Priyanka Gandhi Vadra: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೊಮ್ಮೆ ಕೊವಿಡ್ ಪಾಸಿಟಿವ್ ದೃಢ
ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರಿಗೆ ಮತ್ತೊಮ್ಮೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಪ್ರಿಯಾಂಕಾ ಗಾಂಧಿಗೆ ಕೊವಿಡ್ -19 (COVID-19) ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಖುದ್ದು ಪ್ರಿಯಾಂಕಾ ವಾದ್ರಾ ಅವರೇ ಟ್ವೀಟ್ ಮಾಡಿದ್ದಾರೆ. ಕೊರೊನಾವೈರಸ್ ಆರ್ಭಟ ಶುರುವಾದ ಬಳಿಕ 2ನೇ ಬಾರಿಗೆ ಪ್ರಿಯಾಂಕಾ ಗಾಂಧಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದೆ.
‘ನನಗೆ ಇಂದು ಮತ್ತೊಮ್ಮೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಬಳಿ ತಪಾಸಣೆ ನಡೆಸಿದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಎಲ್ಲ ಕೊವಿಡ್ ನಿಯಮಾವಳಿಗಳನ್ನೂ ಅನುಸರಿಸುತ್ತಿದ್ದೇನೆ’ ಎಂದು ಪ್ರಿಯಾಂಕಾ ಗಾಂಧ ವಾದ್ರಾ ಟ್ವೀಟ್ ಮಾಡಿದ್ದಾರೆ.
Tested positive for covid (again!) today. Will be isolating at home and following all protocols.
— Priyanka Gandhi Vadra (@priyankagandhi) August 10, 2022
ಈ ಹಿಂದೆ ಜೂನ್ 3ರಲ್ಲಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಪ್ರಿಯಾಂಕಾ ಗಾಂಧಿ ಕೊವಿಡ್ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. “ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: Priyanka Gandhi: ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊವಿಡ್ ಪಾಸಿಟಿವ್ ದೃಢ
ಕಳೆದ ಜೂನ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಕೊವಿಡ್ ಪಾಸಿಟಿವ್ ಪತ್ತೆಯಾಗಿತ್ತು. ಅವರಿಗೂ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ಕೊರೊನಾವೈರಸ್ ತಗುಲಿರುವುದು ದೃಢಪಟ್ಟಿತ್ತು. ವೈದ್ಯಕೀಯ ಸಲಹೆಯ ಮೇರೆಗೆ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಬಳಿಕ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋನಿಯಾ ಗಾಂಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:53 am, Wed, 10 August 22