Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷೆ ಸ್ಥಾನ ಸಿಗುವ ಸಾಧ್ಯತೆ

Priyanka Gandhi: ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಸ್ತುತ ಯಾವುದೇ ನಿರ್ದಿಷ್ಟ ಸಾಂಸ್ಥಿಕ ಜವಾಬ್ದಾರಿಯಿಲ್ಲದೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರೂ ಸಹ ತೆರೆಮರೆಯಲ್ಲಿ ಕಾಂಗ್ರೆಸ್​ನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಗುಜರಾತ್‌ನಿಂದ ಪ್ರಾರಂಭಿಸಿ ಜಿಲ್ಲಾ ಅಧ್ಯಕ್ಷರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಪೈಲಟ್ ಯೋಜನೆಯ ನೀಲನಕ್ಷೆ ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿಯ ಇತ್ತೀಚಿನ ಕೊಡುಗೆಗಳಲ್ಲಿ ಒಂದಾಗಿದೆ.

ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷೆ ಸ್ಥಾನ ಸಿಗುವ ಸಾಧ್ಯತೆ
Priyanka Wadra
Follow us
ಸುಷ್ಮಾ ಚಕ್ರೆ
|

Updated on: Apr 14, 2025 | 4:28 PM

ನವದೆಹಲಿ, ಏಪ್ರಿಲ್ 14: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರಿಗೆ ಪ್ರಮೋಷನ್ ನೀಡುವ ಬಗ್ಗೆ ಆಂತರಿಕ ಚರ್ಚೆಗಳು ಚುರುಕುಗೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ಪಕ್ಷದೊಳಗೆ ಅವರ ಭವಿಷ್ಯದ ಪಾತ್ರದ ಕುರಿತು ಕಾಂಗ್ರೆಸ್ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ (Congress) ಪಕ್ಷದ ಮೂಲಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಸ್ತುತ ಯಾವುದೇ ನಿರ್ದಿಷ್ಟ ಸಾಂಸ್ಥಿಕ ಜವಾಬ್ದಾರಿಯಿಲ್ಲದೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರೂ ಸಹ, ತೆರೆಮರೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಗುಜರಾತ್‌ನಿಂದ ಪ್ರಾರಂಭಿಸಿ ಜಿಲ್ಲಾ ಅಧ್ಯಕ್ಷರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಪೈಲಟ್ ಯೋಜನೆಯ ನೀಲನಕ್ಷೆ ಕಾಂಗ್ರೆಸ್ ಪಕ್ಷಕ್ಕೆ ಅವರ ಇತ್ತೀಚಿನ ಗಮನಾರ್ಹ ಕೊಡುಗೆಗಳಲ್ಲಿ ಒಂದಾಗಿದೆ.

ಜಿಲ್ಲಾ ಮಟ್ಟದ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ಮತ್ತು ಅಧಿಕಾರವನ್ನು ನೀಡುವ ಮೂಲಕ ಕಾಂಗ್ರೆಸ್‌ನ ತಳಮಟ್ಟದ ರಚನೆಯನ್ನು ಬಲಪಡಿಸಲು ಪ್ರಯತ್ನಿಸುವ ಈ ಯೋಜನೆಯು ಗುಜರಾತ್‌ನಲ್ಲಿ ಯಶಸ್ವಿಯಾದರೆ ನಂತರ ಇತರ ರಾಜ್ಯಗಳಲ್ಲಿಯೂ ಇದನ್ನು ಅಳವಡಿಸಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

ಇದನ್ನೂ ಓದಿ: ನನ್ನ ಅಮ್ಮನಿಗೂ ವಯಸ್ಸಾಗಿದೆ; ರಾಷ್ಟ್ರಪತಿ ಕುರಿತ ಸೋನಿಯಾ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಸಮರ್ಥನೆ

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

ಪ್ರಿಯಾಂಕಾ ಗಾಂಧಿಯ ಔಪಚಾರಿಕ ಪಾತ್ರದ ಕುರಿತು ಚರ್ಚೆಯ ಜೊತೆಗೆ, ಕಾಂಗ್ರೆಸ್ ಪಕ್ಷದೊಳಗೆ ವಿಶಾಲವಾದ ಕ್ರಿಯಾತ್ಮಕ ಬದಲಾವಣೆಗಳಿಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ಪಕ್ಷದ ಒಳಗಿನವರು ಹೇಳಿದ್ದಾರೆ. ಮುಂಬರುವ ಚುನಾವಣಾ ಸವಾಲುಗಳನ್ನು ಎದುರಿಸುವ ಮುನ್ನ ಪಕ್ಷದ ಕಾರ್ಯನಿರ್ವಹಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಆಂತರಿಕ ವ್ಯವಸ್ಥೆಗಳು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸುವತ್ತ ಗಮನ ಹರಿಸಲಾಗುವುದು ಎಂದಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪ್ರಮೋಷನ್ ಕುರಿತು ಅಂತಿಮ ನಿರ್ಧಾರ ಇನ್ನೂ ಬಾಕಿ ಉಳಿದಿದ್ದರೂ ಕಾಂಗ್ರೆಸ್‌ನ ಭವಿಷ್ಯದ ದಿಕ್ಕನ್ನು ರೂಪಿಸುವಲ್ಲಿ ಅವರ ಪ್ರಭಾವವೂ ಹೆಚ್ಚುತ್ತಿದೆ ಎಂದು ಮೂಲಗಳು ಸೂಚಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ