Himachal Pradesh CM: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧಾರ; ಕಾಂಗ್ರೆಸ್ ಮೂಲಗಳ ಮಾಹಿತಿ

ಪ್ರಿಯಾಂಕಾ ಗಾಂಧಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರವನ್ನು ನಡೆಸಿದ್ದರು. ಹಲವಾರು ರ್ಯಾಲಿಗಳ ನೇತೃತ್ವವನ್ನು ವಹಿಸಿದ್ದರು.

Himachal Pradesh CM: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧಾರ; ಕಾಂಗ್ರೆಸ್ ಮೂಲಗಳ ಮಾಹಿತಿ
ಪ್ರಿಯಾಂಕಾ ಗಾಂಧಿ ವಾದ್ರಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 10, 2022 | 12:57 PM

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ (Himachal Pradesh Assembly Election) ಗೆಲುವಿಗೆ ಕಾರಣರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರೇ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿಮಾಚಲ ಪ್ರದೇಶ ರಾಜ್ಯದಲ್ಲಿ ಈಗಾಗಲೇ ಪ್ರತಿಸ್ಪರ್ಧಿ ಬಣಗಳು ಸಿಎಂ ಹುದ್ದೆಗಾಗಿ ಜಗಳವಾಡುತ್ತಿವೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಶುಕ್ರವಾರ ಸಂಜೆ ಹಿಮಾಚಲ ಪ್ರದೇಶದ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಒನ್ ಲೈನ್ ನಿರ್ಣಯವನ್ನು ಅಂಗೀಕರಿಸಿದ್ದು, ನಿರ್ಧಾರ ತೆಗೆದುಕೊಳ್ಳಲು ಹೈಕಮಾಂಡ್​ಗೆ ಅಧಿಕಾರ ನೀಡಿದ್ದಾರೆ. ಭಾನುವಾರದೊಳಗೆ ಸಿಎಂ ಯಾರಾಗಲಿದ್ದಾರೆ ಎಂಬ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Himachal Pradesh Election Result 2022: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈರಾಮ್ ಠಾಕೂರ್‌

ಪ್ರಿಯಾಂಕಾ ಗಾಂಧಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರವನ್ನು ನಡೆಸಿದ್ದರು. ಹಲವಾರು ರ್ಯಾಲಿಗಳ ನೇತೃತ್ವವನ್ನು ವಹಿಸಿದ್ದರು. ಅಲ್ಲದೆ, ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಯೋಜನೆಯಲ್ಲಿ ನಿಕಟವಾಗಿ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಗೆಲುವನ್ನು ಖಾತ್ರಿಪಡಿಸುವಲ್ಲಿ ಮತ್ತು ಬಿಜೆಪಿಯ ಚುನಾವಣಾ ಯಂತ್ರವನ್ನು ಸೋಲಿಸುವಲ್ಲಿ ಪ್ರಿಯಾಂಕಾ ಗಾಂಧಿಯವರ ನಾಯಕತ್ವವನ್ನು ಅನೇಕ ನಾಯಕರು ಶ್ಲಾಘಿಸಿದ್ದರು.

ಚುನಾವಣಾ ಪ್ರಚಾರದ ಹೊಣೆ ಹೊತ್ತಿರುವ ಪ್ರಿಯಾಂಕಾ ಗಾಂಧಿಯವರ ಮೊದಲ ಚುನಾವಣಾ ಯಶಸ್ಸು ಇದಾಗಿದೆ. ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರು ಪ್ರಚಾರದ ನೇತೃತ್ವ ವಹಿಸಿಕೊಂಡಾಗ ಕಾಂಗ್ರೆಸ್ ಪಕ್ಷವು ಸೋತಿತ್ತು. ಹಿಮಾಚಲ ಪ್ರದೇಶದ ಸಿರ್ಮೂರ್, ಕಂಗ್ರಾ, ಸೋಲನ್ ಮತ್ತು ಉನಾದಲ್ಲಿ ನಡೆದ ರ್ಯಾಲಿಗಳಲ್ಲಿ ಪ್ರಿಯಾಂಕಾ ಗಾಂಧಿ ಅವರು ಅಗ್ನಿಪಥ್, ಹಣದುಬ್ಬರ, ನಿರುದ್ಯೋಗ ಮತ್ತು ಹಳೆಯ ಪಿಂಚಣಿ ಯೋಜನೆಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದರು.

ಇದನ್ನೂ ಓದಿ: Himachal Pradesh Poll Results 2022 ಹಿಮಾಚಲದಲ್ಲಿ ಗದ್ದುಗೆ ಹಿಡಿದ್ರೂ ಸಿಎಂ ಆಯ್ಕೆ ಕಗ್ಗಂಟು: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು..?

ಸದ್ಯಕ್ಕೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹುದ್ದೆಯ ರೇಸ್​ನಲ್ಲಿ 3 ಬಾರಿ ಸಂಸದರಾಗಿರುವ ಮತ್ತು ರಾಜಮನೆತನತದ ದಿ. ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಮುಂಚೂಣಿಯಲ್ಲಿದ್ದಾರೆ. ಅವರ ಹೊರತಾಗಿ ರೇಸ್‌ನಲ್ಲಿ ಸುಖವಿಂದರ್ ಸಿಂಗ್ ಸುಖು ಮತ್ತು ಮುಖೇಶ್ ಅಗ್ನಿಹೋತ್ರಿ ಇದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು