ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು ಹಿನ್ನೆಲೆ; ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪರಿಶೀಲನಾ ಸಭೆ

ಉತ್ತರ ಪ್ರದೇಶದಲ್ಲಿ ಈ ಬಾರಿ ಜಯ ಗಳಿಸಲೇಬೇಕೆಂದು ಪ್ರಿಯಾಂಕಾ ಗಾಂಧಿ ಭಾರೀ ಪ್ರಚಾರ ಕಾರ್ಯ ನಡೆಸಿದ್ದರು. ಆದರೆ, ಪ್ರಿಯಾಂಕಾ ಗಾಂಧಿಯವರ ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲನ್ನು ಅನುಭವಿಸಿತು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು ಹಿನ್ನೆಲೆ; ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪರಿಶೀಲನಾ ಸಭೆ
ಪ್ರಿಯಾಂಕಾ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 15, 2022 | 4:26 PM

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Uttar Pradesh Assembly Election) ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನದ ಬಗ್ಗೆ ಚರ್ಚಿಸಲು ಮತ್ತು ಉತ್ತರ ಪ್ರದೇಶದ ಮುಂದಿನ ಯೋಜನೆಗಳನ್ನು ರೂಪಿಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಇಂದು ದೆಹಲಿಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಇತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಈ ಬಾರಿ ಜಯ ಗಳಿಸಲೇಬೇಕೆಂದು ಪ್ರಿಯಾಂಕಾ ಗಾಂಧಿ ಭಾರೀ ಪ್ರಚಾರ ಕಾರ್ಯ ನಡೆಸಿದ್ದರು. ಆದರೆ, ಪ್ರಿಯಾಂಕಾ ಗಾಂಧಿಯವರ ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲನ್ನು ಅನುಭವಿಸಿತು. ಕೇವಲ ರಾಂಪುರ ಖಾಸ್ ಮತ್ತು ಫಾರೆಂಡಾ ಈ ಎರಡು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿತು. ಬಿಜೆಪಿ ಈ ಬಾರಿಯೂ ಭರ್ಜರಿ ಗೆಲುವು ಸಾಧಿಸಿ, ಸರ್ಕಾರ ರಚಿಸಲು ಸಿದ್ಧವಾಗಿದೆ.

2017ರಲ್ಲಿ 7 ಇದ್ದ ಕಾಂಗ್ರೆಸ್ ಪಕ್ಷದ ಸ್ಥಾನಗಳು ಈ ಬಾರಿ 2ಕ್ಕೆ ಕುಸಿದಿರುವುದು ಮಾತ್ರವಲ್ಲದೆ ಅದರ ಮತಗಳ ಪ್ರಮಾಣವು ಶೇ. 6.25ರಿಂದ ಶೇ. 2.35ಕ್ಕೆ ಇಳಿದಿದೆ. 4 ವರ್ಷಗಳ ಹಿಂದೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಪಕ್ಷದ ನೆಲೆಯನ್ನು ಬಲಪಡಿಸುವ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ ಈ ವರ್ಷ ರಾಜ್ಯ ಚುನಾವಣಾ ಪ್ರಚಾರದ ನೇತೃತ್ವ ವಹಿಸಿದ್ದರು. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಅಧಿಕಾರದಿಂದ ಹೊರಗುಳಿದಿರುವ ಕಾಂಗ್ರೆಸ್ ಪಕ್ಷವನ್ನು ಉತ್ತರ ಪ್ರದೇಶದಲ್ಲಿ ಪುನರುಜ್ಜೀವನಗೊಳಿಸುವ ಪ್ರಯತ್ನದಲ್ಲಿ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ 209ಕ್ಕೂ ಹೆಚ್ಚು ರ್ಯಾಲಿಗಳು ಮತ್ತು ರೋಡ್‌ಶೋಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಮತದಾರ ಮಾತ್ರ ಕಾಂಗ್ರೆಸ್ ಕಡೆ ತಿರುಗಿಯೂ ನೋಡಲಿಲ್ಲ.

ಉತ್ತರ ಪ್ರದೇಶದ ಚುನಾವಣಾ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಿದರು. ಜನರ ಸಮಸ್ಯೆಗಳ ಮೇಲೆ ಹೋರಾಡಿದರು. ಆದರೆ, ನಮ್ಮ ಶ್ರಮವನ್ನು ಮತಗಳಾಗಿ ಪರಿವರ್ತಿಸಲು ನಮಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಪ್ರತಿಪಕ್ಷವಾಗಿ ತನ್ನ ಕರ್ತವ್ಯವನ್ನು ಮುಂದುವರಿಸುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

ಗಾಂಧಿಗಳು ನಾಯಕತ್ವದಿಂದ ಇಳಿದು ಬೇರೆಯವರಿಗೆ ಅವಕಾಶ ಕೊಡುವ ಸಮಯ ಬಂದಿದೆ; ಕಪಿಲ್ ಸಿಬಲ್ ಟೀಕೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್