ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಅವರು 2024ರ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮಾತ್ರ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಅಮೇಥಿ ಮತ್ತು ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸ್ಮೃತಿ ಇರಾನಿ ಅವರನ್ನು ಅಮೇಥಿಗೆ ತನ್ನ ಅಭ್ಯರ್ಥಿ ಎಂದು ಘೋಷಿಸಿದರೆ, ಹಳೆಯ ಪಕ್ಷವು ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡಲಿದೆ ಎಂದು ಹೇಳಿದೆ. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಯ್ ಬರೇಲಿಯಿಂದ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಅಮೇಥಿ ಮತ್ತು ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ಬಾರಿಯೂ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹ ಕೆಲ ದಿನಗಳಿಂದ ಇತ್ತು.
ಅದೇ ಸಮಯದಲ್ಲಿ ಪ್ರಿಯಾಂಕಾಗೆ ರಾಯ್ ಬರೇಲಿಯಿಂದ ಟಿಕೆಟ್ ನೀಡಬಹುದು ಎಂದು ಹೇಳಲಾಗಿತ್ತು. ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿತ್ತು. ಪಕ್ಷದ ನಾಯಕತ್ವವು ರಾಹುಲ್ ಗಾಂಧಿಗೆ ಅಮೇಥಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲು ಪ್ರಸ್ತಾಪಿಸಿತ್ತು. ಆದರೆ ಈ ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಲು ಇಬ್ಬರೂ ನಾಯಕರು ನಿರಾಕರಿಸಿದ್ದಾರೆ.
ಮತ್ತಷ್ಟು ಓದಿ: ನೂರಾರು ಮಹಿಳೆಯರ ಜೀವನ ಹಾಳು ಮಾಡಿದ ವ್ಯಕ್ತಿಯ ಭುಜದ ಮೇಲೆ ಕೈಹಾಕಿ ಪೋಸ್ ಕೊಟ್ಟಿದ್ರಿ: ಮೋದಿಗೆ ಕುಟುಕಿದ ಪ್ರಿಯಾಂಕಾ
ರಾಹುಲ್ ಗಾಂಧಿ 2019ರಲ್ಲಿ ಎರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಯುಪಿಯ ಅಮೇಠಿ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಆದರೆ ಸೋನಿಯಾ ಗಾಂಧಿ ಯುಪಿಯ ರಾಯ್ ಬರೇಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಿಂದ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋಲನ್ನು ಎದುರಿಸಬೇಕಾಯಿತು.
ಆದರೆ ರಾಯ್ ಬರೇಲಿಯಿಂದ ಸೋನಿಯಾ ಭಾರಿ ಮತಗಳಿಂದ ಗೆದ್ದಿದ್ದರು. ಸೋನಿಯಾ ಈ ಬಾರಿ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಹೀಗಿರುವಾಗ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಬಹಳ ದಿನಗಳಿಂದ ನಡೆಯುತ್ತಿತ್ತು.
ಇತ್ತೀಚೆಗಷ್ಟೇ ಹರಿದ್ವಾರಕ್ಕೆ ಆಗಮಿಸಿದ್ದ ರಾಬರ್ಟ್ ವಾದ್ರಾ ಬಳಿ ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂದು ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಸದಾ ನಾಡಿನ ಜನರ ಮಧ್ಯೆ ಇದ್ದೇನೆ ಎಂಬ ಕಾರಣಕ್ಕೆ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂಬ ಧ್ವನಿ ದೇಶದೆಲ್ಲೆಡೆ ಬರುತ್ತಿದೆ. 1999ರಿಂದ ಅಲ್ಲಿಗೆ ಪ್ರಚಾರಕ್ಕೆ ಹೋಗಿದ್ದೆ. ಸೋನಿಯಾ ಗಾಂಧಿಯನ್ನು ಅಲ್ಲಿಂದ ಗೆಲುವಿನತ್ತ ಕರೆತಂದಿದ್ದೆವು. ಜನರು ಯಾವಾಗಲೂ ನಾನು ಅವರ ಜತೆ ಇರಬೇಕೆಂದು ಬಯಸುತ್ತಾರೆ ಎಂದಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ