‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಹುದೊಡ್ಡ ದಾಖಲೆಗಳನ್ನೇ ನಿರ್ಮಿಸಿದೆ’-ಟ್ವೀಟ್ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ
Priyanka Gandhi Vadra: ದೇಶದಲ್ಲಿ ಸದ್ಯ ಪೆಟ್ರೋಲ್-ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಲೆಯಲ್ಲಿ 30-35 ಪೈಸೆಗಳಷ್ಟು ಏರಿಕೆಯಾಗಿದೆ.
ದೆಹಲಿ: ಜನಸಾಮಾನ್ಯರಿಗೆ ತೊಂದರೆ ಕೊಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆಗಳನ್ನು ನಿರ್ಮಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಹಣದುಬ್ಬರ ಶುರುವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದೂ ಕಿಡಿಕಾರಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ ಎಂಬ ಮಾಧ್ಯಮ ವರದಿಯೊಂದನ್ನು ಶೇರ್ ಮಾಡಿಕೊಂಡಿರುವ ಪ್ರಿಯಾಂಕಾ ಗಾಂಧಿ, ಮೋದಿ ಜೀ ಸರ್ಕಾರ ಸಾರ್ವಜನಿಕರಿಗೆ ತೊಂದರೆ ಕೊಡುವುದರಲ್ಲಿ ಬಹುದೊಡ್ಡ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿರುದ್ಯೋಗ ಮಿತಿಮೀರಿದೆ. ಸರ್ಕಾರಿ ಆಸ್ತಿಗಳು ಮಾರಾಟವಾಗುತ್ತಿವೆ. ಪೆಟ್ರೋಲ್ ರೇಟ್ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ಹಿರಿಯ ವಕ್ತಾರ ರಣದೀಪ್ ಸುರ್ಜೇವಾಲಾ ಕೂಡ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದೇ ಮಾಧ್ಯಮ ವರದಿಯನ್ನು ಶೇರ್ ಮಾಡಿಕೊಂಡು ಅಚ್ಛೆ ದಿನ್ (ಒಳ್ಳೆಯ ದಿನಗಳು) ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.
ಪೆಟ್ರೋಲ್ ಏರಿಕೆ ವಿರುದ್ಧ ಅಭಿಯಾನ ಈ ವರ್ಷ ಇಲ್ಲಿಯವರೆಗೆ ಒಟ್ಟು 23.50 ರೂ. ಹೆಚ್ಚಾಗಿದ್ದು ದಾಖಲೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ನವೆಂಬರ್ 14ರಿಂದ 29ರವರೆಗೆ ಸಾಮೂಹಿಕ ಆಂದೋಲನ ನಡೆಸಲು ಪಕ್ಷ ನಿರ್ಧಾರ ಮಾಡಿದೆ. ಕಾಂಗ್ರೆಸ್ನ ಪ್ರಮುಖ ನಾಯಕರು ತಮ್ಮ ತಮ್ಮ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ನಿರಂತರವಾಗಿ ಏರುತ್ತಿದೆ ಇಂಧನ ದರ ದೇಶದಲ್ಲಿ ಸದ್ಯ ಪೆಟ್ರೋಲ್-ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಲೆಯಲ್ಲಿ 30-35 ಪೈಸೆಗಳಷ್ಟು ಏರಿಕೆಯಾಗಿದೆ. ದೆಹಲಿಯಲ್ಲಿ 35 ಪೈಸೆ ಏರಿಕೆಯಾಗಿದ್ದು, ಸದ್ಯ ಅಲ್ಲಿ ಒಂದು ಲೀಟರ್ ಪೆಟ್ರೋಲ್ಗೆ 107.59 ರೂ.ಇದೆ.
ಇದನ್ನೂ ಓದಿ: ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ ಜಲಾವೃತ
ನೋರಾ ಫತೇಹಿಗೆ ಗಿಫ್ಟ್ ಆಗಿ ಸಿಕ್ಕಿತ್ತು ಐಷಾರಾಮಿ ಕಾರು; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿಗೆ ಸಂಕಷ್ಟ