Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಕ್ತಾಯವಾದ ಬೆನ್ನಲ್ಲೇ ಯಮುನಾ ಪೂಜೆ ನೆರವೇರಿಸಿದ ಪ್ರಿಯಾಂಕಾ ಗಾಂಧಿ; ವೇದ ಮಂತ್ರ ಪಠಣ

ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ ಚುನಾಣೆ ನಡೆಯಲಿದ್ದು, ಏಳು ಹಂತದಲ್ಲಿ ಮತದಾನವಿದೆ. ನಾಳೆ (ಫೆ.10) ಮೊದಲ ಹಂತದಲ್ಲಿ, 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತದೆ.

Video: ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಕ್ತಾಯವಾದ ಬೆನ್ನಲ್ಲೇ ಯಮುನಾ ಪೂಜೆ ನೆರವೇರಿಸಿದ ಪ್ರಿಯಾಂಕಾ ಗಾಂಧಿ; ವೇದ ಮಂತ್ರ ಪಠಣ
ಪ್ರಿಯಾಂಕಾ ಗಾಂಧಿ ವಾದ್ರಾ
Follow us
TV9 Web
| Updated By: Lakshmi Hegde

Updated on:Feb 09, 2022 | 11:14 AM

ಲಖನೌ: ಉತ್ತರ ಪ್ರದೇಶ ಚುನಾವಣೆ (Uttar Pradesh Assembly Election 2022) ಸಮೀಪಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ನಿನ್ನೆ ಮಂಗಳವಾರ ಮಥುರಾದ ವಿಶ್ರಮ್​ ಘಾಟ್​​ನಲ್ಲಿ ಯಮುನಾ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಅಲ್ಲಿ ಉಪಸ್ಥಿತರಿದ್ದ ಅರ್ಚಕರು ದೊಡ್ಡದಾಗಿ ವೇದ ಮಂತ್ರ ಪಠಿಸಿದ್ದಾರೆ. ಉತ್ತರ ಪ್ರದೇಶದ ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಗಿದ ಬೆನ್ನಲ್ಲೇ  ಈ ಪೂಜೆ ಮಾಡಿದ್ದಾರೆ. ಅಂದಹಾಗೇ, ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಮೀರತ್​, ಆಗ್ರಾ ಮತ್ತು ಮಥುರಾ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಮೀರತ್​ನ ಮಾವಾನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್​ ಪರ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಟ್ರ್ಯಾಕ್ಟರ್​​ನಲ್ಲಿ ತೆರಳಿದ್ದಾರೆ. ಹಾಗೇ, ಅಲ್ಲಿದ್ದ ಮಹಿಳೆಯರೊಂದಿಗೆ ಸೆಲ್ಫೀ ಕೂಡ ತೆಗೆಸಿಕೊಂಡಿದ್ದಾರೆ. 

ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ ಚುನಾಣೆ ನಡೆಯಲಿದ್ದು, ಏಳು ಹಂತದಲ್ಲಿ ಮತದಾನವಿದೆ. ನಾಳೆ (ಫೆ.10) ಮೊದಲ ಹಂತದಲ್ಲಿ, 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತದೆ. ಪ್ರಿಯಾಂಕಾ ಗಾಂಧಿ ಈಗಾಗಲೇ ಪಕ್ಷದ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್​ನ ಶ್ರಮಕ್ಕೆ ಈ ಚುನಾವಣೆಯಲ್ಲಿ ತಕ್ಕ ಪ್ರತಿಫಲ ದೊರೆಯುತ್ತದೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ನಿನ್ನೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೊವಿಡ್ 19 ಮೂರನೇ ಅಲೆ ಸಂದರ್ಭದಲ್ಲಿ ಮುಂಬೈನಲ್ಲಿ ವಲಸೆ ಕಾರ್ಮಿಕರಿಗೆ ಕಾಂಗ್ರೆಸ್​ ಉಚಿತ ಬಸ್ ಟಿಕೆಟ್ ನೀಡುವ ಮೂಲಕ ಕೊರೊನಾ ಹೆಚ್ಚಳಕ್ಕೆ ಕಾರಣವಾಯಿತು ಎಂದು ಸಂಸತ್ತಿನಲ್ಲಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರತಿಕ್ರಿಯಿಸಿದ್ದ ಅವರು, ಈ ವಲಸೆ ಕಾರ್ಮಿಕರೆಲ್ಲ ಪ್ರಧಾನಿ ನರೇಂದ್ರ ಮೋದಿಯವರಿಂದ ನಿರ್ಲಕ್ಷ್ಯಕ್ಕೆ ಒಳಗಾದವರಾಗಿದ್ದರು. ಕೊವಿಡ್​ 19ನಿಂದಾಗಿ ಕೆಲಸ ಕಳೆದುಕೊಂಡು ವಾಪಸ್​ ಮನೆಗೆ ಹೋಗಲು ಸಾಧ್ಯವಾಗದೆ ಅತಂತ್ರರಾಗಿದ್ದವರು. ದೂರದ ತಮ್ಮೂರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದರು. ಪ್ರಧಾನಿ ಮೋದಿ ಹೀಗೆ ಹೇಳುತ್ತಿದ್ದಾರೆ ಎಂದರೆ, ವಲಸೆ ಕಾರ್ಮಿಕರಿಗೆ ಯಾರೂ ಸಹಾಯ ಮಾಡುವುದು ಅವರಿಗೆ ಇಷ್ಟವಿರಲಿಲ್ಲವಾ? ಮೋದಿಯವರು ಬಯಸುತ್ತಿರುವುದಾದರೂ ಏನನ್ನು ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, 2021ರ ಏಪ್ರಿಲ್​​ನಲ್ಲಿ ದೊಡ್ಡದೊಡ್ಡ ರ್ಯಾಲಿಗಳನ್ನು ನಡೆಸಿದರಲ್ಲ ಪ್ರಧಾನಿ ಮೋದಿ, ಆ ಬಗ್ಗೆ ಅವರೇನು ಹೇಳುತ್ತಾರೆ?  ಪಶ್ಚಿಮ ಬಂಗಾಳದ ಅಸಾನ್ಸೋಲ್​​ನಲ್ಲಿ ಜನಸಾಗರವೇ ಸೇರಿತ್ತು. ಆ ಸಮಯದಲ್ಲಿ ದೇಶದಲ್ಲಿ ಎರಡನೇ ಅಲೆ ಇತ್ತು, ದಿನಕ್ಕೆ 2 ಲಕ್ಷದಷ್ಟು ಕೊವಿಡ್​ 19 ಕೇಸ್​ಗಳು ದಾಖಲಾಗುತ್ತಿದ್ದವು ಎಂದು ಹೇಳಿದ್ದರು.

ಇದನ್ನೂ ಓದಿ: ‘ಪ್ರೀತಿಗಿಂತ ದೊಡ್ಡ ಅಮಲು ಯಾವುದೂ ಇಲ್ಲ’; ಲವ್​ ಬಗ್ಗೆ ‘ಲವ್​ ಮಾಕ್ಟೇಲ್​ 2’ ವೇದಿಕೆಯಲ್ಲಿ ಕ್ರೇಜಿಸ್ಟಾರ್ ಮಾತು

Published On - 9:57 am, Wed, 9 February 22

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ