗಮಿಸಲಿದ್ದು, ಮಹಿಳಾ ಪರ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಕೆಪಿಸಿಸಿ ಉಪಾಧ್ಯಕ್ಷ ಮಲ್ಲು ರವಿ ಮಾತನಾಡಿ, ಈ ಸಭೆಯಲ್ಲಿ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಈ ವಿಧಾನಸಭೆಯಲ್ಲಿ ಮಹಿಳಾ ಪರ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಬಿಆರ್‌ಎಸ್‌ಗೆ ಯಾರೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Telangana Assembly Elections: ಡಿಸೆಂಬರ್​​ನಲ್ಲಿ ಅಸೆಂಬ್ಲಿ ಚುನಾವಣೆ -ತೆಲಂಗಾಣದಲ್ಲಿ ಬಿಜೆಪಿ ತಯಾರಿ ಹೀಗಿದೆ ನೋಡಿ

ತೆಲಂಗಾಣದಲ್ಲಿ ಚುನಾವಣಾ ಕಾವು ಆರಂಭವಾಗುತ್ತಿದ್ದಂತೆ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಗೆ ಪ್ರಮುಖ ಸವಾಲಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ನಿರತವಾಗಿವೆ.

ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅಧಿಕಾರ ವಹಿಸಿಕೊಳ್ಳುವುದರೊಂದಿಗೆ ಬಿಜೆಪಿ ತನ್ನ ಯೋಜನಾ ಸಭೆ ನಡೆಸಿತ್ತು.

ಕೊಲ್ಹಾಪುರದ ರ್ಯಾಲಿಯಲ್ಲಿ ಕರ್ನಾಟಕದ ಗೃಹಲಕ್ಷ್ಮೀ ಯೋಜನೆಯಂತೆ ಮಹಿಳೆಯರಿಗೆ ಇದೇ ರೀತಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಸ್ಟ್ 15 ರಂದು ನಡೆಯುವ ರ್ಯಾಲಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹಾಗೂ ಅಲ್ಪಸಂಖ್ಯಾತರ ಮತದಾರರಿಗೆ ಇದೇ ರೀತಿಯ ಭರವಸೆಯನ್ನು ನೀಡುವ ನಿರೀಕ್ಷೆಯಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ