Priyanka Gandhi: ಬಂಧನದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ; ವೈರಲ್ ವಿಡಿಯೋ ಇಲ್ಲಿದೆ

| Updated By: ಸುಷ್ಮಾ ಚಕ್ರೆ

Updated on: Oct 04, 2021 | 1:26 PM

Priyanka Gandhi Room Cleaning Video: ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಗಾಂಧಿಗೆ ಗೆಸ್ಟ್​ ಹೌಸ್​ನಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ತಮ್ಮ ಕೊಠಡಿ ಸ್ವಚ್ಛವಿಲ್ಲದ ಕಾರಣ ಪ್ರಿಯಾಂಕಾ ಗಾಂಧಿ ವಾದ್ರಾ ತಾವೇ ಪೊರಕೆ ಹಿಡಿದು ರೂಮನ್ನು ಕ್ಲೀನ್ ಮಾಡಿದ್ದಾರೆ.

Priyanka Gandhi: ಬಂಧನದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ; ವೈರಲ್ ವಿಡಿಯೋ ಇಲ್ಲಿದೆ
ಬಂಧನದ ಬಳಿಕ ರೂಮಿನಲ್ಲಿ ಕಸ ಗುಡಿಸುತ್ತಿರುವ ಪ್ರಿಯಾಂಕಾ ಗಾಂಧಿ
Follow us on

ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ (Lakhimpur Violence) ಸ್ಥಳಕ್ಕೆ ಹೋಗುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಅವರನ್ನು ಅಡ್ಡಗಟ್ಟಿದ್ದ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದರು. ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿರುವ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.

ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಗಾಂಧಿಗೆ ಗೆಸ್ಟ್​ ಹೌಸ್​ನಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ತಮ್ಮ ಕೊಠಡಿ ಸ್ವಚ್ಛವಿಲ್ಲದ ಕಾರಣ ಪ್ರಿಯಾಂಕಾ ಗಾಂಧಿ ವಾದ್ರಾ ತಾವೇ ಪೊರಕೆ ಹಿಡಿದು ರೂಮನ್ನು ಕ್ಲೀನ್ ಮಾಡಿದ್ದಾರೆ. ಇದಕ್ಕೂ ಮೊದಲು ಬಂಧನದ ವೇಳೆ ಪ್ರಿಯಾಂಕಾ ಗಾಂಧಿ ಪೊಲೀಸರೊಂದಿಗೆ ಮಾತನಾಡಿದ ವಿಡಿಯೋ ಕೂಡ ವೈರಲ್ ಆಗಿತ್ತು.

ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವ ಸಲುವಾಗಿ ಪ್ರಿಯಾಂಕಾ ಗಾಂಧಿ ಲಕ್ನೋಗೆ ಬಂದಿದ್ದರು. ಲಖೀಂಪುರ್ ಕೇರಿಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

 

ಭಾನುವಾರ ರಾತ್ರಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಕಾರನ್ನು ತಡೆದಿದ್ದರು.ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆಯಿಂದ ಹಿಂಸಾಚಾರ ನಡೆದಿದ್ದು, ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ ಲಖೀಂಪುಕ್ಕೆ ಭೇಟಿ ನೀಡಿದ್ದ ಪ್ರಿಯಾಂಕಾ ಗಾಂಧಿ ಈ ಹಿಂಸಾಚಾರ ಘಟನೆಯಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳನ್ನು ಭೇಟಿ ಮಾಡಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸರು ವಶಕ್ಕೆ ಪಡೆದಾಗಿ ವಿಡಿಯೋ ಕೂಡ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ, ಸಾವನ್ನಪ್ಪಿದ ಅಮಾಯಕ ಜನರಿಗಿಂತ ನಾನು ಮುಖ್ಯವಾದವಳಲ್ಲ. ನೀವು ಸರ್ಕಾರವನ್ನು ರಕ್ಷಿಸುತ್ತಿದ್ದೀರ. ನನ್ನನ್ನು ಬಂಧಿಸಲು ನಿಮ್ಮ ಬಳಿ ವಾರೆಂಟ್ ಇದೆಯೇ? ವಾರೆಂಟ್ ನೀಡದಿದ್ದರೆ ನೀವು ನನ್ನನ್ನು ಮುಟ್ಟುವಂತಿಲ್ಲ ಎಂದು ಹೇಳಿದ್ದರು. ಆದರೂ ಪೊಲೀಸರು ಅವರನ್ನು ಕರೆದುಕೊಂಡು ಹೋಗಿದ್ದರು.

ಇದನ್ನೂ ಓದಿ: Priyanka Gandhi: ಉತ್ತರ ಪ್ರದೇಶದ ಹರಗಾಂವ್​ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು

 

Published On - 1:04 pm, Mon, 4 October 21