Priyanka Gandhi: ಪ್ರತಿಭಟನೆ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ರಸ್ತೆಯಲ್ಲೇ ದರದರನೆ ಎಳೆದೊಯ್ದ ಪೊಲೀಸರು; ವಿಡಿಯೋ ವೈರಲ್
ರಸ್ತೆಯಲ್ಲೇ ಕುಳಿತು ಪ್ರಿಯಾಂಕಾ ಗಾಂಧಿ ಮತ್ತೆ ಪ್ರತಿಭಟನೆಗೆ ಮುಂದಾದಾಗ ಪೊಲೀಸ್ ಸಿಬ್ಬಂದಿ ಪ್ರಿಯಾಂಕಾ ಗಾಂಧಿ ಅವರನ್ನು ದರದರನೆ ಎಳೆದುಕೊಂಡು ಹೋಗಿ ಕಾರಿನೊಳಗೆ ತಳ್ಳಿದರು. ಈ ವಿಡಿಯೋ ವೈರಲ್ ಆಗಿದೆ.
ನವದೆಹಲಿ: ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದೆ. ಈ ನಡುವೆ ದೆಹಲಿಯಲ್ಲಿ ನಾಟಕೀಯ ದೃಶ್ಯಗಳು ಕಾಣಿಸಿಕೊಂಡಿದ್ದು, ರಾಹುಲ್ ಗಾಂಧಿ (Priyanka Gandhi), ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆಯಲು ಹೋದಾಗ ಅವರು ಸಹಕರಿಸಲು ನಿರಾಕರಿಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ರಸ್ತೆಯಲ್ಲೇ ಕುಳಿತು ಪ್ರಿಯಾಂಕಾ ಗಾಂಧಿ ಮತ್ತೆ ಪ್ರತಿಭಟನೆಗೆ ಮುಂದಾದರು. ಇದರಿಂದ ಪೊಲೀಸ್ ಸಿಬ್ಬಂದಿ ಪ್ರಿಯಾಂಕಾ ಗಾಂಧಿ ಅವರನ್ನು ರಸ್ತೆಯಲ್ಲೇ ದರದರನೆ ಎಳೆದುಕೊಂಡು ಹೋಗಿ ಕಾರಿನೊಳಗೆ ತಳ್ಳಿದರು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಂಜೀತ್ ರಂಜನ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಬೆಲೆ ಏರಿಕೆ ಮತ್ತು ಹಣದುಬ್ಬರವನ್ನು ವಿರೋಧಿಸಿ ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಬಟ್ಟೆಗಳನ್ನು ಪೊಲೀಸರು ಹರಿದು ಹಾಕಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
Smt. @priyankagandhi Ji breaks the barricade, and sits down on road to stage a protest against the price rise and inflation outside AICC HQ.#महंगाई_पर_हल्ला_बोल pic.twitter.com/PNzQ5HoW27
— NSUI UP Central (@NSUIUPCentral) August 5, 2022
ಪ್ರತಿಭಟನೆಯ ಸಂಕೇತವಾಗಿ ಇತರ ಪಕ್ಷದ ನಾಯಕರಂತೆ ಕಪ್ಪು ಬಟ್ಟೆಯನ್ನು ಧರಿಸಿದ್ದ ಪ್ರಿಯಾಂಕಾ ಗಾಂಧಿ ಮೊದಲು ಬ್ಯಾರಿಕೇಡ್‌ಗಳ ಮೇಲೆ ಹತ್ತಿದರು. ಅಲ್ಲಿ ಅವರು ಸ್ವಲ್ಪ ಸಮಯದವರೆಗೆ ಧರಣಿ ನಡೆಸಿದರು. ನಂತರ ಪೊಲೀಸರು ಆಗಮಿಸಿ ಅವರನ್ನು ಬಂಧಿಸಲು ಮುಂದಾದರು. ಅದಕ್ಕೆ ಪ್ರಿಯಾಂಕಾ ಒಪ್ಪದಿದ್ದಾಗ ಅವರನ್ನು ಎಳೆದುಕೊಂಡು ಹೋಗಲಾಯಿತು. ಈ ವಿಡಿಯೋ ವೈರಲ್ ಆಗಿದೆ. ಪೊಲೀಸರ ವರ್ತನೆಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಗೂ ಮುನ್ನ ಮಾತನಾಡಿದ್ದ ರಾಹುಲ್ ಗಾಂಧಿ, 70 ವರ್ಷದ ಪ್ರಜಾಪ್ರಭುತ್ವ ವ್ಯವಸ್ಥೆ 8 ವರ್ಷದಲ್ಲಿ ನಾಶವಾಗಿದೆ. ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಚರ್ಚಿಸಲು ಅವಕಾಶ ನೀಡುತ್ತಿಲ್ಲ. ದೇಶದಲ್ಲಿ ಇಂದು 4 ಜನರಿಂದ ಸರ್ವಾಧಿಕಾರ ನಡೆಯುತ್ತಿದೆ. ಯಾರಾದರೂ ಆ ಸರ್ವಾಧಿಕಾರಿಗಳ ವಿರುದ್ಧ ತಿರುಗಿಬಿದ್ದರೆ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಸುಳ್ಳು ಕೇಸ್ ಹಾಕಿ ನಮ್ಮನ್ನು ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
#WATCH | Police detain Congress leader Priyanka Gandhi Vadra from outside AICC HQ in Delhi where she had joined other leaders and workers of the party in the protest against unemployment and inflation.
The party called a nationwide protest today. pic.twitter.com/JTnWrrAT9T
— ANI (@ANI) August 5, 2022
ಸಂಸತ್ನಲ್ಲಿ ಜನರ ಯಾವುದೇ ಸಮಸ್ಯೆಗಳು ಚರ್ಚೆಯಾಗುತ್ತಿಲ್ಲ. ನಾಲ್ಕೈದು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಬಿಜೆಪಿಯ ಬೆದರಿಕೆ ತಂತ್ರವಾಗಿದೆ. ಬಿಜೆಪಿಯವರು ನಮ್ಮ ವಿರುದ್ಧ ಏನೇ ಷಡ್ಯಂತ್ರ ಮಾಡಿದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ನಮ್ಮ ದೇಶ, ಅದರ ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸವನ್ನು ನಾನು ಮುಂದುವರಿಸುತ್ತೇನೆ. ಸ್ವಲ್ಪ ಒತ್ತಡ ಹಾಕಿದರೆ ನಮ್ಮನ್ನು ಸುಮ್ಮನಿರಿಸಬಹುದು ಎಂದು ಅವರು ಭಾವಿಸಿದ್ದಾರೆ. ಆದರೆ, ನಾವು ಸುಮ್ಮನಿರುವುದಿಲ್ಲ. ಬಿಜೆಪಿಯವರ ವಿರುದ್ಧ ನಾವು ನಿಲ್ಲುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: Rahul Gandhi: ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಜಾಪ್ರಭುತ್ವದ ಸಾವಿಗೆ ನಾವು ಸಾಕ್ಷಿಯಾಗಿದ್ದೇವೆ. ಸರ್ವಾಧಿಕಾರದ ಕಲ್ಪನೆಯ ವಿರುದ್ಧ ನಿಂತಿರುವ ಎ್ಲಲರನ್ನೂ ಕೆಟ್ಟದಾಗಿ ಹಲ್ಲೆ ನಡೆಸಿ, ಥಳಿಸಿ, ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ಭಾರತ ಸರ್ವಾಧಿಕಾರದಲ್ಲಿದೆ, ಪ್ರಜಾಪ್ರಭುತ್ವ ಸತ್ತಿದೆ. ಇಂದು ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ, ನಮಗೆ ಮಾತನಾಡಲು ಅವಕಾಶವಿಲ್ಲ, ಪ್ರತಿಭಟನೆಗೆ ಅವಕಾಶವಿಲ್ಲ, ಲೋಕಸಭೆ ಮತ್ತು ರಾಜ್ಯಸಭೆಯಿಂದ ನಮ್ಮನ್ನು ಅಮಾನತುಗೊಳಿಸಲಾಗಿದೆ. ನಮ್ಮ ದೇಶವು ಸರ್ವಾಧಿಕಾರಿಗಳ ಹಿಡಿತದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.