AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಟೀ ತೋಟದಲ್ಲಿ ಕಾರ್ಮಿಕರ ಜತೆ ಪ್ರಿಯಾಂಕಾ ಗಾಂಧಿ ಝುಮುರ್ ನೃತ್ಯ

Assam Assembly Elections 2021: ಅಸ್ಸಾಂನ ಟೀ ತೋಟಗಳಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳು ಹೆಚ್ಚಾಗಿ ಶರತ್ಕಾಲದ ತಮ್ಮ ಸಾಂಪ್ರದಾಯಿಕ ಹಬ್ಬಗಳಲ್ಲಿ ಝುಮುರ್ ನೃತ್ಯ ಮಾಡುತ್ತಾರೆ.

ಅಸ್ಸಾಂ ಟೀ ತೋಟದಲ್ಲಿ ಕಾರ್ಮಿಕರ ಜತೆ ಪ್ರಿಯಾಂಕಾ ಗಾಂಧಿ ಝುಮುರ್ ನೃತ್ಯ
ಟೀ ಕಾರ್ಮಿಕ ಹೆಣ್ಣುಮಕ್ಕಳ ಜತೆ ಪ್ರಿಯಾಂಕಾ ಗಾಂಧಿ
Follow us
guruganesh bhat
|

Updated on:Mar 01, 2021 | 6:39 PM

ಗುವಾಹತಿ: ಅಸ್ಸಾಂ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದೆ. ಇನ್ನೂಂದು ತಿಂಗಳಲ್ಲಿ ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ವಿಧವಿಧವಾಗಿ ಪ್ರಚಾರ ಪ್ರಾರಂಭಿಸಿವೆ. ಅಸ್ಸಾಂ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾ ಗಾಂಧಿ ವಾದ್ರಾ ಅಸ್ಸಾಂನ ಸ್ಥಳೀಯ ಸಂಸ್ಕೃತಿ- ಸಂಪ್ರದಾಯಗಳನ್ನು ಅರಿಯುತ್ತಲೇ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಸ್ಸಾಂನ ಚಹಾ ತೋಟದ ಕಾರ್ಮಿಕರ ಸಾಂಪ್ರದಾಯಿಕ ನೃತ್ಯ ಝುಮುರ್​ಗೆ ಹೆಜ್ಜೆ ಹಾಕಿದ್ದಾರೆ ಕಾಂಗ್ರೆಸ್ ನಾಯಕಿ. ಚುನಾವಣಾ ಪ್ರಚಾರದ ಹೆಸರಲ್ಲಿ ಸಾಂಪ್ರದಾಯಿಕ ನೃತ್ಯವೊಂದು ಜಗತ್ತಿನ ಗಮನ ಸೆಳೆದಿದೆ.

ಝುಮುರ್ ನೃತ್ಯಕ್ಕೆ ಅಸ್ಸಾಂನ ಟೀ ತೋಟದ ಕಾರ್ಮಿಕರ ಬದುಕಲ್ಲಿ ಇರುವ ಮಹತ್ವ ಅಪಾರ. ಟೀ ತೋಟಗಳಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳು ಹೆಚ್ಚಾಗಿ ಶರತ್ಕಾಲದ ತಮ್ಮ ಸಾಂಪ್ರದಾಯಿಕ ಹಬ್ಬಗಳಲ್ಲಿ ಝುಮುರ್ ನೃತ್ಯ ಮಾಡುತ್ತಾರೆ. ಅಸ್ಸಾಂ ಪ್ರವಾಸದಲ್ಲಿರುವ 49 ವರ್ಷದ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಟೀ ಕಾರ್ಮಿಕ ಜತೆ ಹೆಜ್ಜೆಹಾಕಿದ್ದಾರೆ. ಕೆಂಪು-ಬಿಳಿ ಬಣ್ಣದ ಸೀರೆ ಧರಿಸಿದ್ದ ಟೀ ತೋಟದ ಸ್ಥಳೀಯ ಕಾರ್ಮಿಕ ಹೆಣ್ಣುಮಕ್ಕಳು ಪ್ರಿಯಾಂಕಾ ಗಾಂಧಿ ವಾದ್ರಾ ಜತೆ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ಝುಮುರ್ ನೃತ್ಯ ಪ್ರಕಾರ ಪಶ್ಚಿಮ ಬಂಗಾಳದ ಕೆಲ ಭಾಗಗಳಲ್ಲೂ ಕಂಡುಬರುತ್ತದೆ.

ಅಸ್ಸಾಂನ ಪ್ರಸಿದ್ಧ ಕಾಮಾಕ್ಯಾ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಲಖಿಂಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ತಮಿಳುನಾಡಲ್ಲಿ ರಾಹುಲ್ ಗಾಂಧಿ ನೃತ್ಯ ತಮಿಳುನಾಡಿನ ಮುಳಗುಮೂಡು ಸೇಂಟ್ ಜಾಸೆಫ್ಸ್ ಮೆಟ್ರಿಕ್ಯುಲೇಷನ್ ಹೈಯರ್ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ಜುಡೊ ಪಟು ಮೆರೊಲಿನ್ ಶೇಣಿಗಾ ರಾಹುಲ್ ಅವರನ್ನು ಪುಷ್ ಅಪ್ ಚಾಲೆಂಜ್​ಗೆ ಆಹ್ವಾನಿಸಿದ್ದಾರೆ. ವಿದ್ಯಾರ್ಥಿನಿಯ ಸವಾಲಿಗೆ ನಗೆ ಬೀರಿದ ರಾಹುಲ್ ಮೈಕ್ ಬದಿಗಿಟ್ಟು ವೇದಿಕೆಯಲ್ಲಿ ಪುಷ್ ಅಪ್ ಮಾಡಿದ್ದಾರೆ. ಸಭಿಕರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದು, ಆಕೆ ಗೆದ್ದಳು ಎಂದು ರಾಹುಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿ ಜತೆ ಪುಷ್ ಅಪ್ ಮಾಡುವ ವಿಡಿಯೊವನ್ನು ರಾಹುಲ್ ಗಾಂಧಿ ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

ಎಂದು ನಡೆಯಲಿದೆ ಚುನಾವಣೆ? ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ. ದೇಶ ಗೆಲ್ಲುವ ಹುಮ್ಮಸ್ಸಿನಲ್ಲಿ ಬಿಜೆಪಿಯಿದ್ದರೆ, ಕಾಂಗ್ರೆಸ್​ಗೆ ಈಗ ಅಸ್ತಿತ್ವ ಸಾಬೀತುಪಡಿಸಿಕೊಳ್ಳುವ ತವಕ. ರಾಜಕಾರಣದಲ್ಲಿ ನಮ್ಮ ಮಹತ್ವ ಕಡಿಮೆಯಾಗಿಲ್ಲ ಎಂದು ಸಾರಿಹೇಳಬೇಕಾದ ಅನಿವಾರ್ಯತೆ ಸ್ಥಳೀಯ ಪಕ್ಷಗಳದ್ದು. ಭೌಗೋಳಿಕವಾಗಿಯೂ ಈ ಚುನಾವಣೆ ಮಹತ್ವದ್ದು. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಆಚೆಗೆ ಪ್ರಭಾವ ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿರುವ ಬಿಜೆಪಿಗೆ ಪುದುಚೇರಿ, ತಮಿಳುನಾಡು ಬಹುಮುಖ್ಯ.

ಬಿಜೆಪಿಯ ಹಿಂದಿನ ಆವೃತ್ತಿ ಎನಿಸಿದ್ದ ಜನಸಂಘದ ಸಂಸ್ಥಾಪಕರಾದ ಶ್ಯಾಂ ಪ್ರಸಾದ್ ಮುಖರ್ಜಿಯವರ ತವರು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಶತಾಯಗತಾಯ ಕಮಲ ಅರಳಿಸಲೇಬೇಕು ಎಂಬ ದೃಢ ಸಂಕಲ್ಪದೊಂದಿಗೆ ಬಿಜೆಪಿ ಅಭಿಯಾನ ನಡೆಸಿದೆ. ‘ಪಶ್ಚಿಮ ಬಂಗಾಳದಲ್ಲಿ ಗುಜರಾತಿಗಳ ಆಳ್ವಿಕೆಗೆ ಅವಕಾಶ ಕೊಡುವುದಿಲ್ಲ’ ಎಂದು ದೀದಿಯೂ ಸೆಡ್ಡು ಹೊಡೆದಿದ್ದಾರೆ.

ಬೋಡೋಲ್ಯಾಂಡ್ ಪೀಪಲ್ಸ್​​ ಫ್ರಂಟ್ ನಡೆ ಬದಲು​ ಈ ಬಗ್ಗೆ ಬಿಪಿಎಫ್ ನಾಯಕ ಹಗ್ರಾಮ ಮೊಹಿಲಾರಿ ಫೇಸ್​ಬುಕ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಶಾಂತಿ, ಐಕ್ಯತೆ ಮತ್ತು ಅಭಿವೃದ್ಧಿ ಕೆಲಸ ಮಾಡಲು ಮತ್ತು ಅಸ್ಸಾಂಅನ್ನು ಭ್ರಷ್ಟಾಚಾರದಿಂದ ಮುಕ್ತಮಾಡಿ ಸ್ಥಿರವಾದ ಸರ್ಕಾರವನ್ನು ತರಲು, ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್​ ನೇತೃತ್ವದ ಮಹಾಜತ್ ಮೈತ್ರಿಕೂಟದೊಂದಿಗೆ ಕೈಜೋಡಿಸಲು ನಿರ್ಧರಿಸಿದೆ. ಬಿಪಿಎಫ್ ಇನ್ನು ಮುಂದೆ ಬಿಜೆಪಿಯೊಂದಿಗೆ ಸ್ನೇಹ ಅಥವಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

2005ರಲ್ಲಿ ಬೋಡೋಲ್ಯಾಂಡ್ ಪೀಪಲ್ಸ್​​ ಫ್ರಂಟ್​ ಸ್ಥಾಪನೆಗೊಂಡಿತ್ತು. ಇದೊಂದು ಸ್ಥಳೀಯ ಪಕ್ಷವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಪಿಎಫ್​ 126 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಪಿಎಫ್​ ಗೆದ್ದಿತ್ತು. ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಇದನ್ನೂ ಓದಿ: Assam Assembly Elections 2021: ಅಸ್ಸಾಂ ಉಳಿಸಿ ಅಭಿಯಾನದ ವಿಜೇತರಿಗೆ ಕಾಂಗ್ರೆಸ್​ನಿಂದ ಐಫೋನ್, ನಗದು ಬಹುಮಾನ

PM Modi in Assam: ಅಸ್ಸಾಂನಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಿಸಲಾಗುವುದು: ನರೇಂದ್ರ ಮೋದಿ

Published On - 6:13 pm, Mon, 1 March 21

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ